ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ; ಕರ್ನಾಟಕದ ಕೃಷಿ, ತೋಟಗಾರಿಕೆ ಕಾಲೇಜುಗಳು ಹೊಸ ವಿವಿಗೆ ಸೇರ್ಪಡೆ
Mandya Agriculture University: ಹಳೆ ಮೈಸೂರು ಭಾಗವನ್ನು ಕೇಂದ್ರವಾಗಿಟ್ಟುಕೊಂಡು ಮಂಡ್ಯದಲ್ಲಿ ಸಮಗ್ರ ಕೃಷಿ ವಿವಿ ಸ್ಥಾಪನೆಗೆ ಕರ್ನಾಟಕ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

Mandya Agriculture University: ಕರ್ನಾಟಕದಲ್ಲಿ ಬೆಂಗಳೂರು, ಧಾರವಾಡ, ರಾಯಚೂರು ಹಾಗೂ ಶಿವಮೊಗ್ಗದ ನಂತರ ಸಮಗ್ರ ಕೃಷಿ ವಿಶ್ವವಿದ್ಯಾಲಯ ಮಂಡ್ಯದಲ್ಲಿ ಸ್ಥಾಪನೆಯಾಗಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ ನೂತನ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮೋದನೆ ನೀಡಲಾಗಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮತಿ ನೀಡಲಾಗಿದ್ದು. ಬರುವ ಶೈಕ್ಷಣಿಕ ವರ್ಷದಿಂದಲೇ ಹೊಸ ವಿವಿ ಕಾರ್ಯಾರಂಭ ಮಾಡಲಿದೆ. ಮಂಡ್ಯ ಹೊರ ವಲಯದ ವಿಸಿ ಫಾರಂನಲ್ಲಿಯೇ ನೂತನ ವಿವಿ ಬರಲಿದ್ದು. ಇದು ದಕ್ಷಿಣ ಕರ್ನಾಟಕದ ಪ್ರಮುಖ ಕೃಷಿ. ತೋಟಗಾರಿಕೆ ಕಾಲೇಜುಗಳ ವ್ಯಾಪ್ತಿಯನ್ನು ಹೊಂದಿರಲಿದೆ.
ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ ಸಸ್ಯಾಧಾರಿತ ಕೃಷಿ ವಿಜ್ಞಾನಗಳ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನಗಳು ವಿಶ್ವವಿದ್ಯಾಲಯವು 2013 ರಿಂದ ರೈತರ ಆಶೋತ್ತರಗಳಿಗೆ ಪೂರಕವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲೇ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಅತೀ ಅವಶ್ಯವಾಗಿದ್ದು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ಅನುಮೋದನೆ ದೊರೆತಿದೆ.
ನೂತನವಾಗಿ ಪ್ರಾರಂಭಗೊಳ್ಳುವ ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಗೊಳ್ಳುತ್ತವೆ, ಕಾರಣ ಈ, ಜಿಲ್ಲೆಗಳಲ್ಲಿ ಇರುವ ಯಾವುದೇ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಘಟಕಗಳು ಯಥವತ್ತಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತವೆ.
ವ್ಯಾಪ್ತಿ ಹೇಗಿರಲಿದೆ
ನೂತನವಾಗಿ ಪ್ರಾರಂಭಿಸುವ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ ಕೃಷಿ ಕಾಲೇಜು ಹಾಗೂ ಚಾಮರಾಜನಗರ ಕೃಷಿ ಕಾಲೇಜುಗಳು ಹಾಗೂ ಶಿವಮೊಗ್ಗ ವಿಶ್ವವಿದ್ಯಾಲಯದಿಂದ ಪೊನ್ನಂಪೇಟೆ ಅರಣ್ಯ ಕಾಲೇಜು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮೈಸೂರು ತೋಟಗಾರಿಕೆ ಕಾಲೇಜು ಮಂಡ್ಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತಿವೆ.
ಕರ್ನಾಟಕದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ಥಾಪನೆಯಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತೀ ಸಣ್ಣರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕಿಸಬೇಕೆಂಬ ಮಹತ್ವಕಾಂಕ್ಷಿ ಕನಸನ್ನ ನನಸಾಗಿಸಿದ್ದು ಕೃಷಿ ಸಚಿವ ಚಲುವರಾಯಸ್ವಾಮಿಯವರು, ಅವರ ಆಶಯತದಂತೆಮಂಡ್ಯದಲ್ಲಿ ನೂತನ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ.
ಶಿವಮೊಗ್ಗ ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಮಾದರಿಯಲ್ಲಿ ಮಂಡ್ಯದಲ್ಲಿ ಪ್ರಾರಂಭಿಸುವ ನೂತನ ಕೃಷಿ ವಿಶ್ವವಿದ್ಯಾಲಯವನ್ನು ಕೂಡಾ ಎಲ್ಲಾ ಸಸ್ಯ ಶಾಸ್ತ್ರಗಳ ಸಮನ್ವಯತೆಯನ್ನು ಸಾಧಿಸಿ ಮಂಡ್ಯ ಸಮಗ್ರ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ನೂತನ ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸಬೇಕಾದ ಸಂಸ್ಥೆಗಳು.
ಮಂಡ್ಯ ಜಿಲ್ಲೆಯ ಸಂಸ್ಥೆಗಳು-ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1. ಕೃಷಿ ಕಾಲೇಜು, ಮಂಡ್ಯ
2. ವಲಯ ಕೃಷಿ ಸಂಶೋಧನಾ ಕೇಂದ್ರ, ಮಂಡ್ಯ
3. ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ಮಂಡ್ಯ
4. ಕೃಷಿ ಡಿಪ್ಲೊಮಾ
5. ಬೆಲ್ಲದ ಪಾರ್ಕ್, ಮಂಡ್ಯ
6. ಭತ್ತ
7. ಮೇವು ಬೆಳೆಗಳು ಮತ್ತು ಬಳಕೆ
8. ಕಬ್ಬು
9. ಸಣ್ಣ ರಾಗಿ
10. ಫಾರ್ಮ್ ಇಂಪ್ಲಿಮೆAಟ್ ಮತ್ತು ಮೆಷಿನರಿ
11. ಮೆಕ್ಕೆ ಜೋಳ
12. Water Technology Centre
13. ಬೀಜ ಘಟಕ
14.ಕೃಷಿ ವಿಸ್ತರಣಾ ಶಿಕ್ಷಣ ಘಟಕ
ಮೈಸೂರು ಜಿಲ್ಲೆಯ ಸಂಸ್ಥೆಗಳು-ಬೆAಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1) ಸಾವಯವ ಕೃಷಿ ಸಂಶೋಧನಾ ಕೇಂದ್ರ, ನಾಗೇನಹಳ್ಳಿ, ಮೈಸೂರು
2) ವಿಸ್ತರಣಾ ಶಿಕ್ಷಣ ಘಟಕ, ನಾಗೇನಹಳ್ಳಿ, ಮೈಸೂರು
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1) ತೋಟಗಾರಿಕೆ ಕಾಲೇಜು, ಮೈಸೂರು
2) HREC, ಮೈಸೂರು
ಕೊಡಗು ಜಿಲ್ಲೆಯ ಸಂಸ್ಥೆಗಳು- ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆವಿಜ್ಞಾನಗಳ ವಿಶ್ವವಿದ್ಯಾಲಯದಿಂದ:
1. ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ
2. ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಪೊನ್ನಂಪೇಟೆ
3. ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಮಡಿಕೇರಿ
4. ಭತ್ತ
5. ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ
ಹಾಸನ ಜಿಲ್ಲೆಯ ಸಂಸ್ಥೆಗಳು -ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ:-
1. ಕೃಷಿ ಮಹಾವಿದ್ಯಾಲಯ, ಹಾಸನ, ಕಾರೆಕೆರೆ B.Sc (Hons). ಕೃಷಿ B.Tech (Bio Technology), B.Tech (Food Technology)
2. ಕೃಷಿ ವಿಜ್ಞಾನ ಕೇಂದ್ರ(ಏಗಿಏ), ಕಂದಿ ್ಲ (ಹಾಸನ)
3. ಕೃಷಿ ಸಂಶೋಧನಾ ಕೇಂದ್ರ, ಗುಂಜೇವು, ಹೊಳೆನರಸೀಪುರ ತಾ.
4. ಕೃಷಿ ಸಂಶೋಧನಾ ಕೇಂದ್ರ, ಮಡೆನೂರು (ಹಾಸನ)
5. ಜೈವಿಕ ಇಂಧನ ಸಂಶೋಧನಾ ಕೇಂದ್ರ, ಹಾಸನ
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ
1. AICRP (ತಾಳೆಗಳು), ಅರಸೀಕೆರೆ
2. ತೋಟಗಾರಿಕೆ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ(HREC), ಅರಸೀಕೆರೆ
3. HREC, ಸೋಮನಹಳ್ಳಿ ಕಾವಲ್ (ಹಾಸನ)
4. AICRP (ಆಲೂಗಡ್ಡೆ), ಹಾಸನ
ಚಾಮರಾಜನಗರ ಜಿಲ್ಲೆಯ ಸಂಸ್ಥೆಗಳು- ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ:
1. ಕೃಷಿ ಮಹಾವಿದ್ಯಾಲಯ, ಚಾಮರಾಜನಗರ (ಹರದನಹಳ್ಳಿ)
2. ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ), ಚಾಮರಾಜನಗರ
3. AICRP (ಹತ್ತಿ)
4. AICRP (ಜೋಳ)
5. ಜೈವಿಕ ಇಂಧನ ಮಾಹಿತಿ ಕೇಂದ್ರ, ಚಾಮರಾಜನಗರ
