Maha Kumbh: ಬೆಂಗಳೂರು, ಹುಬ್ಬಳ್ಳಿ ಮತ್ತು ಪ್ರಯಾಗ್‌ರಾಜ್ ನಡುವೆ ವಿಶೇಷ ಏಕಮುಖ ರೈಲು ಸಂಚಾರ, ವೇಳಾಪಟ್ಟಿ ವಿವರ
Maha Kumbh Mela 2025: ಉತ್ತರ ಪ್ರದೇಶದಲ್ಲಿ ನಡೆಯಲಿರುವ ಮಹಾ ಕುಂಭಮೇಳದ ಸಿದ್ಧತೆ ಭರದಿಂದ ಸಾಗಿದೆ. ದೇಶ ವಿದೇಶಗಳಿಂದ ಭಕ್ತಜನ ಆಗಮಿಸುವ ಕಾರಣ, ಭಾರತೀಯ ರೈಲ್ವೆ ಕೂಡ ಸಂಚಾರ ಸೇವೆ ಒದಗಿಸುತ್ತಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಪ್ರಯಾಗ್‌ರಾಜ್ ನಡುವೆ ವಿಶೇಷ ಏಕಮುಖ ರೈಲು ಸಂಚಾರ ಪ್ರಕಟಿಸಿದ್ದು, ವೇಳಾಪಟ್ಟಿ ವಿವರ ಹೀಗಿದೆ.
Maha Kumbh Mela 2025: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿಯಲ್ಲಿ ಮಹಾ ಕುಂಭಮೇಳ ನಡೆಯುಲಿದೆ. ಅಲ್ಲಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆಯ ನೈಋತ್ಯ ರೈಲ್ವೆ ವಿಭಾಗವು ಬೆಂಗಳೂರು ಮತ್ತು ಹುಬ್ಬಳ್ಳಿಗಳಿಂದ ಪ್ರಯಾಗ್‌ರಾಜ್‌ಗೆ ವಿಶೇಷ ಏಕಮುಖ ರೈಲು ಸಂಚಾರ ಪ್ರಕಟಿಸಿದೆ. ಮಹಾ ಕುಂಭ ಮೇಳದ ಕಾರಣ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ ಎಂದು ಪಿಆರ್‌ಒ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.
ನಾಳೆ (ಡಿಸೆಂಬರ್ 26) ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು ಸಂಚಾರ
ಎಸ್‌ಎಸ್‌ಎಸ್ ಹುಬ್ಬಳ್ಳಿ - ಪ್ರಯಾಗ್‌ರಾಜ್ ನಡುವೆ ಏಕಮಾರ್ಗ ವಿಶೇಷ ಎಕ್ಸ್‌ಪ್ರೆಸ್ (ರೈಲುಸಂಖ್ಯೆ 07369) ರೈಲು ಹುಬ್ಬಳ್ಳಿಯಿಂದ ಡಿ 26ರಂದು ಬೆಳಗ್ಗೆ 11 ಗಂಟೆಗೆ ಹೊರಟು, ಶನಿವಾರ 3 ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ.
ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ಅಹ್ಮದ ನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬಾನಾಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ರೈಲು ಹನ್ನೊಂದು ಸ್ಲೀಪರ್ ಕ್ಲಾಸ್, ಏಳು ಜನರಲ್ ಮತ್ತು ಎಸ್‌ಎಲ್‌ಆರ್‌ಡಿ ಸೇರಿದಂತೆ ಒಟ್ಟು 20 ಬೋಗಿಗಳನ್ನುಹೊಂದಿರುತ್ತದೆ.
ಮಹಾ ಕುಂಭಮೇಳ: ಬೆಂಗಳೂರಿನಿದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು
ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆ ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ ಎಂದು ವಲಯದ ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ. ಈ ರೈಲು (06577) ಡಿ. 26 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಟು, ಡಿ. 28 ರಂದು 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗಪರು, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯದರ್ಜೆ ಬೋಗಿಗಳು ಮತ್ತು 2 ಎಸ್‌ಎಲ್‌ಆರ್/ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲುಗಳ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್‌ಸೈಟ್ www.enquiry.indianrail.gov.in ಗೆ ಭೇಟಿ ನೀಡಿ, ಅಥವಾ 139 ನಂಬರ್‌ಗೆ ಕರೆ ಮಾಡಿ ಅಥವಾ ಎನ್‌ಟಿಇಎಸ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮಾಹಿತಿ ಪಡೆಯಬಹುದು ಎಂದು ಭಾರತೀಯ ರೈಲ್ವೆಯ ನೈಋತ್ಯ ವಲಯದ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.