ಕನ್ನಡ ಸುದ್ದಿ  /  ಕರ್ನಾಟಕ  /  Mandya Accident: ಮಂಡ್ಯದಲ್ಲಿ ಭೀಕರ ಅಪಘಾತ; ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ದುರ್ಮರಣ

Mandya Accident: ಮಂಡ್ಯದಲ್ಲಿ ಭೀಕರ ಅಪಘಾತ; ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ದುರ್ಮರಣ

ಮಂಡ್ಯದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಮಂಡ್ಯ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ (Mandya Accident) ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ತಿರುಮಲಾಪುರ ಇಂದು (ಜೂನ್ 4, ಭಾನುವಾರ) ಮುಂಜಾನೆ ನಡೆದಿದೆ.

ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ ದೊರೆತಿಲ್ಲ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಮಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರು.

ಇವರ ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ‌ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸಿದೆ. ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರು ಪೊಲೀಸ್ ಠಾಣೆ ಪಿಎಸ್‌ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

IPL_Entry_Point

ವಿಭಾಗ