ಕನ್ನಡ ಸುದ್ದಿ  /  Karnataka  /  Kpsc Recruitment Asst Electrical Inspector In Cei Apply 30 Post

KPSC Recruitment: ವಿದ್ಯುತ್‌ ಪರಿವೀಕ್ಷಣಾಲಯದಲ್ಲಿ ಗ್ರೂಪ್‌ ಬಿ ಹುದ್ದೆಗಳ ನೇಮಕ, ಇಲ್ಲಿದೆ ಸಂಪೂರ್ಣ ವಿವರ

ಕರ್ನಾಟಕ ಲೋಕ ಸೇವಾ ಆಯೋಗವು ಮುಖ್ಯ ವಿದ್ಯುತ್‌ ಪರಿವೀಕ್ಷಣಾಲಯದಲ್ಲಿ ಖಾಲಿ ಇರುವ 30 ಸಹಾಯಕ ವಿದ್ಯುತ್‌ ಪರಿವೀಕ್ಷಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆ ಪ್ರಕ್ರಿಯೆ, ವಿದ್ಯಾರ್ಹತೆ, ವೇತನ ಸೇರಿದಂತೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕೆಪಿಎಸ್‌ಸಿ
ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಮುಖ್ಯ ವಿದ್ಯುತ್‌ ಪರಿವೀಕ್ಷಣಾಲಯದಲ್ಲಿ ಖಾಲಿ ಇರುವ 30 ಸಹಾಯಕ ವಿದ್ಯುತ್‌ ಪರಿವೀಕ್ಷಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆ ಪ್ರಕ್ರಿಯೆ, ವಿದ್ಯಾರ್ಹತೆ, ವೇತನ ಸೇರಿದಂತೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 25 ಜುಲೈ 2022
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಆಗಸ್ಟ್‌ 2022
 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 24 ಆಗಸ್ಟ್‌ 2022

ಅರ್ಜಿ ಸಲ್ಲಿಕೆ ಹೇಗೆ?

ಕೆಪಿಎಸ್‌ಸಿ ಗ್ರೂಪ್‌ ಸಿ ಉಳಿಕೆ ಮೂಲವೃಂದದ ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್‌ಲೈನ್‌ನಲ್ಲಿ ಭಾವಚಿತ್ರ, ಸಹಿ, ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳನ್ನು ಅಪ್ಲೋಡ್‌ ಮಾಡಿದ ನಂತರ ಅರ್ಜಿ ಶುಲ್ಕವನ್ನು ಯಾವುದೇ ಕಾಮನ್‌ ಸರ್ವೀಸ್‌ ಸೆಂಟರ್‌ಗಳಲ್ಲಿ, ನೆಟ್‌ಬ್ಯಾಂಕಿಂಗ್‌, ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸಿದೆ, ದಾಖಲೆ, ಭಾವಚಿತ್ರ, ಸಹಿಯನ್ನು ಅಪ್ಲೋಡ್‌ ಮಾಡದಿರುವ, ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್‌ ಮಾಡಿರುವ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್‌ಸಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿ ಶುಲ್ಕ ಎಷ್ಟು?

ಕೆಪಿಎಸ್‌ಸಿಯ ಈ ಗ್ರೂಪ್‌ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಒಬಿಸಿ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಮಾಜಿ ಸೈನಿಕ ಅಭ್ಯರ್ಥಿಗಳಾಗಿದ್ದಲ್ಲಿ ೫೦ ರೂ. ಅರ್ಜಿ ಶುಲ್ಕ ಪಾವತಿಸಿದರೆ ಸಾಕು. ಎಸ್‌ಸಿ/ಎಸ್‌ಟಿ, ಪ್ರವರ್ಗ ೧ ಮತ್ತು ಒಬಿಸಿ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಆದರೆ, ಎಲ್ಲಾ ಅಭ್ಯರ್ಥಿಗಳು ಪ್ರೊಸೆಸಿಂಗ್‌ ಶುಲ್ಕ ೩೫ ರೂಪಾಯಿಯನ್ನು ಕಡ್ಡಾಯವಾಗಿ ಪಾವತಿಸಬೇಕು.

ವಿದ್ಯಾರ್ಹತೆ ಏನು?

ಮುಖ್ಯ ವಿದ್ಯುತ್‌ ಪರಿವೀಕ್ಷಣಾಲಯದಲ್ಲಿ (ಚೀಫ್‌ ಎಲೆಕ್ಟ್ರಿಕಲ್‌ ಇನ್‌ಸ್ಪೆಕ್ಟ್ರೊರೇಟ್‌)ನಲ್ಲಿ ಸಹಾಯಕ ವಿದ್ಯುತ್‌ ಪರಿವೀಕ್ಷಕರು (ಅಸಿಸ್ಟೆಂಟ್‌ ಎಲೆಕ್ಟ್ರಿಕಲ್‌ ಇನ್‌ಸ್ಪೆಕ್ಟರ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಅಥವಾ ಎಲೆಕ್ಟ್ರಿಕಲ್‌ ಆಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ ಎಷ್ಟು?

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ೧೮ ವರ್ಷ ಮತ್ತು ಗರಿಷ್ಠ ೩೫ ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ೩ ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ೫ ವರ್ಷ ಸಡಿಲಿಕೆ ನೀಡಲಾಗುತ್ತದೆ.

ವೇತನ ಎಷ್ಟು?

41100- 83900 ರೂ. ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವೆಗಳು ನಿಯಮಗಳ ಪ್ರಕಾರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ. ಕನ್ನಡ ಭಾಷಾ ಪರೀಕ್ಷೆಯ ಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ೧೫೦ ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಹೊಂದಿರುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ವೆಬ್‌ಸೈಟ್‌ಗೆ (https://kpsc.kar.nic.in/) ಭೇಟಿ ನೀಡಬಹುದು.

IPL_Entry_Point

ವಿಭಾಗ