ಕನ್ನಡ ಸುದ್ದಿ  /  ಕರ್ನಾಟಕ  /  Karnataka Lok Sabha Result Live: ನಿಜವಾಗುತ್ತಾ ಎಕ್ಸಿಟ್‌ ಪೋಲ್‌ ಭವಿಷ್ಯ? ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಲೈವ್‌ ಅಪ್‌ಡೇಟ್

Karnataka Lok Sabha Result Live: ನಿಜವಾಗುತ್ತಾ ಎಕ್ಸಿಟ್‌ ಪೋಲ್‌ ಭವಿಷ್ಯ? ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಲೈವ್‌ ಅಪ್‌ಡೇಟ್

Lok Sabha Election 2024 Result Karnataka: ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗೆಲ್ಲಲಿದೆ? ಚುನಾವಣೋತ್ತರ ಸಮೀಕ್ಷೆಗಳು ನಿಜವಾಗುತ್ತಾ? ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಗೆಲುವು ಸಾಧಿಸಲಿದ್ದಾರಾ? ಎಲ್ಲಾ ವಿವರಗಳು ಲೈವ್‌ ಅಪ್‌ಡೇಟ್‌ನಲ್ಲಿ ಲಭ್ಯ.

ನಿಜವಾಗುತ್ತಾ ಎಕ್ಸಿಟ್‌ ಪೋಲ್‌ ಭವಿಷ್ಯ? ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?  ಲೈವ್‌ ಅಪ್‌ಡೇಟ್
ನಿಜವಾಗುತ್ತಾ ಎಕ್ಸಿಟ್‌ ಪೋಲ್‌ ಭವಿಷ್ಯ? ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಲೈವ್‌ ಅಪ್‌ಡೇಟ್ (PC: Manjunath Kotagunasi)

Lok Sabha Election 2024 Result Karnataka: ಜೂನ್‌ 4, ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ಮಹತ್ತರ ಬದಲಾವಣೆಗಳಾಗಲಿವೆ ಎಂಬುದು ಭಾರೀ ಕುತೂಹಲ ಕೆರಳಿಸಿದೆ. ಜೂನ್‌ 1 ರಂದು ನಡೆದ ಎಕ್ಸಿಟ್‌ ಪೋಲ್‌ ಭವಿಷ್ಯ ನಿಜವಾಗುತ್ತಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ. ಚುನಾವಣೋತ್ತರ ಸಮೀಕ್ಷಾ ವರದಿಗಳು ಹೇಳುವಂತೆ ರಾಜ್ಯದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆಯಾ? ಕಾಂಗ್ರೆಸ್‌ ಹಾಗೂ ಜೆಡಿಎಸ್‌ 3-5 ಸ್ಥಾನಗಳನ್ನು ಮಾತ್ರ ಪಡೆಯಲಿದೆಯಾ? ಪೆನ್‌ಡ್ರೈವ್‌ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಪ್ರಜ್ವಲ್‌ ರೇವಣ್ಣ ಹಾಸನದಲ್ಲಿ ಜಯಭೇರಿ ಬಾರಿಸಲಿದ್ದಾರಾ? ಈ ಸಮಗ್ರ ಮಾಹಿತಿಯ ಲೈವ್‌ ಅಪ್‌ಡೇಟ್‌ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ ವೆಬ್‌ಸೈಟ್‌ನಲ್ಲಿ ಲಭ್ಯ.

ಟ್ರೆಂಡಿಂಗ್​ ಸುದ್ದಿ

9 PM

ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಬಾಗ:ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಹಾವೇರಿ: ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಬಳಿಕ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ. ರಾಜ್ಯ ಸರ್ಕಾರ ಬದಲಾವಣೆಗೆ ನಂಬರ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು ಎಂದರು.

8.15PM

ಮೈಸೂರಿಗೆ ವೀಕ್ಷಕರ ಭೇಟಿ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ಮೊಹಮ್ಮದ್ ಇಜಾಜ್ ಅವರು ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿಗಳಾದ ಡಾ:ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ .ಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

7.45PM

ಎಕ್ಸಿಟ್‌ ಪೋಲ್‌ ಕಾಂಗ್ರೆಸ್‌ ನಾಯಕರ ಎದೆ ಬಡಿತ ಹೆಚ್ಚಿಸಿದೆ; ಬಿ.ವೈ. ರಾಘವೇಂದ್ರ

ಜೂನ್‌ 1 ರಂದು ಪ್ರಕಟವಾದ ಎಕ್ಸಿಟ್‌ ಪೋಲ್‌ ಫಲಿತಾಂಶವು ಕಾಂಗ್ರೆಸ್‌ ನಾಯಕರ ಎದೆಬಡಿತ ಹೆಚ್ಚಿಸಿದೆ. ಮುಂಬರುವ ದಿನಗಳಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ಧ್ವನಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ.

6.45 PM

ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್‌

ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ ಬೆಂಗಳೂರಿನ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಕಲ ಸಿದ್ಧತೆಗಳು ನಡೆದಿದ.

5.40 PM

ಬೀದರ್‌, ದಾವಣಗೆರೆ ಮುಂತಾದೆಡೆ ಮತ ಎಣಿಕೆಗೆ ಸಿದ್ಧತೆ

ನಾಳೆ (ಜೂನ್‌ 4) ಲೋಕಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ರಾಜ್ಯದ ಬೀದರ್‌, ದಾವಣಗೆರೆ ಸೇರಿದಂತೆ ವಿವಿಧಡೆ ಮತ ಎಣಿಕಾ ಕೇಂದ್ರಗಳ ಬಳಿ ಬಿಗಿ ಬಂದೋಬಸ್ತ್‌ ವಹಿಸಲಾಗಿದೆ. ಜೊತೆಗೆ ಮತ ಎಣಿಕೆಗೆ ಸಕಲ ಸಿದ್ಧತೆಗಳು ನಡೆದಿದೆ.

4:50 PM

ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ

ನಾಳೆ ( ಮಂಗಳವಾರ) ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದೆ. ರಾಜ್ಯಾದ್ಯಂತ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್‌ ಜಾರಿಗೊಳಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

4:15 PM

ಮತ ಎಣಿಕೆಗೂ ಮುನ್ನ ಪ್ರಜ್ವಲ್‌ ರೇವಣ್ಣ ಕೇಸ್‌ ಸಂಬಂಧ ಸ್ಥಳ ಮಹಜರು ನಡೆಸಲಿರುವ ಎಸ್‌ಐಟಿ

ಚುನಾವಣೋತ್ತರ ಸಮೀಕ್ಷೆಗಳ ವರದಿ ಪ್ರಕಾರ ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಜಯ ಗಳಿಸಲಿದ್ದಾರೆ. ಆದರೆ ಎಕ್ಸಿಟ್‌ ಪೋಲ್‌ ಭವಿಷ್ಯ ಎಸ್‌ಐಟಿ ಅಧಿಕಾರಿಗಳಿಗೆ ತಲೆ ನೋವಾಗಿದೆ. ಒಂದು ವೇಳೆ ಪ್ರಜ್ವಲ್‌ ರೇವಣ್ಣ ಗೆದ್ದು, ಅದೇ ಸಮಯದಲ್ಲಿ ಸ್ಥಳ ಮಹಜರು ನಡೆಸಿದರೆ ಕಷ್ಟವಾಗುತ್ತದೆ ಎಂದು, ಮತ ಎಣಿಕೆಗೂ ಮುನ್ನ ಹಾಸನದಲ್ಲಿ ಸ್ಥಳ ಮಹಜರು ನಡೆಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ.

3:40 PM

ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಿದ್ಧತೆ

ಜೂನ್‌ 4 ರಂದು ನಡೆಯುವ ಮತ ಎಣಿಕೆಗಾಗಿ ಬೆಂಗಳೂರಿನ 3 ಕೇಂದ್ರಗಳಲ್ಲಿ ಸಿದ್ದತೆ ನಡೆದಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ಮತ ಎಣಿಕೆ ವಸಂತರನಗರದ ಅರಮನೆ ರಸ್ತೆಯಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯಲಿದೆ.

3:00 PM

ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಜೂನ್ 4 ರಂದು ಬೆಂಗಳೂರಿನ ಕೆಲವೆಡೆ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಲಿದೆ. ಈ ಹಿನ್ನೆಲೆ ಬೆಂಗಳೂರಿನ ಕೆಲವೆಡೆ ವಾಹನ ಸಂಚಾರ ಹಾಗೂ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಜನರಿಗೆ ಸಮಸ್ಯೆಯಾಗದಂತೆ ಬದಲಿ ಮಾರ್ಗಗಳನ್ನೂ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ಟಿ20 ವರ್ಲ್ಡ್‌ಕಪ್ 2024