Mangalore bomb blast: ಎನ್‌ಐಎಯಿಂದ ಮಂಗಳೂರು ಬಾಂಬ್ ಸ್ಫೋಟದ ಮುಂದಿನ ತನಿಖೆ, ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಕಂಕನಾಡಿ ಸಮೀಪ, ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ, ಮುಂದಿನ ತನಿಖೆಯನ್ನು, ಕೇಂದ್ರ ತನಿಖಾ ಸಂಸ್ಥೆ NIAಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿ ಆಜ್ಞೆ ಹೊರಡಿಸಿದೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಕಂಕನಾಡಿ ಸಮೀಪ, ಇತ್ತೀಚೆಗೆ ನಡೆದ ಕುಕ್ಕರ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ, ಮುಂದಿನ ತನಿಖೆಯನ್ನು, ಕೇಂದ್ರ ತನಿಖಾ ಸಂಸ್ಥೆ NIAಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿ ಆಜ್ಞೆ ಹೊರಡಿಸಿದೆ.
ಟ್ರೆಂಡಿಂಗ್ ಸುದ್ದಿ
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆ ಯಲ್ಲಿ, ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, UAPA ಕಾಯಿದೆ ಅನ್ವಯ ತನಿಖೆಯನ್ನು ನಡೆಸಲು, ಶಿಫಾರಸು ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, UAPA ಕಾಯಿದೆ ಅನ್ವಯ ತನಿಖೆಯನ್ನು ನಡೆಸಲು ಶಿಫಾರಸು ಮಾಡಿದೆ.
ಈ ಕುರಿತು ಆರಗ ಜ್ಞಾನೇಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿನ್ನೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದರು. ಇದೀಗ ಇಂದು ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವ ಕುರಿತು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಡಿಜಿಪಿ ಪ್ರವೀಣ್ ಸೂದ್ ಅವರೊಂದಿಗೆ ಭೇಟಿ ನೀಡಿದ ಗೃಹ ಸಚಿವರು, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದರು. ಬಳಿಕ ಆಸ್ಟತೆಗೆ ಭೇಟಿ ನೀಡಿ ರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಅವರ ಆರೋಗ್ಯ ವಿಚಾರಿಸಿದ್ದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಗೃಹ ಸಚಿವರು ನಂತರ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತುಕತೆ ನಡೆಸಿದ್ದರು.
ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದು, ಆರೋಪಿಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿಸಿದ್ದರು. ಈ ಪ್ರಕರಣವು ಭಯೋತ್ಪಾದನಾ ಸಂಘಟನೆಗಳು ಸೇರಿದಂತೆ ಹಲವು ಅಂಶಗಳ ಜತೆ ತಳಕು ಹಾಕಿಕೊಂಡಿದೆ. ಹೀಗಾಗಿ, ಈ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸಲಿದೆ.