ಕನ್ನಡ ಸುದ್ದಿ  /  ಕರ್ನಾಟಕ  /  Koppal Road Accident: ಕೊಪ್ಪಳದಲ್ಲಿ ಲಾರಿಗೆ ಇಂಡಿಕಾ‌ ಕಾರು ಡಿಕ್ಕಿ; ಸ್ಥಳದಲ್ಲಿಯೇ 6 ಮಂದಿ ಸಾವು

Koppal Road Accident: ಕೊಪ್ಪಳದಲ್ಲಿ ಲಾರಿಗೆ ಇಂಡಿಕಾ‌ ಕಾರು ಡಿಕ್ಕಿ; ಸ್ಥಳದಲ್ಲಿಯೇ 6 ಮಂದಿ ಸಾವು

Kushtagi road accident: ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಕಾರಿನ ಟೈರ್ ಸ್ಪೋಟಗೊಂಡಿದ್ದು, ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕುಷ್ಟಗಿಯಲ್ಲಿ ಲಾರಿಗೆ ಕಾರು ಡಿಕ್ಕಿ
ಕುಷ್ಟಗಿಯಲ್ಲಿ ಲಾರಿಗೆ ಕಾರು ಡಿಕ್ಕಿ

ಕುಷ್ಟಗಿ (ಕೊಪ್ಪಳ): ಲಾರಿಗೆ ಇಂಡಿಕಾ‌ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಇಂದು (ಮೇ 28, ಭಾನುವಾರ) ಸಂಜೆ ನಡೆದಿದೆ.

ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು. ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರಿನ ಟೈರ್ ಸ್ಪೋಟಗೊಂಡಿದ್ದು, ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಹೊರಗಡೆ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯಶೋಧಾ ವಂಟಿಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಮೊನ್ನೆಯಷ್ಟೇ (ಮೇ 26, ಶುಕ್ರವಾರ) ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾರಿ ವಾಹನವೊಂದು ಎರಡು ಬೈಕಗಳಿಗೆ ಡಿಕ್ಕಿ ಹೊಡೆದ ಪರಿಣಾಮ ವಾಹನದ ಚಕ್ರದಡಿ ಸಿಲುಕಿದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುದ್ದೇಬಿಹಾಳ ಪಟ್ಟಣದ ಹೊರವಲಯದ ತಂಗಡಗಿಯಲ್ಲಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಮಹಿಳೆಯ ದೇಹ ಛಿದ್ರವಾಗಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ

ಮೇ 26 ರಂದು ರಾಯಚೂರು (Raichur) ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿರುವ ಹಾಗೂ 30 ಜನ ಅಸ್ವಸ್ಥರಾಗಿರುವ ಘಟನೆ ನಡೆದಿತ್ತು. ಇದೀಗ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿಯೂ ಕಲುಷಿತ ನೀರು (contaminated water) ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಎರಡೂ ಗ್ರಾಮಗಳ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ, ತುರ್ತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್​ ಮಾಡಿ