ಕನ್ನಡ ಸುದ್ದಿ  /  ಕರ್ನಾಟಕ  /  ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ; ಜೂನ್ 4 ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ; ಜೂನ್ 4 ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

ಲೋಕಸಭೆ ಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರಿನ ಮತ ಎಣಿಕೆ ಕೇಂದ್ರಗಳ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ಮಾಡುವುದನ್ನು ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಎಲ್ಲೆಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ಮಾಡುವಂತಿಲ್ಲ ಎಂಬುದರ ವಿವರ ಇಲ್ಲಿದೆ.

ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ; ಜೂನ್ 4 ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ
ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ; ಜೂನ್ 4 ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ (Lok Sabha Election Result 2024) ಕ್ಷಣಗಣನೆ ಆರಂಭವಾಗಿದ್ದು, ನಾಳೆ (ಜೂನ್ 4, ಮಂಗಳವಾರ) ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಅಥವಾ ಕಾಂಗ್ರೆಸ್ (Congress) ಮುಂದಾಳತ್ವದ ಇಂಡಿಯೂ (INDIA) ಮೈತ್ರಿ ಕೂಟ ಎರಡರಲ್ಲಿ ಯಾವುದಕ್ಕೆ ಮತದಾರ ಬೆಂಬಲ ಸೂಚಿಸಿದ್ದಾನೆ ಅನ್ನೋದು ಸ್ಪಷ್ಟವಾಗಲಿದೆ. ಇತ್ತ ಬೆಂಗಳೂರು 3 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗಗಳಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ಮಾಡುವುದನ್ನು ಬೆಂಗಳೂರು ಸಂಚಾರ ಪೊಲೀಸರು ನಿಷೇಧಿಸಿದ್ದಾರೆ. ಅಲ್ಲದೆ, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ಮತ ಎಣಿಕೆ ವಸಂತರನಗರದ ಅರಮನೆ ರಸ್ತೆಯಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಡೆಯಲಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ನಡೆಯಲಿದೆ. ಇನ್ನ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯಲಿದೆ.

ಎಲ್ಲೆಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ?

 • ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್‌ವರೆಗೆ
 • ಮಿನುಗುತಾರೆ ಕಲ್ಪನಾ ಜಂಕ್ಷನ್‌ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್ ವರೆಗೆ

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು

 • ಪ್ಯಾಲೇಸ್ ರಸ್ತೆಯಿಂದ ಎಂಸಿಸಿ ಕಾಲೇಜು, ಕಲ್ಪನಾ ಜಂಕ್ಷನ್ ಮತ್ತು ಚಂದ್ರಿಕಾ ಜಂಕ್ಷನ್ ಕಡೆಗೆ ಸಚರಿಸುವ ವಾಹನಗಳು, ಪ್ಯಾಲೇಸ್ ರಸ್ತೆ-ಎಡ ತಿರುವು-ಚಕ್ರವರ್ತಿ ಲೇಔಟ್-ಮುಖ್ಯ ಪ್ಯಾಲೇಸ್-ವಸಂತನಗರ ಅಂಡರ್ ಬ್ರಿಡ್ಜ್-ಎಡ ತಿರುವುದು-ಎಂವಿ ಜಯರಾಮ ರಸ್ತೆ-ಹಳೆ ಉದಯ ಟಿವಿ ಜಂಕ್ಷನ್-ಎಡ-ತಿರುವು-ಕಂಟೋನ್ಮೆಂಟ್ ರಸ್ತೆ ಮೂಲಕ ಸಂಚರಿಸಬಹುದು.
 • ಬಸವೇಶ್ವರ ಜಂಕ್ಷನ್ ಕಡೆಯಿಂದ ಉದಯ ಟಿವಿ ಜಂಕ್ಷನ್ ಮತ್ತು ಜಯಮಹಲ್ ರಸ್ತೆಯ ಕಡೆಗೆ ಸಂಚರಿಸಲು - ಓಲ್ಡ್ ಹೈಗ್ರೌಂಂಡ್ಸ್ ಜಂಕ್ಷನ್-ಕಲ್ಪನಾ ಜಂಕ್ಷನ್ ಬಲ ತಿರುವು-ಚಂದ್ರಿಕಾ ಜಂಕ್ಷನ್ -ಎಡ ತಿರುವು-ಅಯ್ಯಪ್ಪಸ್ವಾಮಿ ಟೆಂಪಲ್-ಉದಯ ಟಿವಿ ಜಂಕ್ಷನ್ ಕಡೆಯಿಂದ-ಎಡ ತಿರುವು-ಎಂಬಿ ಜಯರಾಂ ರಸ್ತೆ ಅಥವಾ ನೇರ-ಜಯಮಲ್ ರಸ್ತೆ ಅಥವಾ ಬಲ ತಿರುವು ರೈಲ್ವೆ ಸ್ಟೆಷನ್ ರಸ್ತೆ-ಕಂಟೋನ್ಮೆಂಟ್ ಮೂಲಕ ಫ್ರೇಜರ್ ಟೌನ್ ಅಥವಾ ಕ್ವೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ನಡೆಯಲಿದೆ. ಇದಕ್ಕಾಗಿ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಲಾಗಿದೆ.

ವಾಹನ ಪಾರ್ಕಿಂಗ್ ನಿಷೇಧಿಸಿರುವ ರಸ್ತೆಗಳು

 • ವಿಠಲ್ ಮಲ್ಯ ರಸ್ತೆ - ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್ ಜಂಕ್ಷನ್ ವರೆಗೆ
 • ಆರ್‌ಆರ್‌ಎಂಆರ್‌ ರಸ್ತೆ - ರಿಚ್ಮಂಡ್ ಸರ್ಕಲ್‌ದಿಂದ ಹಡ್ಸನ್ ಜಂಕ್ಷನ್ ವರೆಗೆ
 • ಎನ್‌ಆರ್ ರಸ್ತೆ - ಹಡ್ಸನ್ ಸರ್ಕಲ್ ನಿಂದ ಟೌನ್ ಹಾಲ್ ಜಂಕ್ಷನ್ ವರೆಗೆ
 • ಕೆಬಿ ರಸ್ತೆ - ಹೆಚ್‌ಎಲ್‌ಡಿ ಜಂಕ್ಷನ್ ನಿಂದ ಕ್ವೀನ್ಸ್ ಜಂಕ್ಷನ್ ವರೆಗೆ
 • ಕೆಬಿ ರಸ್ತೆ - ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್ ವರೆಗೆ
 • ನೃಪತುಂಗ ರಸ್ತೆ - ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್ ವರೆಗೆ
 • ಕ್ವೀನ್ಸ್ ರಸ್ತೆ - ಬಾಳೇಕುಂದ್ರಿ ಸರ್ಕಲ್‌ನಿಂದ ಸಿಟಿಒ ಸರ್ಕಲ್ ವರೆಗೆ
 • ಸೆಂಟ್ರಲ್ ಸ್ಟ್ರೀಟ್ ರಸ್ತೆ - ಬಿಆರ್‌ವಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ
 • ಎಂಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್ ವರೆಗೆ

ವಾಹನಗಳ ಪಾರ್ಕಿಂಗ್ ಸ್ಥಳ

 • ಸೇಂಟ್ ಜೋಸೆಫ್ ಕಾಲೇಜು ಮೈದಾನ
 • ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯಲಿದೆ. ಫಲಿತಾಂಶ ವೀಕ್ಷಿಸಲು ಹೆಚ್ಚಿನ ಜನರು ಇಲ್ಲೂ ಸೇರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024