ಕನ್ನಡ ಸುದ್ದಿ  /  ಕರ್ನಾಟಕ  /  Kedambadi Ramaiah Gowda Statue: ನ.19ಕ್ಕೆ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

Kedambadi Ramaiah Gowda statue: ನ.19ಕ್ಕೆ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

Kedambadi Ramaiah Gowda statue: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಿಸ್ತ ಶಕ 1837 ರಲ್ಲಿಯೇ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ದಿನ ನಿಗದಿಯಾಗಿದೆ. ವಿವರ ಇಲ್ಲಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌, ಜಿಲ್ಲಾಧಿಕಾರಿ, ಎಸ್‌ಪಿ ಸೇರಿ ಪ್ರಮುಖರು ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌, ಜಿಲ್ಲಾಧಿಕಾರಿ, ಎಸ್‌ಪಿ ಸೇರಿ ಪ್ರಮುಖರು ಭಾಗವಹಿಸಿದ್ದರು.

ಮಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಿ.ಶ.1837ರಲ್ಲೇ ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದವರು ಕೆದಂಬಾಡಿ ರಾಮಯ್ಯ ಗೌಡ ಅವರು. ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮ ನ.19ರಂದು ನಡೆಯಲಿದೆ.

ಟ್ರೆಂಡಿಂಗ್​ ಸುದ್ದಿ

ಇದರ ಪೂರ್ವಸಿದ್ಧತಾ ಸಭೆ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುನಿಲ್‌ ಕುಮಾರ್‌, ʻಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಲಾಗುವುದು. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಪ್ರತಿಮೆ ಸ್ಥಾಪನೆ ಎಲ್ಲಿ?

ಮಂಗಳೂರಿನ ಬಾವುಟಗುಡ್ಡೆಯಲ್ಲಿ ನ.19ರಂದು ಶನಿವಾರ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು. ಕನಿಷ್ಠ 25,000 ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಕೂಡಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವೇದಿಕೆ ಸಿದ್ದತೆ, ಊಟೋಪಚಾರ, ಕುಡಿಯುವ ನೀರು, ಶೌಚಾಲಯ, ಸಾರಿಗೆ, ಆಮಂತ್ರಣ ಸೇರಿ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳುಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿ ವರ್ಗ ದೊಡ್ಡದಿದೆ. ಅವರ ಹಾಗೂ ಅಮರ ಸುಳ್ಯ ಸಮರದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯಕ್ಷ ರಂಗಾಯಣದಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಗಳನ್ನು ಮಾಡಲಾಗಿದೆ ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

---------------------------------------------------

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಸ್ಥಳಾಂತರ

ಮಂಗಳೂರುನಗರದ ಉರ್ವಸ್ಟೋರಿನ ರೇಡಿಯೋ ಪಾರ್ಕ್ ಹತ್ತಿರದ ಶ್ರೀ.ಡಿ ದೇವರಾಜ ಅರಸು ಭವನದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಚೇರಿಯನ್ನು ಸೆಂಟ್ರಲ್ ಮಾರ್ಕೆಟ್ ಎದುರಿನ ರಸಿಕ್ ಚೇಂಬರ್ಸ್, ಎ ಟು ಝೇಡ್ ಕಟ್ಟಡದ 2ನೇ ಮಹಡಿಗೆ ಇತ್ತೀಚೆಗೆ ಸ್ಥಳಾಂತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IPL_Entry_Point