ಕನ್ನಡ ಸುದ್ದಿ  /  Karnataka  /  Koti Kanta Gayana: Nanna Nadu Nanna Hadu Koti Kanta Gayana In Front Of Mysore Palace; Watch The Video Report Here

Koti Kanta Gayana: ಮೈಸೂರು ಅರಮನೆ ಎದುರು ಕೋಟಿ ಕಂಠ ಗಾಯನ; ವಿಡಿಯೋ, ವರದಿ ಇಲ್ಲಿದೆ ನೋಡಿ

Koti Kanta Gayana: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮೈಸೂರು ಅರಮನೆ ಎದುರು ಬೃಹತ್‌ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಸಂಸದ ಪ್ರತಾಪ ಸಿಂಹ ಮತ್ತು ಇತರೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮೈಸೂರು ಅರಮನೆ ಎದುರು ಬೃಹತ್‌ ವೇದಿಕೆಯಲ್ಲಿ ಕೋಟಿ ಕಂಠ ಗಾಯನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಸಂಸದ ಪ್ರತಾಪ ಸಿಂಹ ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದರು.
ಮೈಸೂರು ಅರಮನೆ ಎದುರು ಬೃಹತ್‌ ವೇದಿಕೆಯಲ್ಲಿ ಕೋಟಿ ಕಂಠ ಗಾಯನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಸಂಸದ ಪ್ರತಾಪ ಸಿಂಹ ಮತ್ತು ಇತರೆ ಜನಪ್ರತಿನಿಧಿಗಳು ಭಾಗವಹಿಸಿದರು.

ಮೈಸೂರು: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಅಭೂತ ಪೂರ್ವ ಸ್ಪಂದನೆ ಸಿಕ್ಕಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರು ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡುತ್ತ ಈ ರೀತಿ ಪ್ರತಿಕ್ರಿಯಿಸಿದರು. ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕ್ರಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಕನ್ನಡ ಸಂಘಗಳ ಸದಸ್ಯರು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಯಶಸ್ವಿಯಾಗಿ ಕಾರ್ಯಕ್ರಮ ನೆರವೇರಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.

ಮೈಸೂರು ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಜೊತೆಗೆ ಉದಯವಾಗಲಿ ನಮ್ಮ ಚೆಲುವ ನಾಡು, ಕನ್ನಡ ಡಿಂಡಿಮ, ಹಚ್ಚೆವು ಕನ್ನಡದ ದೀಪ, ವಿಶ್ವ ವಿನೂತನ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಪೂರ್ಣಿಮಾ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹೇಮಂತ್ ಕುಮಾರ್, ಸಂಗೀತ ವಿವಿ ಕುಲಪತಿ ರವಿಕುಮಾರ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದು, ಹಾಡಿಗೆ ದನಿಗೂಡಿಸಿದರು.

ಇದೇ ರೀತಿ, ಕಾರ್ಯಕ್ರಮದಲ್ಲಿ ನಗರದ ನಾನಾ ಭಾಗಗಳಿಂದ ಆಗಮಿಸಿದ್ದ ನಾನಾ ಕನ್ನಡ ಸಂಘಟನೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಹಸ್ರಾರು ಸಂಖ್ಯೆಯಲ್ಲಿದ್ದ ಸಾರ್ವಜನಿಕರು ಸಹ ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದರು.

ಕೋಟಿ ಕಂಠ ಗಾಯನದ ವಿಡಯೋ ಇಲ್ಲಿದೆ ನೋಡಿ

ವಿವಿಧೆಡೆ ಕೋಟಿ ಕಂಠ ಗಾಯನ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 50,000 ಜನರು ಆಯ್ದ 6 ಹಾಡುಗಳನ್ನು ಸಾಮೂಹಿಕವಾಗಿ ಹಾಡಿದ್ದಾರೆ. ವಿಧಾನಸೌಧದ ಮೆಟ್ಟಿಲು, ಎಲ್ಲ ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು, ಆಟೊ ತಂಗುದಾಣಗಳು, ಕಾರಾಗೃಹ, ಐಟಿಬಿಟಿ ಸಂಸ್ಥೆಗಳು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಲಾಲ್​ಬಾಗ್​ಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.

ಏನಿದು ಕೋಟಿ ಕಂಠ ಗಾಯನ?

ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, ಇಂದು ಕೋಟಿ ಕಂಠಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಿದೆ. ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿತ್ತು.

ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್‍ನಲ್ಲಿ 1.1ಕೋಟಿ ಹೆಸರು ನೋಂದಣಿಯಾಗಿತ್ತು. ಇದೀಗ ಈ ಸಂಖ್ಯೆ1.10 ಕೋಟಿಗೆ ತಲುಪಿದೆ. ಮುಂದಿನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ನಿನ್ನೆ ಹೇಳಿದ್ದರು.

ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ವಿಶೇಷ

1,12,00,000 - ನೋಂದಣಿ ಮಾಡಿಸಿದವರ ಸಂಖ್ಯೆ

10,000 - ಸ್ಥಳಗಳಲ್ಲಿ ಗಾಯನಕ್ಕೆ ವೇದಿಕೆ

46 ದೇಶಗಳಿಂದ ನೋಂದಣಿ

26 ರಾಜ್ಯಗಳ ಕನ್ನಡಿಗರು

19,000 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು

ಯಾವ ಆರು ಹಾಡುಗಳು

1. ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ

2. ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು

3. ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ

4. ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ

5. ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ

6. ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು

IPL_Entry_Point