ಕನ್ನಡ ಸುದ್ದಿ  /  ಕರ್ನಾಟಕ  /  Koppal Result: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ ಹಿಟ್ನಾಳ್‌ಗೆ ಗೆಲುವು; ಬಿಜೆಪಿಗೆ ಭಾರಿ ಮುಖಭಂಗ

Koppal Result: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ ಹಿಟ್ನಾಳ್‌ಗೆ ಗೆಲುವು; ಬಿಜೆಪಿಗೆ ಭಾರಿ ಮುಖಭಂಗ

ಕೊಪ್ಪಳ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಂದಿದೆ. ಕಾಂಗ್ರೆಸ್‌ ಕೆ ರಾಜಶೇಖರ ಬಸವರಾಜ ಹಿಟ್ನಾಳ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ ಬಸವರಾಜ ಕೆ ಶರಣಪ್ಪ 10902 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. Koppal Lok Sabha Elections Result.

ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ ಹಿಟ್ನಾಳ್‌ಗೆ ಗೆಲುವು; ಬಿಜೆಪಿಗೆ ಭಾರಿ ಮುಖಭಂಗ
ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ ಹಿಟ್ನಾಳ್‌ಗೆ ಗೆಲುವು; ಬಿಜೆಪಿಗೆ ಭಾರಿ ಮುಖಭಂಗ

ಕೊಪ್ಪಳ: ಲೋಕಸಭಾ ಚುನಾವಣೆ 2024ರ ಫಲಿತಾಂಶ ಹೊರ ಬಿದಿದ್ದೆ. ದೇಶದಲ್ಲಿ ಈ ಬಾರಿ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಕ್ಸಿಟ್‌ ಪೋಲ್‌ ಫಲಿತಾಂಶಗಳು ತಿಳಿಸಿದ್ದವು. ಆದರೆ ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ ಯಾರು ಗೆಲುವು ಸಾಧಿಸಬಹುದು ಎಂಬ ಬಗ್ಗೆ ಕುತೂಹಲ ಇರುವುದು ಸಹಜ. ಕರ್ನಾಟಕದ ಪ್ರಮುಖ ರಾಜಕೀಯ ಶಕ್ತಿಕೇಂದ್ರಗಳಲ್ಲಿ ಒಂದಾದ ಕೊಪ್ಪಳದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ ಬಸವರಾಜ ಕೆ ಶರಣಪ್ಪ (dr Basavaraj Kyavater) ಅವರ ಎದುರು ಕಾಂಗ್ರೆಸ್‌ ಅಭ್ಯರ್ಥಿ ಕೆ ರಾಜಶೇಖರ್‌ ಬಸವರಾಜ್‌ ಹಿಟ್ನಾಳ್‌ (K Rajashekar basavaraj hitnal) ಅವರನ್ನ ಕಣಕ್ಕೆ ಇಳಿಸಲಾಗಿತ್ತು. ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಇದು ಬಿಜೆಪಿ ಭದ್ರಕೋಟೆಗಳಲ್ಲಿ ಒಂದು ಎನ್ನಿಸಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಒಂದು ಬಾರಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೆ ಈ ಬಾರಿ ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ್‌ ಹಿಟ್ನಾಳ್‌ ಗೆಲುವು ಸಾಧಿಸಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಗಂಗಾವತಿ, ಕನಕಗಿರಿ, ಯಲಬುರ್ಗಾ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ ಮತ್ತು ಬಳ್ಳಾರಿ ಜಿಲ್ಲೆಯ ಶಿರಗುಪ್ಪಾ ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಸಿ.ಶರಣ ಬಸಪ್ಪ, ಅಣ್ಣೋಜಿ ರಾವ್. ಜಿ, ಡಿ ದುರ್ಗಾ ಪ್ರಸಾದ್ ಬ್ಯಾಟರಾಯನಾಜಿ, ಇಮಾಮಸಾಬ್ ಜಂಗ್ಲಿಸಾಬ್ ಮುಲ್ಲಾ ಮೊದಲಾವರು ಇತರ ಪಕ್ಷಗಳಿಂದ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕೊಪ್ಪಳ ಲೋಕಸಭೆ ಎಲೆಕ್ಷನ್ ಕ್ವಿಕ್‌ ಲುಕ್‌

ಲೋಕಸಭಾ ಕ್ಷೇತ್ರದ ಹೆಸರು: ಕೊಪ್ಪಳ

ಅಭ್ಯರ್ಥಿಯ ಹೆಸರು ಮತ್ತು ಪಡೆದ ಮತಗಳು

ಕೆ ರಾಜಶೇಖರ್ ಬಸವರಾಜ ಹಿಟ್ನಾಳ್ (ಕಾಂಗ್ರೆಸ್‌): 3,19,901 ಮತಗಳು

ಡಾ ಬಸವರಾಜ ಕೆ ಶರಣಪ್ಪ (ಬಿಜೆಪಿ): 3,08, 993 ಮತಗಳು

ಚುನಾವಣಾ ಕಣ: ಕೊಪ್ಪಳ ಲೋಕಸಭಾ ಕ್ಷೇತ್ರ

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಎನ್ನಿಸಿಕೊಂಡಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರವು ಇತ್ತೀಚಿನ ವರ್ಷಗಳಲ್ಲಿ ಕಮಲದ ತೆಕ್ಕೆಗೆ ಹೊರಳಿದೆ. 2009, 2014 ಹಾಗೂ 2019ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಇಲ್ಲಿ ಗೆಲುವು ಸಾಧಿಸಿತ್ತು. ಕೊಪ್ಪಳ ಕ್ಷೇತ್ರಕ್ಕೆ ಇಲ್ಲಿಯವರೆಗೆ 17 ಬಾರಿ ಚುನಾವಣೆ ನಡೆದಿದ್ದು, 9 ಬಾರಿ ಕಾಂಗ್ರೆಸ್‌ ಗೆದ್ದಿದ್ದರೆ, 3 ಬಾರಿ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿತ್ತು. ಜೆಡಿಎಸ್‌ ಕೂಡ 2 ಬಾರಿ ಗೆಲುವು ಸಾಧಿಸಿತ್ತು. ಒಮ್ಮೆ ಪಕ್ಷೇತರ ಅಭ್ಯರ್ಥಿಯು ಇಲ್ಲಿ ಗೆಲುವು ಸಾಧಿಸಿದ್ದರು. 2019 ಬಿಜೆಪಿ ಸಂಸದ ಸಂಗಣ್ಣ ಕರಡಿ ಗೆಲುವು ಸಾಧಿಸಿದ್ದರು.

Disclaimer: ಗಮನಿಸಿ; ಇದು ಮತ ಎಣಿಕೆ ಕೇಂದ್ರಗಳಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಪ್ರಕಟಿಸಿದ ಬರಹ. ಚುನಾವಣಾ ಆಯೋಗವು ಅಧಿಕೃತವಾಗಿ ಅಂಕಿಅಂಶಗಳನ್ನು ಪ್ರಕಟಿಸಿದ ನಂತರ ಮತಗಳ ಸಂಖ್ಯೆ ಏರುಪೇರಾಗಬಹುದು. ಅಂತಿಮ ಫಲಿತಾಂಶದ ವಿವರವನ್ನು ಇದೇ ಬರಹದಲ್ಲಿ ಅಪ್‌ಡೇಟ್ ಮಾಡಲಾಗುವುದು.

ಟಿ20 ವರ್ಲ್ಡ್‌ಕಪ್ 2024