Kodagu Rains: ಕೊಡಗು ಜಿಲ್ಲೆಯಲ್ಲಿ ಐದು ತಿಂಗಳ ಅವಧಿಯಲ್ಲಿ ದುಪ್ಪಟ್ಟು ಮಳೆ, 742.06 ಮಿ.ಮೀ ದಾಖಲು
ಕನ್ನಡ ಸುದ್ದಿ  /  ಕರ್ನಾಟಕ  /  Kodagu Rains: ಕೊಡಗು ಜಿಲ್ಲೆಯಲ್ಲಿ ಐದು ತಿಂಗಳ ಅವಧಿಯಲ್ಲಿ ದುಪ್ಪಟ್ಟು ಮಳೆ, 742.06 ಮಿ.ಮೀ ದಾಖಲು

Kodagu Rains: ಕೊಡಗು ಜಿಲ್ಲೆಯಲ್ಲಿ ಐದು ತಿಂಗಳ ಅವಧಿಯಲ್ಲಿ ದುಪ್ಪಟ್ಟು ಮಳೆ, 742.06 ಮಿ.ಮೀ ದಾಖಲು

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ ಉತ್ತಮ ಮಳೆಯಾದ ಬಗ್ಗೆ ಭಾರತೀಯ ಹವಾಮಾನ ಇಲಾಖೆಯ ಸ್ಥಳೀಯ ಘಟಕವು ಮಾಹಿತಿ ನೀಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಹೆಚ್ಚಿನ ಮಳೆಯಾಗಿದೆ.

ಕೊಡಗಿನಲ್ಲಿ ಉತ್ತಮ ಮಳೆಯಾಗಿ ಎಲ್ಲೆಡೆ ಹಸಿರು ವಾತಾವರಣ ನಿರ್ಮಾಣವಾಗಿದೆ.
ಕೊಡಗಿನಲ್ಲಿ ಉತ್ತಮ ಮಳೆಯಾಗಿ ಎಲ್ಲೆಡೆ ಹಸಿರು ವಾತಾವರಣ ನಿರ್ಮಾಣವಾಗಿದೆ. (Srinidhi Srinivas)

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 742.06 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 335.10 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.08 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1074.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 464.70 ಮಿ.ಮೀ. ಮಳೆಯಾಗಿತ್ತು.ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 756.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 268.50 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 689.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 334.90 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 651.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 253.90 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 538.74 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 353.50 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ಮಳೆ ವಿವರ:

ಮಡಿಕೇರಿ ಕಸಬಾ 10,

ಸಂಪಾಜೆ 12.50,

ಭಾಗಮಂಡಲ 17.80,

ಶ್ರೀಮಂಗಲ 6.20,

ಪೊನ್ನಂಪೇಟೆ 5,

ಬಾಳೆಲೆ 6.08,

ಸೋಮವಾರಪೇಟೆ 3.20, ಶನಿವಾರಸಂತೆ 2,

ಶಾಂತಳ್ಳಿ 15 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2850.58 ಅಡಿಗಳು. ಕಳೆದ ವರ್ಷ ಇದೇ ದಿನ 2824.11 ಅಡಿಗಳು. ಇಂದಿನ ನೀರಿನ ಒಳಹರಿವು 2005 ಕ್ಯುಸೆಕ್, ಕಳೆದ ವರ್ಷ ಇದೇ ದಿನ 224 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.