ಲೋಕಸಭಾ ಚುನಾವಣೆ; ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, 25 ಮಹಿಳೆಯರು ಸೇರಿ 358 ಅಭ್ಯರ್ಥಿಗಳು
ಕನ್ನಡ ಸುದ್ದಿ  /  ಕರ್ನಾಟಕ  /  ಲೋಕಸಭಾ ಚುನಾವಣೆ; ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, 25 ಮಹಿಳೆಯರು ಸೇರಿ 358 ಅಭ್ಯರ್ಥಿಗಳು

ಲೋಕಸಭಾ ಚುನಾವಣೆ; ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, 25 ಮಹಿಳೆಯರು ಸೇರಿ 358 ಅಭ್ಯರ್ಥಿಗಳು

ಲೋಕಸಭಾ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. 25 ಮಹಿಳಾ ಅಭ್ಯರ್ಥಿಗಳು ಸೇರಿ 358 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೇ ದಿನ. ವಿವರ ವರದಿ ಇಲ್ಲಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಬಾರಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.
ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ಬಾರಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.

ಬೆಂಗಳೂರು: ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಮಹತ್ವದ ಘಟ್ಟ ತಲುಪಿದ್ದು, ಮೊದಲ ಹಂತದ ನಾಮಪತ್ರ ಸಲ್ಲಿಕೆ ಅವಧಿ ಗುರುವಾರ (ಏಪ್ರಿಲ್ 4) ಕೊನೆಗೊಂಡಿದೆ. ಕೊನೆಯ ದಿನವಾದ ಗುರುವಾರ ಒಂದೇ ದಿನ 224 ಉಮೇದುವಾರಿಕೆ ಸಲ್ಲಿಸಲ್ಪಟ್ಟಿವೆ.

ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಗಡುವಿನೊಳಗೆ ಒಟ್ಟು 358 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಪೈಕಿ 25 ಮಹಿಳಾ ಅಭ್ಯರ್ಥಿಗಳು ಸೇರಿ 358 ಅಭ್ಯರ್ಥಿಗಳು 492 ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿರುವ ಒಟ್ಟು ಅಭ್ಯರ್ಥಿಗಳಲ್ಲಿ 211 ಸ್ವತಂತ್ರ ಅಭ್ಯರ್ಥಿಗಳು ಮತ್ತು 161 ನೋಂದಾಯಿತ ಆದರೆ ಮಾನ್ಯತೆ ಇರುವ ರಾಜಕೀಯ ಪಕ್ಷಗಳಿಂದ ಕಣಕ್ಕಿಳಿದಿದ್ದಾರೆ. ಮೊದಲ ಹಂತದಲ್ಲಿ ಮತದಾನ ನಡೆಯುವ ಬೆಂಗಳೂರು ದಕ್ಷಿಣ,ಉತ್ತರ,ಕೇಂದ್ರ, ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ದಕ್ಷಿಣಕನ್ನಡ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಇಂದು ನಾಮಪತ್ರ ಪರಿಶೀಲನೆ

ನಾಮಪತ್ರಗಳ ಪರಿಶೀಲನೆ ಏಪ್ರಿಲ್ 5ರಂದು ನಡೆಯಲಿದ್ದು ಕ್ರಮಬದ್ಧವಾದ ಹಾಗೂ ತಿರಸ್ಕೃತಗೊಂಡ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ. ಏಪ್ರಿಲ್ 8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮಾರ್ಚ್‌ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.

ಹಾಸನ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ನಿನ್ನೆ (ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ ಯಾವ ಪಕ್ಷಗಳು ಎಷ್ಟು ನಾಮಪತ್ರ ಸಲ್ಲಿಸಿವೆ ಎಂಬ ವಿವರ ಈ ಕೆಳಗಿನ ಕೋಷ್ಟಕದಲ್ಲಿದೆ.

ಯಾವ ಪಕ್ಷದಿಂದ ಎಷ್ಟು ನಾಮಪತ್ರ 

ಪಕ್ಷನಾಮಪತ್ರಗಳ ಸಂಖ್ಯೆ
ಕಾಂಗ್ರೆಸ್50
ಬಿಜೆಪಿ41
ಬಿಎಸ್‌ಪಿ18
ಜೆಡಿಎಸ್‌10
ಸಿಪಿಐಎಂ01
ಇತರೆ ಪಕ್ಷ161
ಪಕ್ಷೇತರರು/ಸ್ವತಂತ್ರ ಅಭ್ಯರ್ಥಿಗಳು211
ಒಟ್ಟು 492

ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ ಸಿ ಎನ್ ಮಂಜುನಾಥ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ, ತುಮಕೂರಿನಿಂದ ಮುದ್ದಹನುಮೇಗೌಡ, ಕೋಲಾರದಿಂದ ಕೆವಿ ಗೌತಮ್ ಕೊನೆಯ ದಿನದಂದು ನಾಮಪತ್ರ ಸಲ್ಲಿಸಿದ ಪ್ರಮುಖರು. ಮೈಸೂರು ಕ್ಷೇತ್ರದಿಂದ ಒಟ್ಟು 28 ಅಭ್ಯರ್ಥಿ ಗಳು ಕಣದಲ್ಲಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ರೋಡ್ ಶೋ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಎಲ್ಲ ಪ್ರಮುಖ ಅಭ್ಯರ್ಥಿಗಳು ದೇವಾಲಯಗಳಲ್ಲಿ ಪೂಜೆ ಸಲ್ಲಿಸುವುದನ್ನು ಮರೆಯಲಿಲ್ಲ.

ಇನ್ನು 14 ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದ ಕಾವು

ಮೊದಲ ಹಂತದ ಚುನಾವಣೆಗೆ ಒಂದು ಹಂತದ ಪ್ರಕ್ರಿಯೆ ಮುಗಿದಿದ್ದು, ಇಂದಿನಿಂದಲೇ ಚುನಾವಣಾ ಪ್ರಚಾರ ಕಾವೇರಲಿದೆ. ಈಗಾಗಲೇ ಅಭ್ಯರ್ಥಿಗಳು ಸುಡು ಬಿಸಿಲನ್ನೂ ಲೆಕ್ಕಿಸದೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸುತ್ತುತ್ತಿದ್ದಾರೆ. ಒಬ್ಬೊಬ್ಬ ಅಭ್ಯರ್ಥಿ 8 ವಿಧಾನಸಭಾ ಕ್ಷೇತ್ರಗಳನ್ನು ಸುತ್ತಬೇಕಾಗುತ್ತದೆ. ಬೆಂಗಳೂರು ಹೊರತುಪಡಿಸಿದರೆ ಇಡೀ ರಾಜ್ಯದಲ್ಲಿ ಸಾವಿರಾರು ಕಿಮೀ ಸುತ್ತಿ ಪ್ರಚಾರ ನಡೆಸಬೇಕಾಗುತ್ತದೆ. ಅಭ್ಯರ್ಥಿಗಳು ಮುಖಂಡರು ಮತ್ತು ಕಾರ್ಯಕರ್ತರು ಸಾಕಷ್ಟು ಬೆವರು ಹರಿಸುವುದು ಅನಿವಾರ್ಯವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಏರ್ಪಟ್ಟಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಬಂಡಾಯವನ್ನು ಶಮನ ಮಾಡಿಕೊಂಡಿದ್ದರೂ ಒಳ ಏಟುಗಳನ್ನು ನಿರ್ಲಕ್ಷಿಸುವಂತಿಲ್ಲ. ಎರಡೂ ಪಕ್ಷಗಳಿಗೆ ಚುನಾವಣೆ ಫಲಿತಾಂಶ ಮುಖ್ಯವಾಗಿದೆ.

(ವರದಿ- ಎಚ್. ಮಾರುತಿ, ಬೆಂಗಳೂರು)



Whats_app_banner