ಕೊಡಗಿನ ವಿವಿಧ ಭಾಗಗಳಲ್ಲಿ ಎರಡು ದಿನ ವಿದ್ಯುತ್‌ ವ್ಯತ್ಯಯ; ಮೇ 6, 7 ರಂದು ಎಲ್ಲೆಲ್ಲಿ ಕರೆಂಟ್ ಇರೋಲ್ಲ
ಕನ್ನಡ ಸುದ್ದಿ  /  ಕರ್ನಾಟಕ  /  ಕೊಡಗಿನ ವಿವಿಧ ಭಾಗಗಳಲ್ಲಿ ಎರಡು ದಿನ ವಿದ್ಯುತ್‌ ವ್ಯತ್ಯಯ; ಮೇ 6, 7 ರಂದು ಎಲ್ಲೆಲ್ಲಿ ಕರೆಂಟ್ ಇರೋಲ್ಲ

ಕೊಡಗಿನ ವಿವಿಧ ಭಾಗಗಳಲ್ಲಿ ಎರಡು ದಿನ ವಿದ್ಯುತ್‌ ವ್ಯತ್ಯಯ; ಮೇ 6, 7 ರಂದು ಎಲ್ಲೆಲ್ಲಿ ಕರೆಂಟ್ ಇರೋಲ್ಲ

ಕೊಡಗಿನ ವಿವಿಧ ಭಾಗಗಳಲ್ಲಿ ಮೇ 6, 7ರ ಮಂಗಳವಾರ ಹಾಗೂ ಬುಧವಾರ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಮಾಹಿತಿ ನೀಡಿದೆ.

ಕೊಡಗಿನಲ್ಲಿ ಮೇ 6, 7ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.
ಕೊಡಗಿನಲ್ಲಿ ಮೇ 6, 7ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೇ 6, 7 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ( Cesc) ತಿಳಿಸಿದೆ.ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ ಮಾರ್ಗದಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅವರದಾಳು, ಕಣ್ಣಾರಳ್ಳಿ, ಕೊಡ್ಲಿಪೇಟೆ, ಬ್ಯಾಡಗೊಟ್ಟ, ನೀರುಗುಂದ, ಹೆಮ್ಮನೆ, ಬೆಸ್ಸೂರು, ಕಟ್ಟೆಪುರ, ನಿಲುವಾಗಿಲು, ಕೂಡ್ಲೂರು, ದೊಡ್ಡಬಂಡಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ಓಂಕಾರೇಶ್ವರ ಫೀಡರ್‍ನಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಕನ್ನಂಡಬಾಣೆ, ಗೌಡಸಮಾಜ, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ, ಓಂಕಾರೇಶ್ವರ ರಸ್ತೆ, ಬ್ರಾಹ್ಮಿನ್ಸ್ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಶನಿವಾರಸಂತೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಶನಿವಾರಸಂತೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಬೇಕಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1 ಹಂಡ್ಲಿ ಮಾರ್ಗದಲ್ಲಿ ಮೇ, 07 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಬೆಳ್ಳಾರಳ್ಳಿ, ಸಂಪಿಗೆದಾಳು, ಕಿತ್ತೂರು, ಮಣಗಲಿ, ಮೂದ್ರವಳ್ಳಿ, ದುಂಡಳ್ಳಿ, ಬಿಳಹ(ಬೆಂಬಳೂರು) ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.