Lok Sabha Election 2024: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ; ಕೇಸರಿ ನಾಯಕರು ಸಾಥ್
ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Election 2024: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ; ಕೇಸರಿ ನಾಯಕರು ಸಾಥ್

Lok Sabha Election 2024: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ; ಕೇಸರಿ ನಾಯಕರು ಸಾಥ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭರ್ಜರಿ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನದ ಬಳಿಕ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭರ್ಜರಿ ರೋಡ್ ಶೋ ನಡೆಸಿದರು. ಬಿಜೆಪಿ ನಾಯಕರು ಅವರಿಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭರ್ಜರಿ ರೋಡ್ ಶೋ ನಡೆಸಿದರು. ಬಿಜೆಪಿ ನಾಯಕರು ಅವರಿಗೆ ಸಾಥ್ ನೀಡಿದರು.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ (Dakshina Kannada Lok Sabha Constituency) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ (Captain Brijesh Chowta) ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್‌ ಬಳಿಯ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಅರುಣ್ ಕುಮಾರ್ ಪುತ್ತಿಲ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು

ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರತಿ ಮುರುಳ್ಯ ಮತ್ತು ಹಿರಿಯ ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಜತೆಗಿದ್ದರು.

ಪ್ರವಾಸೋದ್ಯಮ, ಕೃಷಿ, ಮೀನುಗಾರಿಕೆ, ಧಾರ್ಮಿಕ ಹಿನ್ನೆಲೆ, ಕಡಲತೀರದ ವೈಶಿಷ್ಟ್ಯಗಳ ಮೂಲಕ ದೇಶ, ವಿದೇಶಗಳ ಗಮನ ಸೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಆವರಿಸಿಕೊಂಡಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 33 ವರ್ಷಗಳಿಂದ ಬಿಜೆಪಿ ಪಾರಮ್ಯ ಸಾಧಿಸಿದೆ. ಅದನ್ನು ಬಗ್ಗುಬಡಿದು ಮತ್ತೆ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

ಕ್ಯಾಪ್ಟನ್ ಬ್ರಿಜೇಶ್ ಚೌಟ ವರ್ಸಸ್ ಆರ್ ಪದ್ಮರಾಜ್

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಲ್ಲ. ಇಲ್ಲಿ ಕಟೀಲ್ ಅವರಿಗೆ ಟಿಕೆಟ್ ನೀಡಲು ಭಾರಿ ವಿರೋಧ್ಯ ವ್ಯಕ್ತವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನಾಯಕರು ಅಂತಿಮವಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು. ಕರಾವಳಿ ಕ್ಷೇತ್ರವಾಗಿ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಚೌಟ ಹಾಗೂ ಕಾಂಗ್ರೆಸ್‌ನ ಆರ್ ಪದ್ಮರಾಜ್ ಅವರ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಏಪ್ರಿಲ್ 3 (ಬುಧವಾರ) ರಂದೇ ಪದ್ಮರಾಜ್ ನಾಮಪತ್ರ ಸಲ್ಲಿಸಿ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.

Whats_app_banner