Lok Sabha Election 2024: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಏಪ್ರಿಲ್ 12 ರಂದು ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ-lok sabha election 2024 bjp rebel leader ks eshwarappa to file nomination on april 12 rmy ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Election 2024: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಏಪ್ರಿಲ್ 12 ರಂದು ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ

Lok Sabha Election 2024: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಏಪ್ರಿಲ್ 12 ರಂದು ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಭಾಗದಲ್ಲಿ ತಮಗೆ ಅನೇಕ ಹಿಂದುತ್ವ ನಾಯಕರ ಬೆಂಬಲವಿದೆ ಎಂದು ಹೇಳಿಕೊಂಡಿರುವ ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಏಪ್ರಿಲ್ 12 ರಂದು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ
ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಏಪ್ರಿಲ್ 12 ರಂದು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ

ಶಿವಮೊಗ್ಗ: ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ (KS Eshwarappa) ನಾಳೆ (ಏಪ್ರಿಲ್ 12, ಶುಕ್ರವಾರ) ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ (Shivamogga lok sabha Constituency) ನಾಮಪತ್ರ ಸಲ್ಲಿಸಲಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಒತ್ತಿ ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಈಶ್ವರಪ್ಪ, "ನಾನು ನಾಳೆ ನಾಮಪತ್ರ ಸಲ್ಲಿಸುತ್ತೇನೆ, ಮತ್ತು ನನ್ನ ಬೆಂಬಲಿಗರು ನನ್ನೊಂದಿಗೆ ರ‍್ಯಾಲಿಯಲ್ಲಿ ಬರುತ್ತಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಅಂತಹ ಅಗಾಧ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ನನಗೆ ಖಚಿತವಿಲ್ಲ, ಆದರೆ ಜನರು ನನ್ನಂತಹ ಹಿಂದುತ್ವ ಅಭ್ಯರ್ಥಿಗಳನ್ನು ಹುಡುಕುತ್ತಿದ್ದಾರೆ ಎಂದು ನಾನು ಅರಿತುಕೊಂಡೆ" ಎಂದು ಹೇಳಿದ್ದಾರೆ.

‘ಯು ಟರ್ನ್ ಹೊಡೆಯುವ ಪ್ರಶ್ನೆಯೇ ಇಲ್ಲ’

ಶಿವಮೊಗ್ಗ ಭಾಗದಲ್ಲಿ ತಮಗೆ ಅನೇಕ ಹಿಂದುತ್ವ ನಾಯಕರ ಬೆಂಬಲವಿದೆ ಎಂದು ಹೇಳಿಕೊಂಡಿರುವ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಈಶ್ವರಪ್ಪ ಅವರು ತಮ್ಮ ನಿರ್ಧಾರಕ್ಕೆ ಯು ಟರ್ನ್ ತೆಗೆದುಕೊಳ್ಳಲಿದ್ದಾರೆ ಎಂಬ ವರದಿಗಳನ್ನು ಖಂಡಿಸಿದ್ದಾರೆ. "ಚುನಾವಣೆಯಲ್ಲಿ ಸ್ಪರ್ಧಿಸುವ ನನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ನನ್ನ ಹಿತೈಷಿಗಳು ನಾನು ಬಿಟ್ಟುಕೊಡಬಾರದು ಎಂದು ಹೇಳಿದ್ದಾರೆ. ನಾನು ಅವರಿಗಾಗಿ ಹೋರಾಡಲು ನಿರ್ಧರಿಸಿದ್ದೇನೆ. ನನ್ನ ವಾಪಸಾತಿ ಬಗ್ಗೆ ಕೆಲವರು ಏಕೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ ಎಂದು ತಮ್ಮ ವಿರೋಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಇಬ್ಬರು ಪುತ್ರರಾದ ಬಿ.ವೈ.ರಾಘವೇಂದ್ರ ಮತ್ತು ಬಿ.ವೈ.ವಿಜಯೇಂದ್ರ ಅವರು ತಮ್ಮ ಮಗನಿಗೆ ಸ್ಪರ್ಧಿಸಲು ಅವಕಾಶ ನೀಡದಿರುವುದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕರಾಗಿದ್ದಾರೆ.

ಪ್ರಧಾನಿ ಮೋದಿ ಭಾವಚಿತ್ರ ಬಳಸದಂತೆ ಸೂಚಿಸಲು ಇಸಿಗೆ ಬಿಜೆಪಿ ದೂರು

ತಮ್ಮ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಸುವುದಾಗಿ ಹೇಳಿದ್ದಾರೆ. ಆದರೆ ಬಿಜೆಪಿಯ ರಾಜ್ಯ ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಸದಂತೆ ನೋಡಿಕೊಳ್ಳುವಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

"ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಅವರು ಬಿಜೆಪಿಯ ಭಾಗವಾಗಿದ್ದಾರೆ ಎಂದು ಚಿತ್ರಿಸಿದ್ದಾರೆ, ಇದು ತಪ್ಪು" ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರು ಬಿಜೆಪಿಯ ಮತಗಳನ್ನು ವ್ಯರ್ಥ ಮಾಡುವ ಸಲುವಾಗಿ ಮತದಾರರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಬಿ.ವೈ ರಾಘವೇಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಆದ್ದರಿಂದ, ನರೇಂದ್ರ ಮೋದಿಯವರ ಚಿತ್ರಗಳನ್ನು ಬಳಸಿಕೊಂಡು ಸಾಮಾನ್ಯ ಜನರಿಂದ ಮತಗಳನ್ನು ಪಡೆಯಲು ಈಶ್ವರಪ್ಪ ಅವರ ಕೃತ್ಯವು ಸಾಮಾನ್ಯ ಜನರನ್ನು ದಾರಿ ತಪ್ಪಿಸುತ್ತಿದೆ, ಇದು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಇದು ಅಪರಾಧ" ಎಂದು ರಾಜ್ಯ ಬಿಜೆಪಿ ನಾಯಕರು ತಿಳಿಸಿದ್ದಾರೆ.