ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 6 ಜನರ ದುರ್ಮರಣ
ಕನ್ನಡ ಸುದ್ದಿ  /  ಕರ್ನಾಟಕ  /  ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 6 ಜನರ ದುರ್ಮರಣ

ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 6 ಜನರ ದುರ್ಮರಣ

ಹಾವೇರಿ ಜಿಲ್ಲೆಯ ಮೋಟೆಬೆನ್ನೂರು ಗ್ರಾಮದಲ್ಲಿರುವ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ
ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.ಕುಟುಂಬದ ಸಮೇತರಾಗಿ ಎಂಟು ಮಂದಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೂ ಇಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವೇಗದಲ್ಲಿ ಲಾರಿಗೆ ಡಿಕ್ಕಿ ಹೊಡದಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ನೆರವಾದರು.

ಮೃತಪಟ್ಟವರನ್ನು ಹರಿಹರದ ಫರಾನ್‌ ಇಮಾಮ್‌ವುಲ್ಲಾ. ಉಮ್ಮೀಸಿಫಾ ಅಫ್ರಾಜ್‌, ಅಲಿಷಾ ಅಕ್ಬರ್‌ ನಾರಂಗಿ, ಪುಲ್ಖಾನ್‌ ಅಕ್ಬರ್‌ಆಮಗಿ, ಉಮ್ಮೇರಾ, ಆಸಿಯಾ ಖಲಂದರ್‌ ಹೊನ್ನಾಳಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೇಹಕ್‌ ಹಾಗು ತಸ್ಕೀನ್‌ಎಂಬುವವರಿಗೆ ಗಾಯವಾಗಿದೆ. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿಗಳು ಎನ್ನುವ ಮಾಹಿತಿ ದೊರೆತಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಗಾಯಗೊಂಡವರ ವಿವರ ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರಿನಲ್ಲಿ ರಾಣೆಬೆನ್ನೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು. ಇನ್ನೂ ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಹಾವೇರಿಯಲ್ಲಿ ಚಿಕಿತ್ಸೆ ನೀಡಿ ನಂತರ ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ಪಿ ಅಂಶುಕುಮಾರ ಮಾಹಿತಿ ನೀಡಿದ್ದಾರೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.