B Sriramulu Challenges Siddaramaiah: ಸಿದ್ದರಾಮಯ್ಯ ನಿಮಗೆ ತಾಕತ್ತಿದ್ದರೆ..ಪ್ರತಿಪಕ್ಷ ನಾಯಕರಿಗೆ ಶ್ರೀರಾಮುಲು ಸವಾಲೇನು?
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು, ನಾನು ಈ ಬಾರಿಯೂ ಮೊಳಕಾಲ್ಮೂರು ಮತಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ, ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಿ ತೋರಿಸಲಿ ಎಂದು ಸವಾಲು ಎಸೆದರು. ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ಬಂದರೆ, ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಜನತೆ ಮಸಿ ಬಳಿಯುತ್ತಾರಷ್ಟೇ ಎಂದು ಶ್ರೀರಾಮುಲು ವ್ಯಂಗ್ಯವಾಡಿದರು.
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಸಾರಿಗೆ ಸಚಿವ ಬಿ. ಶ್ರೀರಾಮುಲು, ತಾಕತ್ತಿದ್ದರೆ ಈ ಬಾರಿ ಮತ್ತೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು, ನಾನು ಈ ಬಾರಿಯೂ ಮೊಳಕಾಲ್ಮೂರು ಮತಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ, ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಿ ತೋರಿಸಲಿ ಎಂದು ಸವಾಲು ಎಸೆದರು. ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ಬಂದರೆ, ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಜನತೆ ಮಸಿ ಬಳಿಯುತ್ತಾರಷ್ಟೇ ಎಂದು ಶ್ರೀರಾಮುಲು ವ್ಯಂಗ್ಯವಾಡಿದರು.
ನನಗೆ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಸವಾಲು ಹಾಕಿರುವ ಸಿದ್ದರಾಮಯ್ಯ, ಮೊದಲು ತಾವು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಕ್ಷೇತ್ರ ಇಲ್ಲದೆ ಪರದೇಶಿಯಾಗಿ ಓಡಾಡುತ್ತಿರುವವರು, ನನ್ನ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ನಾನು ಸಿದ್ದರಾಮಯ್ಯ ಮಾಡುವಂತ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ. ನೇರ ಹಾಗೂ ಸ್ವಚ್ಛ ರಾಜಕಾರಣ ಮಾಡಿದ್ದು, ನನ್ನ ರಾಜಕೀಯ ಭವಿಷ್ಯದ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ. ಹೀಗಾಗಿ ಸಿದ್ದರಾಮಯ್ಯ ನನ್ನ ಕ್ಷೇತ್ರದ ಬಗ್ಗೆ ಚಿಂತಿಸುವುದನ್ನು ಬಿಟ್ಟು, ತಮಗಾಗಿ ಒಂದು ಕ್ಷೇತ್ರ ಹುಡುಕಿಕೊಳ್ಳಲಿ ಎಂದು ಶ್ರೀರಾಮುಲು ಕುಹುಕವಾಡಿದರು.
ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್‌ನಲ್ಲಿದ್ದವರು. ಅಲ್ಲಿ ಎಲ್ಲವನ್ನೂ ಕೊಳ್ಳೆ ಹೊಡೆದು ಬಳಿಕ ಮಾಜಿ ಪ್ರಧಾನಮಂತ್ರಿ ಹೆಚ್‌ಡಿ ದೇವೇಗೌಡ ಅವರ ಬೆನ್ನಿಗೆ ಚೂರಿ ಹಾಕಿದವರುರು. ಈಗ ಕಾಂಗ್ರೆಸ್‌ನಲ್ಲಿ ಜೊತೆಗಿರುವ ಡಿಕೆ ಶಿವಕುಂಆರ್, ಡಾ. ಜಿ, ಪರಮೇಶ್ವರ್ ಅವರ ವಿರುದ್ಧ ಕತ್ತಿ ಮಸೆಯುತ್ತಿರುವ ಸಿದ್ದರಾಮಯ್ಯ, ನನಗೆ ರಾಜಕೀಯದ ಪಾಠ ಹೇಳಿಕೊಡುತ್ತಿರುವುದನ್ನು ನೋಡಿ ನಗು ಬರುತ್ತಿದೆ ಎಂದು ಶ್ರೀರಾಮುಲು ಹೇಳಿದರು.
ಬಳಿಕ ಚಿಕ್ಕೋಡಿಯಲ್ಲೂ ಪತ್ರಕರ್ತರೊಂದಿಗೆ ಮಾತನಾಡಿದ ಶ್ರೀರಾಮುಲು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ಜಾತಿಗಳ ಬಗ್ಗೆ ಗೌರವ ಇದೆ ಎಂದು ಭಾವಿಸಿದ್ದೇವು. ಆದರೆ, ಹಿಂದುಳಿದ ಜಾತಿಗಳಿಂದ ಮತ ಪಡೆದು ಮೀಸಲಾತಿ ನೀಡದೇ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. ದಾರಿ ತಪ್ಪಿದ ಪಕ್ಷಕ್ಕೆ ದಾರಿ ತಪ್ಪಿದ ಮಗ ಸಿದ್ದರಾಮಯ್ಯ ನಾಯಕರಾಗಿದ್ದಾರೆ ಎಂದು ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದರು.
60 ವರ್ಷಗಳ ಕಾಲ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಆದರೂ ಮೀಸಲಾತಿ ಹೆಚ್ಚಳ ಮಾಡುವ ಧೈರ್ಯ ತೋರಲಿಲ್ಲ. ಕಾಂಗ್ರೆಸ್ ಒಂದು ದಾರಿ ತಪ್ಪಿದ ಹಾಗೂ ಗೊತ್ತು ಗುರಿ ಇಲ್ಲದ ಪಕ್ಷ. ಹಿಂದುಳಿದ ಜಾತಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಿಜವಾಗಿಯೂ ಕಳಕಳಿ ಇದ್ದಿದ್ದರೆ, ಈ ಹಿಂದೆಯೇ ನಮಗೆ ಮೀಸಲಾತಿ ಸಿಗುತ್ತಿತ್ತು ಎಂದು ಶ್ರೀರಾಮುಲು ಹರಿಹಾಯ್ದರು..
ಇದೇ ವೇಳೆ ಉತ್ತರ ಕರ್ನಾಟಕದ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ನಡುವೆ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಶ್ರೀರಾಮುಲು, ರಾಜಧಾನಿ ಬೆಂಗಳೂರಿನ ಅಗತ್ಯಕ್ಕೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆಯೇ ಹೊರತು, ಉತ್ತರ ಕರ್ನಟಕಕ್ಕೆ ಅನ್ಯಾಯ ಮಾಡುವ ಉದ್ದೇಶ ಹೊಂದಿಲ್ಲ ಎಂದು ಹೇಳಿದರು.
ಉತ್ತರ ಕರ್ನಾಕಟದ ಸಾರಿಗೆ ಘಟಕಗಳಿಗೆ ಹಳೆಯ ಬಸ್‌ಗಳನ್ನು ಒದಗಿಸಲಾಗುತ್ತದೆ ಎಂಬ ಆರೋಪ ಸರಿಯಲ್ಲ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ನಗರಗಳಿಗೂ ಎಲೆಕ್ಟ್ರಿಕ್ ಬಸ್ ಸೇವೆ ಒದಗಿಸುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಇದೇ ವೇಳೆ ಭರವಸೆ ನೀಡಿದರು.