ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಡಿಕೆ ಸುರೇಶ್ ಸೇರಿ ಘಟಾನುಘಟಿಗಳಿಗೆ ಹಿನ್ನಡೆ -Karnataka Lok Sabha Election Result
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಡಿಕೆ ಸುರೇಶ್ ಸೇರಿ ಘಟಾನುಘಟಿಗಳಿಗೆ ಹಿನ್ನಡೆ -Karnataka Lok Sabha Election Result

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಡಿಕೆ ಸುರೇಶ್ ಸೇರಿ ಘಟಾನುಘಟಿಗಳಿಗೆ ಹಿನ್ನಡೆ -Karnataka Lok Sabha Election Result

Karnataka Lok Sabha Election Result 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರು ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಡಾ ಸಿಎನ್ ಮಂಜುನಾಥ್ ಮುನ್ನಡೆಯಲ್ಲಿದ್ದಾರೆ. ರಾಜ್ಯದಲ್ಲಿ ಹಿನ್ನಡೆ ಅನುಭವಿಸಿದ ಪ್ರಮುಖ ಅಭ್ಯರ್ಥಿಗಳ ವಿವರ ಇಲ್ಲಿದೆ.

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹಿನ್ನಡೆ ಅನುಭವಿಸಿದ್ದಾರೆ.
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹಿನ್ನಡೆ ಅನುಭವಿಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶ (Lok Sabha Election Result 2024) ಪ್ರಗತಿಯಲ್ಲಿದ್ದು, ಕರ್ನಾಟಕದಲ್ಲಿ ಬಿಜೆಪಿ 16 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 9 ಕ್ಷೇತ್ರ ಹಾಗೂ ಜೆಡಿಎಸ್ ತನ್ನ ಮೂರು ಕ್ಷೇತ್ರಗಳನ್ನು ಮುನ್ನಡೆಯಲ್ಲಿದೆ. ಇನ್ನ ಅಭ್ಯರ್ಥಿವಾರು ನೋಡುವುದಾದರೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್ (DK Suresh) 5ನೇ ಸುತ್ತಿನಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಮುನ್ನಡೆ ಕಾಯ್ದುಕೊಂಡಿದ್ದಾರೆ. ಅದೇ ರೀತಿಯಲ್ಲಿ ಈ ಬಾರಿಯ ಗಮನ ಸೆಳೆದಿದ್ದ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಿನ್ನಡೆ ಅನುಭವಿಸಿದ್ದಾರೆ. ಮತ್ತೊಂದೆಡೆ ಕಲಬುರ್ಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹಿನ್ನಡೆಯಲ್ಲಿದ್ದಾರೆ.

ಕರ್ನಾಟಕದಲ್ಲಿ ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ?

  • ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ
  • ಬೆಂಗಳೂರು ಗ್ರಾಮಾಂತ ಕ್ಷೇತ್ರದ 9ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್‌ಗೆ ಹಿನ್ನಡೆ
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌ಗೆ ಹಿನ್ನಡೆ
  • ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಮುನ್ನಡೆ ಪಡೆದಿದ್ದಾರೆ
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮುನ್ನಡೆ
  • ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಮುನ್ನಡೆ ಸಾಧಿಸಿದ್ದಾರೆ

Whats_app_banner