Kittur Car Accident: ಕಿತ್ತೂರು ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ; ಸಚಿವೆ ಮತ್ತು ಅವರ ಸಹೋದರ ಆಸ್ಪತ್ರೆಗೆ ದಾಖಲು
ಕನ್ನಡ ಸುದ್ದಿ  /  ಕರ್ನಾಟಕ  /  Kittur Car Accident: ಕಿತ್ತೂರು ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ; ಸಚಿವೆ ಮತ್ತು ಅವರ ಸಹೋದರ ಆಸ್ಪತ್ರೆಗೆ ದಾಖಲು

Kittur Car Accident: ಕಿತ್ತೂರು ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ; ಸಚಿವೆ ಮತ್ತು ಅವರ ಸಹೋದರ ಆಸ್ಪತ್ರೆಗೆ ದಾಖಲು

Laxmi Hebbalkar Car Accident: ಕಿತ್ತೂರು ಸಮೀಪ ಇಂದು (ಜನವರಿ 14) ಮುಂಜಾನೆ 5 ಗಂಟೆ ಸುಮಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಬೆಳಗಾವಿ ಜಿಲ್ಲೆ ಕಿತ್ತೂರು ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಯಾಯಿತು. ಅಪಘಾತದಲ್ಲಿ ಸಚಿವೆ ಹೆಬ್ಬಾಳ್ಕರ್ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬೆಳಗಾವಿ ಜಿಲ್ಲೆ ಕಿತ್ತೂರು ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಯಾಯಿತು. ಅಪಘಾತದಲ್ಲಿ ಸಚಿವೆ ಹೆಬ್ಬಾಳ್ಕರ್ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Laxmi Hebbalkar Car Accident: ಬೆಳಗಾವಿ ಜಿಲ್ಲೆ ಕಿತ್ತೂರು ಸಮೀಪ ಅಂಬಡಗಟ್ಟಿ ಎಂಬಲ್ಲಿ ಇಂದು (ಜನವರಿ 14) ಮುಂಜಾನೆ 5 ಗಂಟೆ ಸುಮಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ಕಿತ್ತೂರು ಸಮೀಪ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸಿದ್ದರು. ಅವರ ಕಾರು ಇಂದು ಮುಂಜಾನೆ 5 ಗಂಟೆ ಸುಮಾರಿ ಕಿತ್ತೂರು ಸಮೀಪ ಅಂಬಡಗಟ್ಟಿ ತಲುಪಿದಾಗ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಗಿಸಿ ನಿನ್ನೆ (ಜನವರಿ 13) ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಸಚಿವರು ಪ್ರಯಾಣಿಸಿದ್ದರು. ಅವರ ಜತೆಗೆ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕೂಡ ಇದ್ದರು. ಇಬ್ಬರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಹೇಗಾಯಿತು

ಬೆಂಗಳೂರಿನಿಂದ ತಡರಾತ್ರಿ ಹೊರಟು ಬೆಳಗಾವಿಯಲ್ಲಿರುವ ತಮ್ಮ ನಿವಾಸದ ಕಡೆಗೆ ಹೋಗುತ್ತಿದ್ದಾಗ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೀಡಾಗಿದೆ. ಕಿತ್ತೂರು ಸಮೀಪ ಅಂಬಡಗಟ್ಟಿ ಎಂಬಲ್ಲಿ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗೆ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಅಪಘಾತದಲ್ಲಿ ಗಾಯಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ಹೇಗಿದೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೇಳಿಕೆ ನೀಡಿದ್ದು, "ಅಮ್ಮನ ಬೆನ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ (ಜನವರಿ 13) ರಾತ್ರಿ ಸಿಎಲ್​ಪಿ ಮೀಟಿಂಗ್ ಮುಗಿಸಿ ಬೆಳಿಗ್ಗೆ ವಿಮಾನದಲ್ಲಿ ಬರಬೇಕಾಗಿತ್ತು. ಆದರೆ, ಇಂದು ಬೆಳಗ್ಗೆ ಕ್ಷೇತ್ರದಲ್ಲಿ ಎರಡು ಮೂರು ಮುಖ್ಯ ಕೆಲಸಗಳಿದ್ದ ಕಾರಣ ಅವರು ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ್ದರು. ಈ ನಡುವೆ, ರಸ್ತೆ ಅವಘಡ ಸಂಭವಿಸಿದೆ. ದೇವರು ಮತ್ತು ಜನರ ಆಶೀರ್ವಾದದಿಂದ ದೊಡ್ಡ ಗಾಯಗಳೇನೂ ಆಗಿಲ್ಲ. ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗಾವಿ ಕ್ಷೇತ್ರದ ಜನರು, ಅಭಿಮಾನಿಗಳು ಆತಂಕಗೊಳ್ಳುವ ಅವಶ್ಯಕತೆ ಇಲ್ಲ" ಎಂದು ಸ್ಪಷ್ಟಪಡಿಸಿದರು.

Whats_app_banner