Breaking News: ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ವಿದ್ಯುತ್ ದರವೂ ದುಬಾರಿ, ಪ್ರತಿ ಯೂನಿಟ್‌ಗೆ 36 ಪೈಸೆ ಏರಿಕೆ, ಕೆಇಆರ್‌ಎಸ್ ಸಮ್ಮತಿ
ಕರ್ನಾಟಕದಲ್ಲಿ ಬರುವ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 36 ಪೈಸೆ ರೂ.ಗಳನ್ನು ಏರಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರ ಆದೇಶಿಸಿದೆ.

ಬೆಂಗಳೂರು: ಈಗಾಗಲೇ ದರ ಏರಿಕೆಯಿಂದ ಕಂಗೆಟ್ಟಿರುವ ಗ್ರಾಹಕರು ವಿದ್ಯುತ್ ದರ ಏರಿಕೆಯ ಬಿಸಿಯನ್ನು ಕರ್ನಾಟಕದಲ್ಲಿ ಅನುಭವಿಸಲಿದ್ದಾರೆ. ಕರ್ನಾಟದಲ್ಲಿ 2025ರ ಏಪ್ರಿಲ್ 1ರಿಂದಲೇ ಜಾರಿಯಾಗುವಂತೆ ವಿದ್ಯುತ್ ದರವನ್ನು ಏರಿಕೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ವಿಚಾರವಾಗಿ ನಿರ್ಣಯ ಕೈಗೊಳ್ಳಲಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರ(ಕೆಇಆರ್‌ಸಿ) ದರ ಏರಿಕೆ ಆದೇಶವನ್ನು ಹೊರಡಿಸಿದೆ. ಕೆಇಆರ್‌ಸಿ ಗುರುವಾರ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್ ವಿದ್ಯುತ್ ದರವು 36 ಪೈಸೆ ಗಳಷ್ಟು ಏರಿಕೆಯಾಗಲಿದೆ. ಈ ಸಂಬಂಧ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರ ಕಳೆದ ನಾಲ್ಕು ತಿಂಗಳಿನಿಂದ ಕರ್ನಾಟಕದ ಐದು ಎಸ್ಕಾಂಗಳಲ್ಲಿ ದರ ಏರಿಕೆ ಸಂಬಂಧ ಗ್ರಾಹಕರ ಅಹವಾಲುಗಳನ್ನು ಆಲಿಸಿತ್ತು.ಈಗ ಈ ತೀರ್ಪು ನೀಡಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್‌ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ ಎಂದು ತಿಳಿಸಲಾಗಿದೆ.
ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಇಂಧನ ಇಲಾಖೆ ಮುಂದಾಗಿದ್ದರ ಪರಿಣಾಮವೇ ಈ ದರ ಏರಿಕೆಯಾಗಿದೆ. ಅಂದರೆ, ಗ್ರಾಹಕರ ಮಾಸಿಕ ಬಿಲ್ನಲ್ಲಿ ಉಲ್ಲೇಖ ಮಾಡಿ ಹೆಚ್ಚುವರಿ ದರ ವಸೂಲಿ ಮಾಡಲಾಗುತ್ತದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.
