ಕನ್ನಡ ಸುದ್ದಿ  /  Karnataka  /  Lok Sabha Election 2024 Bidar Bjp Ticket Announced For Bhagwanth Khuba Ex Minister Prabhu Chauhan Shocked Mrt

Prabhu Chauhan: ಭಗವಂತ ಖೂಬಾಗೆ ಬೀದರ್ ಲೋಕಸಭೆ ಟಿಕೆಟ್ ಘೋಷಣೆ; ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಆಘಾತ, ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಭು ಚವ್ಹಾಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೋಕ ಕದನದಲ್ಲಿ ಭಗವಂತ ಖುಬಾ ಅವರಿಗೆ ಬೀದರ್ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಚವ್ಹಾಣ್ ಆಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಬೀದರ್‌ನಲ್ಲಿ ಭಗವಂತ ಖೂಬಾ ಅವರಿಗೆ ಬಿಜೆಪಿ ಲೋಕಸಭೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಪ್ರಭು ಚವ್ಹಾಣ್.
ಬೀದರ್‌ನಲ್ಲಿ ಭಗವಂತ ಖೂಬಾ ಅವರಿಗೆ ಬಿಜೆಪಿ ಲೋಕಸಭೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಪ್ರಭು ಚವ್ಹಾಣ್.

ಬೀದರ್: ಲೋಕಸಭೆ ಚುನಾವಣೆ (Lok Sabha Election 2024) ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬಿಜೆಪಿ ಇತ್ತೀಚೆಗೆ ಪ್ರಕಟಿಸಿದ್ದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬೀದರ್‌ ಕ್ಷೇತ್ರದಲ್ಲಿ ಹಾಲಿ ಸಚಿವ ಹಾಗೂ ಸಂಸದ ಭಗವಂತ ಖುಬಾ (Bhagwanth Khuba) ಅವರಿಗೆ ಟಿಕೆಟ್ ನೀಡಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಸಚಿವ ಪ್ರಭು ಚವ್ಹಾಣ್ (Prabhu Chauhan) ಅವರು ಆಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವುದಾಗಿ ವರದಿಯಾಗಿದೆ.

ಮುಂಬೈ ಪ್ರವಾಸದಲ್ಲಿದ್ದ ಚವ್ಹಾಣ್ ಅವರಿಗೆ ಎದೆಬಡಿತ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಬಾಂದ್ರಾದಲ್ಲಿರುವ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರುಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯರಾದ ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯನ್ನ ಮಾಡಲಾಗಿದೆ. ಸದ್ಯಪ್ರಭು ಚವ್ಹಾಣ್ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದಿದೆ ಎಂದು ಅವರು ಕುಟುಂಬದ ಮೂಲಕಗಳ ಮಾಹಿತಿ ನೀಡಿದ್ದಾರೆ.

ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಚವ್ಹಾಣ್ ಅವರು ಭಾರಿ ಹೋರಾಟ ನಡೆಸಿದ್ಧರು. ತನ್ನನ್ನು ಸೋಲಿಸಲು ಯತ್ನಿಸಿದ್ದ ಖೂಬಾ ಎಂದು ಸಾರ್ವಜನಿಕವಾಗಿ ಗಳಗಳ ಅತ್ತಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಲಿಗೆ ಸಾರ್ವಜನಿಕ ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಹಾಕಿ ಯಾವುದೇ ಕಾರಣಕ್ಕೂ ಅವರಿಗೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದರು. ಇವರ ಯಾವ ಹೋರಾಟವು‌ ಫಲ ನೀಡದ್ದರಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂದನ ಖಾತೆ ರಾಜ್ಯ ಸಚಿವ ಭಗವಂತ್ ಖುಬಾ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂಬುದು ಚವ್ಹಾಣ್ ಅವರ ವಾದವಾಗಿದೆ.

ಮೂರನೇ ಬಾರಿಗೆ ಟಿಕೆಟ್ ಪಡೆದು ಬೀದರ್‌ನಲ್ಲಿ ಸ್ಪರ್ಧಿಸುತ್ತಿರುವ ಭಗವಂತ ಖುಬಾ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ವಿರುದ್ಧ ಸ್ಪರ್ಧೆಗೆ ಅವರಿಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಅವರ ಬಳಿ ಇರೋದು ಕೇವಲ ರಿಜೆಕ್ಟ್ ಕ್ಯಾಂಡಿಡೇಟ್ ಮಾತ್ರ. ಈ ಬಾರಿಯ ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಔರಾದ ಪಟ್ಟಣದ ಅಮರೇಶ್ವರ ಮಂದಿರಕ್ಕೆ ಭೇಟಿ ನೀಡಿದ್ದಾಗ ಹೇಳಿದ್ದಾರೆ. ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಹೆಸರುಗಳನ್ನು ಘೋಷಣೆ ಮಾಡಿದೆ. ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಡಿವಿ ಸಂದಾನಂದ ಗೌಡ ಘಟಾನುಘಟಿ ನಾಯಕರಿಗೆ ಟಿಕೆಟ್ ನೀಡದೆ ಕೆಲವೊಂದು ಕಡೆ ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ.