Karnataka Weather: ಚಳಿಗೆ ತತ್ತರಿಸಿದ ಕರ್ನಾಟಕ; ವಿಜಯಪುರ, ಚಿಕ್ಕಮಗಳೂರು, ಹಾವೇರಿಯಲ್ಲಿ ಕನಿಷ್ಠ ಉಷ್ಣಾಂಶ
Karnataka Weather: ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶದಲ್ಲಿ ಭಾರೀ ಕುಸಿತ ಕಂಡು ದಟ್ಟ ಚಳಿ ಮುಂದುವರಿದಿದೆ. ಬೆಂಗಳೂರಲ್ಲೂ ಚಳಿ ಇದೆ.
Karnataka Weather: ಕರ್ನಾಟಕದಲ್ಲಿ ಎರಡು ಮೂರು ದಿನಗಳಿಂದ ಚಳಿಯ ಪ್ರಮಾಣ ಹೆಚ್ಚುತ್ತಲೇ ಇದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರಿದಿದ್ದು, ಕನಿಷ್ಠ ಉಷ್ಣಾಂಶದಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಇದರಿಂದ ಬೆಳಗಿನ ಹೊತ್ತಿನಲ್ಲಿ ಚಳಿಯ ವಾತಾವರಣ ಅಧಿಕವಾಗಿದೆ. ವಿಜಯಪುರ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣ 10 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದ ಪ್ರಮಾಣವು 11ರಿಂದ 12 ಡಿಗ್ರಿಯಸ್ ಸೆಲ್ಸಿಯಸ್‌ನಷ್ಟಿದ್ದು ದಟ್ಟ ಚಳಿ ಆವರಿಸಿದೆ. ಕರಾವಳಿ ಭಾಗದಲ್ಲಿ ಮಾತ್ರ ಉಷ್ಣಾಂಶದಲ್ಲಿ ಕೊಂಚ ಹೆಚ್ಚಿದ್ದು ಚಳಿ ಪ್ರಮಾಣ ಕಡಿಮೆಯಿದೆ. ಬೆಂಗಳೂರಿನಲ್ಲಿಯೂ ನಿರಂತರವಾಗಿ ಚಳಿಯ ವಾತಾವರಣ ಕಂಡು ಬಂದಿದ್ದು, ಮಂಗಳವಾರವೂ ಅಂತದೇ ಅನುಭವ ಆಗುತ್ತಿದೆ. ಸಂಕ್ರಾಂತಿ ನಂತರ ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಬೇಸಿಗೆಕಾಲ ಶುರುವಾಗಲಿದೆ. ಇದರಿಂದ ಇನ್ನೂ ಮೂರು ವಾರ ಕಾಲ ದಟ್ಟ ಚಳಿ ಮುಂದುವರಿಯುವ ಲಕ್ಷಣಗಳಿವೆ.
ಚಳಿ ಎಲ್ಲೆಲ್ಲಿ ಎಷ್ಟಿದೆ
ಕರ್ನಾಟಕದಲ್ಲಿ ಜನವರಿ 7ರ ಮಂಗಳವಾರದಂದು ವಿಜಯಪುರ, ಬೀದರ್, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಂಜು ಬೀಳಲಿದೆ. ಉತ್ತರ ಕರ್ನಾಟಕದ ಬಯಲು ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿರುವುದು ವಿಜಯಪುರದಲ್ಲಿ. ಅಲ್ಲಿ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಕಂಡು ಬಂದಿದೆ. ದಕ್ಷಿಣ ಕರ್ನಾಟಕದ ಚಿಕ್ಕಮಗಳೂರಿನಲ್ಲೂ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಧ್ಯ ಕರ್ನಾಟಕದ ಹಾವೇರಿಯಲ್ಲಿ 10.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿಯ ಹೊನ್ನಾವರದಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಕಾರವಾರದಲ್ಲಿ 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಮಂಗಳೂರಿನಲ್ಲಿ 21.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಆಗುಂಬೆಯಲ್ಲಿ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಶಿವಮೊಗ್ಗದಲ್ಲಿ11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಮಡಿಕೇರಿಯಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಮೈಸೂರಿನಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಮಂಡ್ಯದಲ್ಲಿ 12.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ದಾವಣಗೆರೆಯಲ್ಲಿ 10.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಚಿತ್ರದುರ್ಗದಲ್ಲಿ12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಚಾಮರಾಜನಗರದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಚಿಂತಾಮಣಿಯಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ರಾಯಚೂರಿನಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಕೊಪ್ಪಳದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಕಲಬುರಗಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಗದಗದಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಧಾರವಾಡದಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಬಾಗಲಕೋಟೆಯಲ್ಲಿ 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಬೀದರ್‌ನಲ್ಲಿ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಬೆಳಗಾವಿ ನಗರದಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮುಖ್ಯವಾಗಿ ಮೋಡಗಳಲ್ಲಿದ ಆಕಾಶ ಇರಲಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಂಜು ದಟ್ಟವಾಗಿ ಆವರಿಸಲಿದೆ. ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.