ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Election 2024: ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Lok Sabha Election 2024: ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಕರ್ನಾಟಕದಲ್ಲಿ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ಏಪ್ರಿಲ್ 12ರ ಶುಕ್ರವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಪ್ರಚಾರ ಭರ್ಜರಿ ರಂಗು ಪಡೆದುಕೊಂಡಿದ್ದು, ಕಾಂಗ್ರೆಸ್ (Congress), ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಪಕ್ಷಗಳು ಸಭೆ, ಸಮಾರಂಭಗಳ, ರಾಲಿಗಳ ಮೂಲಕ ಮತಯಾಚನೆ ಮಾಡುತ್ತಿವೆ. 2ನೇ ಹಂತದ ಲೋಕಸಭಾ ಚುನಾವಣೆಗೆ ಇಂದಿನಿಂದ (ಏಪ್ರಿಲ್ 12, ಶುಕ್ರವಾರ) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 14 ಕ್ಷೇತ್ರಗಳಿಂದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಇರುತ್ತದೆ. ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಇಂದಿನಿಂದ ನಾಮಪತ್ರ ಸಲ್ಲಿಸಲಾಗುತ್ತದೆ. ಏಪ್ರಿಲ್ 19ರ ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಟ್ರೆಂಡಿಂಗ್​ ಸುದ್ದಿ

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಇಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.

ಮಂಡ್ಯದಿಂದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಲ್ಲಿ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತದ 18ನೇ ಲೋಕಸಭೆ ಚುನಾವಣೆ ಒಟ್ಟು 7 ಹಂತಗಳಲ್ಲಿ ನಡೆಯುತ್ತಿದೆ. ಈ ಪೈಕಿ ಕರ್ನಾಟಕದಲ್ಲಿ ತಲಾ 14 ಕ್ಷೇತ್ರಗಳಂತೆ 2 ಮತ್ತು 3ನೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ತನ್ನದೇ ಆದ ಪ್ಲಾನ್‌ಗಳನ್ನು ರೂಪಿಸಿಕೊಂಡಿದೆ. ಆದರೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಬಂಡಾಯ ಕಹಳೆ ಊದಿದ್ದು, ಇಂದು (ಏಪ್ರಿಲ್ 12, ಶುಕ್ರವಾರ) ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಮಾಜಿ ಸಿಎಂ ಬಿಎಸ್‌ವೈ ಪುತ್ರನನ್ನು ಸೋಲಿಸಲು ಈಶ್ವರಪ್ಪ ಪಣ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮತ್ತವರ ಪುತ್ರರ ಕುಟುಂಬ ರಾಜಕಾರಣವನ್ನು ತೀವ್ರವಾಗಿ ವಿರೋಧಿಸುತ್ತಿರುವ ಈಶ್ವರಪ್ಪ ಈ ಬಾರಿ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರನ್ನು ಸೋಲಿಸಲೇಬೇಕೆಂಬ ಪಣತೊಟ್ಟಿದ್ದಾರೆ. ಬಿಜೆಪಿ ವರಿಷ್ಠರ ಜೊತೆ ನನ್ನ ಮಾತುಕತೆ ಮುಗಿದಿದೆ. ಇನ್ಮುಂದೆ ಯಾರ ಜೊತೆಗೂ ಮಾತುಕತೆಗೆ ಹೋಗುವುದಿಲ್ಲ. ಬಿಜೆಪಿಯವರು ನನ್ನನ್ನು ಇನ್ನೂ ಯಾಕೆ ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ. ನಾಮಪತ್ರ ಸಲ್ಲಿಸುತ್ತೇನೆ. ಅದಕ್ಕೂ ಮುನ್ನ ಬೃಹತ್ ಮೆರವಣಿಗೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.

ಕೆಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾ ಕಣದಲ್ಲಿ ಉಳಿದರೆ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್, ಬಿಜೆಪಿಯ ಬಿವೈ ರಾಘವೇಂದ್ರ ಹಾಗೂ ಕೆಎಸ್ ಈಶ್ವರಪ್ಪ ನಡುವೆ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. ಈಶ್ವರಪ್ಪ ಅವರು ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಇವರ ಮನವಿಗೆ ಸ್ಪಂದಿಸಲಿಲ್ಲ. ಬದಲಾಗಿ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಪುತ್ರನಿಗೆ ಟಿಕೆಟ್ ಸಿಗದಿರಲು ಯಡಿಯೂರಪ್ಪ ಅವರ ಕುಟುಂಬವೇ ಕಾರಣ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

IPL_Entry_Point