ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆ, ಗೀತಾ ಶಿವರಾಜ್ ಕುಮಾರ್, ಕೆಎಸ್ ಈಶ್ವರಪ್ಪಗೆ ಹಿನ್ನಡೆ
ಕನ್ನಡ ಸುದ್ದಿ  /  ಕರ್ನಾಟಕ  /  ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆ, ಗೀತಾ ಶಿವರಾಜ್ ಕುಮಾರ್, ಕೆಎಸ್ ಈಶ್ವರಪ್ಪಗೆ ಹಿನ್ನಡೆ

ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆ, ಗೀತಾ ಶಿವರಾಜ್ ಕುಮಾರ್, ಕೆಎಸ್ ಈಶ್ವರಪ್ಪಗೆ ಹಿನ್ನಡೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಿನ್ನಡೆ ಅನುಭವಿಸಿದ್ದಾರೆ. ಇದರ ವಿವರ ಇಲ್ಲಿದೆ.

ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆ, ಗೀತಾ ಶಿವರಾಜ್ ಕುಮಾರ್, ಕೆಎಸ್ ಈಶ್ವರಪ್ಪಗೆ ಹಿನ್ನಡೆ
ಶಿವಮೊಗ್ಗ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆ, ಗೀತಾ ಶಿವರಾಜ್ ಕುಮಾರ್, ಕೆಎಸ್ ಈಶ್ವರಪ್ಪಗೆ ಹಿನ್ನಡೆ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shimoga Lok Sabha Constituency) ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಅವರ ಪುತ್ರ ಬಿವೈ ರಾಘವೇಂದ್ರ (BY Raghavendra) ಅವರು ಆರಂಭಿಕ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ತ್ರಿಕೋನ ಸ್ಪರ್ಧೆ ಎನ್ನಲಾಗಿದ್ದ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಮತ್ತು ಬಿಜೆಪಿಯಿಂದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿದ್ದ ಕೆಎಸ್ ಈಶ್ವರಪ್ಪ (KS Eshwarappa) ಅವರು ಕೂಡ ಹಿನ್ನಡೆ ಅನುಭವಿಸಿದ್ದಾರೆ.

ಹಾವೇರಿಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕೆಎಸ್ ಈಶ್ವರಪ್ಪ ಪಕ್ಷದ ನಾಯಕರ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗದಲ್ಲಿ ಸ್ಪರ್ಧಿಸಿದ್ದರು. ಬಿಎಸ್ ಯಡಿಯೂರಪ್ಪ ಕುಟುಂಬದವರನ್ನ ಸೋಲಿಸುವ ಪಣ ತೊಟ್ಟಿದ್ದರು. ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

Whats_app_banner