ಕನ್ನಡ ಸುದ್ದಿ  /  ಕರ್ನಾಟಕ  /  Lok Sabha Election 2024: ಚುನಾವಣಾ ಪರ್ವ, ದೇಶದ ಗರ್ವ; ಉಡುಪಿಯಲ್ಲಿ ಮರಳು ಕಲಾಕೃತಿ ರಚಿಸಿ ಮತದಾನದ ಜಾಗೃತಿ

Lok Sabha Election 2024: ಚುನಾವಣಾ ಪರ್ವ, ದೇಶದ ಗರ್ವ; ಉಡುಪಿಯಲ್ಲಿ ಮರಳು ಕಲಾಕೃತಿ ರಚಿಸಿ ಮತದಾನದ ಜಾಗೃತಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ವಿಭಿನ್ನವಾಗಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಮರಳಿನಿಂದ ಕಲಾಕೃತಿ ಗಮನ ಸೆಳೆದಿದೆ. (ವರದಿ: ಹರೀಶ್ ಮಾಂಬಾಡಿ)

ಉಡುಪಿಯ ಕರಾವಳಿಯಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಮರಳಿನ ಕಲಾಕೃತಿ ರಚಿಸಲಾಗಿದೆ
ಉಡುಪಿಯ ಕರಾವಳಿಯಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಮರಳಿನ ಕಲಾಕೃತಿ ರಚಿಸಲಾಗಿದೆ

ಉಡುಪಿ: ಕರ್ನಾಟಕದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ (Lok Sabha Election 2024) ಕಾಂಗ್ರೆಸ್ (Congress), ಬಿಜೆಪಿ-ಜೆಡಿಎಸ್ (BJP JDS Alliance) ಮೈತ್ರಿ ಪಕ್ಷಗಳ ನಾಯಕರು ಅಬ್ಬರದ ಪ್ರಚಾರದ ಮೂಲಕ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ. ಇದರ ಚುನಾವಣಾಧಿಕಾರಿಗಳು ಹಾಗೂ ಇತರೆ ಸಂಘಟನೆಗಳು ಮತದಾನ ಪ್ರಮಾಣ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಪ್ರಜಾಪ್ರಭುತ್ವ ಸಂಭ್ರಮದಲ್ಲಿ ನೈತಿಕ ಮತದಾರರಾಗಿ , ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಅರ್ಹ ಪ್ರತಿಯೊಬ್ಬರು ಮತದಾನ ಮಾಡುವ ಬಗ್ಗೆ ಮರಳು ಶಿಲ್ಪದ ಮೂಲಕ ಜಾಗೃತಿ (Voting Awareness) ಮೂಡಿಸಲಾಗುತ್ತಿದೆ. "ಚುನಾವಣಾ ಪರ್ವ - ದೇಶದ ಗರ್ವ " ಎಂಬ ಶೀರ್ಷಿಕೆಯಡಿಯಲ್ಲಿ ಮರಳು ಕಲಾಕೃತಿಯನ್ನು ಮಲ್ಪೆ ಕಡಲ ತೀರದಲ್ಲಿ ಮೂಡಿಸಿಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಪ್ರತೀಕ್ ಬಾಯಲ್, ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಶ್ಮೀನಾ ನಾಗರಾಜು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ, ಕರಾವಳಿ ಕಾವಲು ಎಸ್ಪಿ ಮಿಥುನ್, ಡಿಸಿಎಫ್ ಉಡುಪಿ ಗಣಪತಿ, ವೈಲ್ಡ್‌ಲೈಫ್ ಶಿವರಾಮ್ ಬಾಬು ಹಾಗೂ ಕಲಾವಿದರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಎನ್‌ಡಿಎ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಹಾಲಿ ಸಂಸದೆ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಶ್ಲೋಭಾ ಎಂಬ ಅಭಿಯಾನವನ್ನೂ ಆರಂಭಿಸಿದ್ದರು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಿದೆ. ಈ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.

ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. ಇಂದು (ಏಪ್ರಿಲ್ 8, ಸೋಮವಾರ) ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. (ವರದಿ: ಹರೀಶ್ ಮಾಂಬಾಡಿ)

IPL_Entry_Point