Karnataka Weather: ದಾವಣಗೆರೆ, ಹಾಸನ, ಚಾಮರಾಜನಗರದಲ್ಲಿ ದಟ್ಟೈಸಿದ ಚಳಿ; ಕಲಬುರಗಿಯಲ್ಲಿ ಏರಿದ ಬಿಸಿಲು, ಬೆಂಗಳೂರಲ್ಲಿ ಹೀಗಿದೆ ಹವಾಮಾನ
Karnataka Weather: ಕರ್ನಾಟಕದಲ್ಲಿ ಎರಡು ವಾರದಿಂದ ಬಿಸಿಲ ಕಾವು ಏರಿಕೆಯಾಗುತ್ತಿದ್ದರೂ ಬೆಳಗಿನ ಚಳಿಯ ಪ್ರಮಾಣದಲ್ಲಿ ಭಾರೀ ಕುಸಿತ ಕಂಡಿದೆ. ಮಂಗಳವಾರದ ಹವಾಮಾನ ವರದಿ ಇಲ್ಲಿದೆ.

Karnataka Weather: ಕರ್ನಾಟಕದ ಬಹುತೇಕ ಎಲ್ಲಾ ಕಡೆಗಳಲ್ಲಿ ಎರಡು ವಾರಗಳಿಂದ ಬಿಸಿಲ ವಾತಾವರಣ ಬಿರುಸುಗೊಳ್ಳತೊಡಗಿದೆ. ಉತ್ತರ, ಮಧ್ಯ, ಕರಾವಳಿ ಕರ್ನಾಟಕದ ಜತೆಗೆ ಬೆಂಗಳೂರು ಹಾಗೂ ಹಳೆ ಮೈಸೂರು ಭಾಗದಲ್ಲಿ ನಿಧಾನವಾಗಿ ಬಿಸಿಲ ಕಾವು ಏರತೊಡಗಿದೆ. ಇದರ ನಡುವೆ ಬೆಳಗಿನ ವೇಳೆ ಹಲವು ಕಡೆ ಚಳಿ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದರೂ ಮೂರ್ನಾಲ್ಕು ದಿನದಿಂದ ಕೆಲವು ಜಿಲ್ಲೆಗಳ ಕನಿಷ್ಠ ಉಷ್ಣಾಂಶದಲ್ಲಿ ದಿಢೀರ್ ಕುಸಿತ ಕಂಡಿದೆ. ಮಂಗಳವಾರ ಬೆಳಿಗ್ಗೆಯೂ ದಟ್ಟ ಚಳಿಯ ಅನುಭವ ಆಯಿತು. ಮಧ್ಯ ಕರ್ನಾಟಕದ ದಾವಣಗೆರೆ, ಮಲೆನಾಡು ಭಾಗದ ಹಾಸನ, ಚಿಕ್ಕಮಗಳೂರು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬೆಳಗ್ಗಿನ ಹೊತ್ತಿನಲ್ಲಿ ಚಳಿಯನ್ನು ಜನ ಅನುಭವಿಸಿದರು. ಆನಂತರ ನಿಧಾನವಾಗಿ ಬಿಸಿಲ ಪ್ರಮಾಣ ಏರಲಿದೆ. ಬೆಂಗಳೂರಿನಲ್ಲೂ ಭಾರೀ ಬಿಸಿಲ ವಾತಾವರಣವಂತೂ ಇಲ್ಲ. ಬೆಳಿಗ್ಗೆ ಚಳಿಯಂತೂ ಇತ್ತು.
ಚಳಿ ಬಿಸಿಲ ಅನುಭವ
ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮಂಗಳವಾರವೂ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ದಟ್ಟವಾದ ಮಂಜು ಇರುವ ಸಾಧ್ಯತೆಗಳು ಹೆಚ್ಚಿವೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಇರಲಿದೆ. ಚಳಿ ಹಾಗೂ ಬಿಸಿಲ ಅನುಭವ ಹಲವು ಭಾಗಗಳಲ್ಲಿ ಆಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆ ಕಾಣಬಹುದು. ಆದರೆ ದಕ್ಷಿಣ ಒಳನಾಡಿನಲ್ಲಿ ಭಾರೀ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಕೇಂದ್ರದ ಬೆಂಗಳೂರು ಪ್ರಾದೇಶಿಕ ಕೇಂದ್ರವು ತಿಳಿಸಿದೆ.
ಎಲ್ಲೆಲ್ಲಿ ಉಷ್ಣಾಂಶ ಹೇಗಿದೆ
ಕರ್ನಾಟಕದ ಹಲವು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದ ಪ್ರಮಾಣ ಹೀಗಿದೆ.
ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18.5 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ32.8 ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 17.0 ಡಿಗ್ರಿ ಸೆಲ್ಸಿಯಸ್
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 32.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16.8 ಡಿಗ್ರಿ ಸೆಲ್ಸಿಯಸ್
ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 32.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 17.5 ಡಿಗ್ರಿ ಸೆಲ್ಸಿಯಸ್
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 33.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 33.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್
ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್
ಗದಗದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.2 ಡಿಗ್ರಿ ಸೆಲ್ಸಿಯಸ್
ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 33.7 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.1 ಡಿಗ್ರಿ ಸೆಲ್ಸಿಯಸ್
ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.4ಡಿಗ್ರಿ ಸೆಲ್ಸಿಯಸ್
ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 33.9 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್
ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗದ ಆಗುಂಬೆಯಲ್ಲಿ ಗರಿಷ್ಠ ಉಷ್ಣಾಂಶ 33.9 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 14.9 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 16.6 ಡಿಗ್ರಿ ಸೆಲ್ಸಿಯಸ್
ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 29.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 11.8 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18.6 ಡಿಗ್ರಿ ಸೆಲ್ಸಿಯಸ್
ದಾವಣಗೆರೆಯಲ್ಲಿ ಗರಿಷ್ಠ ಉಷ್ಣಾಂಶ 33.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್
ಹಾಸನದಲ್ಲಿ ಗರಿಷ್ಠ ಉಷ್ಣಾಂಶ 31.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 13.1 - ಡಿಗ್ರಿ ಸೆಲ್ಸಿಯಸ್
ಚಿಂತಾಮಣಿಯಲ್ಲಿ ಗರಿಷ್ಠ ಉಷ್ಣಾಂಶ 30.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 13.6 - ಡಿಗ್ರಿ ಸೆಲ್ಸಿಯಸ್
ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 14.5 ಡಿಗ್ರಿ ಸೆಲ್ಸಿಯಸ್
ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 31.1 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್
ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15.2 ಡಿಗ್ರಿ ಸೆಲ್ಸಿಯಸ್
ಬೆಂಗಳೂರು ಹವಾಮಾನ
ಬೆಂಗಳೂರಿನ ಮುಂದಿನ ಎರಡು ದಿನಗಳಕಾಲ ಮೋಡವಿಲ್ಲದ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾನ ದಟ್ಟ ಮಂಜು ಬೀಳಬಹುದು. ಇನ್ನಷ್ಟು ಕಡೆಗಳಲ್ಲಿ ಮಂಜಿನ ಪ್ರಮಾಣ ಕಡಿಮೆ ಇರಲಿದೆ. ಎರಡೂ ದಿನದಲ್ಲೂ ಉಷ್ಣಾಂಶದ ಪ್ರಮಾಣವು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು17 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.
ಸೋಮವಾರವೂ ಬೆಂಗಳೂರಿನ ಹಲವು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯವಾಗಿತ್ತು. ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ಭಾಗದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾಗದಲ್ಲಿ ಗರಿಷ್ಠ ಉಷ್ಣಾಂಶ 30.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ , ಬೆಂಗಳೂರು ನಗರ ಭಾಗದಲ್ಲಿ ಗರಿಷ್ಠ ಉಷ್ಣಾಂಶ 30.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18.1 ಡಿಗ್ರಿ ಸೆಲ್ಸಿಯಸ್ ದಾಖಲಾಯಿತು.
