ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶ; ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಿದ್ಧತೆ - Lok Sabha Election Result
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶ; ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಿದ್ಧತೆ - Lok Sabha Election Result

ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶ; ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಿದ್ಧತೆ - Lok Sabha Election Result

ಮತ ಮಣಿಕೆ ಕೇಂದ್ರಗಳಲ್ಲಿ ಅಧಿಕಾರಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮ ವಿಭಾಗವನ್ನ ತೆರೆಯಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಚುನಾವಣಾ ಅಧಿಕಾರಿಯೂ ಆಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಬೆಂಗಳೂರು: 18ನೇ ಲೋಕಸಭಾ ಚುನಾವಣೆಯ (Lok Sabha Election 2024) 7 ಹಂತದ ಮತದಾ ಮುಕ್ತವಾಯವಾಗಿದ್ದು, ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಜೂನ್ 4ರ ಮಂಗಳವಾರ ಮತ ಎಣಿಕೆ (Los Sabha Election Result 2024) ನಡೆಯಲಿದೆ. ಇತ್ತ ಬೆಂಗಳೂರಿನ 3 ಕೇಂದ್ರಗಳಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶನಿವಾರ (ಜೂನ್ 1) ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಿಬಿಬಿಎಂಪಿ ಮುಖ್ಯ ಆಯುಕ್ತ (BBMP Chief Commissioner) ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ತುಷಾರ್ ಗಿರಿನಾಥ್ (Tushar Girinath) ಅವರು, ಮತ ಎಣಿಕೆ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ 3 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಕೇಂದ್ರಗಳಲ್ಲಿ ಸಿಸಿಕ್ಯಾಮೆರಾ ಅಳವಡಿಸಲಾಗಿದೆ. ಮತ ಎಣಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ವಿಡಿಯೊ ರೆಕಾರ್ಡ್ ಮಾಡಲಾಗುತ್ತದೆ. ಅಂಚೆ ಮತಗಳ ಎಣಿಕೆ ಸಮಪರ್ಕವಾಗಿ ನಡೆಯಬೇಕೆಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಅಧಿಕಾರಿಗಳಿಗೆ ಕುಡಿಯುವ ನೀರು, ಸರಿಯಾದ ಶೌಚಾಲಯ ವ್ಯವಸ್ಥೆ ಹಾಗೂ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಇದೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮತ ಎಣಿಕೆ ಕೇಂದ್ರದ ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಅನ್ನು ಏರ್ಪಡಿಸಲಾಗಿದೆ ಎಂದು ವಿವರಿಸಿದ್ದಾರೆ.

ಬೆಂಗಳೂರಿನ ಎಲ್ಲೆಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ?

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರ ಮತ ಎಣಿಕೆ ವಸಂತರನಗರದ ಅರಮನೆ ರಸ್ತೆಯಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಡೆಯಲಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ನಡೆಯಲಿದೆ. ಇನ್ನ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯಲಿದೆ. ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ ನಾಳೆ (ಜೂನ್ 3, ಸೋಮವಾರ) ನಡೆಯಲಿದ್ದು, ಇದಕ್ಕೂ ಚುನಾವಣಾ ಅಧಿಕಾರಿಗಳ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮತದಾರರಿಂದ ಮಾಹಿತಿ ಸಂಗ್ರಹಿಸಿ ಎಕ್ಸಿಟ್ ಪೋಲ್ ಫಲಿತಾಂಶವನ್ನು ಹೇಗೆ ಅಂದಾಜಿಸಲಾಗುತ್ತೆ? ಇಲ್ಲಿದೆ ಆಸಕ್ತಿಕರ ಮಾಹಿತಿ

ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ತಲಾ 14 ಕ್ಷೇತ್ರಗಳಂತೆ ಲೋಕಸಭಾ ಚುನಾವಣೆಯ ಮತದಾನ ನಡೆದಿತ್ತು. ದೇಶದಲ್ಲಿ ಏಪ್ರಿಲ್ 19 ರಿಂದ ಜೂನ್ 1ರ ವರೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆದಿತ್ತು. ಜೂನ್ 4ರ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತಗಟ್ಟೆ ಸಮೀಕ್ಷೆಗಳು ಬಹಿರಂಗವಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿವೆ. ಅದೇ ರೀತಿಯ ಈ ಬಾರಿಯೂ ಕೇಂದ್ರದಲ್ಲಿ ಎನ್‌ಡಿಎ 350 ಸೀಟುಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿವೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner