ಅಡ್ಡಹೊಳೆ: ಧರ್ಮಸ್ಥಳ - ಬೆಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ, 12 ಪ್ರಯಾಣಿಕರಿಗೆ ಗಾಯ
ಕನ್ನಡ ಸುದ್ದಿ  /  ಕರ್ನಾಟಕ  /  ಅಡ್ಡಹೊಳೆ: ಧರ್ಮಸ್ಥಳ - ಬೆಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ, 12 ಪ್ರಯಾಣಿಕರಿಗೆ ಗಾಯ

ಅಡ್ಡಹೊಳೆ: ಧರ್ಮಸ್ಥಳ - ಬೆಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ, 12 ಪ್ರಯಾಣಿಕರಿಗೆ ಗಾಯ

ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಡ್ಡಹೊಳೆ ಸಮೀಪ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 12 ಪ್ರಯಾಣಿಕರು ಗಾಯಗೊಂಡರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಅಡ್ಡಹೊಳೆ ಸಮೀಪ ಡಿವೈಡರ್‌ಗೆ ಧರ್ಮಸ್ಥಳ - ಬೆಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ 12 ಪ್ರಯಾಣಿಕರಿಗೆ ಗಾಯಗೊಂಡರು.
ಅಡ್ಡಹೊಳೆ ಸಮೀಪ ಡಿವೈಡರ್‌ಗೆ ಧರ್ಮಸ್ಥಳ - ಬೆಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ 12 ಪ್ರಯಾಣಿಕರಿಗೆ ಗಾಯಗೊಂಡರು. (HSM)

ಮಂಗಳೂರು: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್‌ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ರಾತ್ರಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ.

ಅಡ್ಡಹೊಳೆ ಡಿವೈಡರ್‌ಗೆ ಧರ್ಮಸ್ಥಳ ಬೆಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ

ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್‌ಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಹಾಸನದ ಪಾಳ್ಯ ನಿವಾಸಿ ದಂಪತಿಗಳಾದ ಚಂದ್ರು(68) ಹಾಗೂ ಅವರ ಪತ್ನಿ ಸರೋಜಾ (60) ಹಾಗೂ ಇನ್ನೊಬ್ಬರು ಪ್ರಯಾಣಿಕರು ಸೇರಿ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದಂತೆ ಬಸ್ಸಿನ ಚಾಲಕ ಸಹಿತ 10 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner