ಕನ್ನಡ ಸುದ್ದಿ / ಕರ್ನಾಟಕ /
ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ; 3 ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಪ್ರಕಟ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸೋದು ಖಚಿತವಾಗಿದೆ. ಜೊತೆಗೆ ಹಾಸನ, ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನೂ ಘೋಷಿಸಿದ್ದಾರೆ.
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (PTI)
ಬೆಂಗಳೂರು: ಕಳೆದ ಹಲವು ದಿನಗಳಿಂದ ಭಾರಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಖಚಿತವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್‌ಡಿಕೆ ಸ್ಪರ್ಧಿಸಿದರೆ, ಹಾಸನದಿಂದ ಪ್ರಜ್ವಲ್ ರೇವಣ್ಣ, ಕೋಲಾರದಲ್ಲಿ ಆರ್‌ಸಿ ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ವರದಿಯಾಗಿದೆ. ಕೋಲಾರದಲ್ಲಿ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಬಿಜೆಪಿ ಹೈಕಮಾಂಡ್ ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ಅತ್ತ ಭಾರಿ ರೋಚಕ ಕಣವಾಗಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಈ ಕ್ಷೇತ್ರವನ್ನು ಕೇಸರಿ ನಾಯಕು ದೋಸ್ತಿ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ. ಮಂಡ್ಯದಲ್ಲೇ ನನ್ನ ಸ್ಪರ್ಧೆ ಎನ್ನುತ್ತಿರುವ ಸುಮಲತಾ ಅವರ ಮುಂದಿನ ನಡೆ ಏನು ಅನ್ನೋದನ್ನು ಕಾದು ನೋಡಬೇಕಿದೆ.