ಕನ್ನಡ ಸುದ್ದಿ  /  Karnataka  /  Mangalore Cooker Blast: Nia Raids In Mangalore Pa Engineering College

Mangalore cooker blast: ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ, ಪಿಎ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ವಶಕ್ಕೆ

ಕುಕ್ಕರ್‌ ಬಾಂಬ್‌ ಸ್ಫೋಟದ ಘಟನೆಯ ಆರೋಪಿ ಶಾಕೀರ್‌ ಜತೆ ನಿಕಟ ಸಂಬಂಧ ಹೊಂದಿದ್ದ ಆರೋಪದಲ್ಲಿ ಇಂದು ತನಿಖಾ ಅಧಿಕಾರಿಗಳು ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ, ಪಿಎ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ವಶಕ್ಕೆ
ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ, ಪಿಎ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ವಶಕ್ಕೆ

ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದ ಘಟನೆಯ ಆರೋಪಿ ಶಾಕೀರ್‌ ಜತೆ ನಿಕಟ ಸಂಬಂಧ ಹೊಂದಿದ್ದ ಆರೋಪದಲ್ಲಿ ಇಂದು ತನಿಖಾ ಅಧಿಕಾರಿಗಳು ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ತನಿಖಾ ಸಂಸ್ಥೆ ಅಥವಾ ಮಂಗಳೂರು ಪೊಲೀಸ್‌ ಆಯುಕ್ತರು ಅಧಿಕೃತವಾಗಿ ಪ್ರಕಟಣೆ ಹೊರಡಿಸಿಲ್ಲ. ಆದರೆ, ಬಲ್ಲಮೂಲಗಳು ಎಂಜಿನಿಯರಿಂಗ್‌ ವಿದ್ಯಾರ್ಥಿ ಬಂಧನವನ್ನು ಖಚಿತಪಡಿಸಿವೆ.

ಮಂಗಳೂರಿನ ಪಿಎ ಎಂಜಿನಿಯರಿಂಗ್‌ ಕಾಲೇಜಿನ ಮೇಲೆ ದಾಳಿ ನಡೆಸಿದ ತನಿಖಾ ಅಧಿಕಾರಿಗಳು ಎಂಜಿನಿಯರಿಂಗ್‌ ವಿದ್ಯಾರ್ಥಿಯನ್ನು ವಶಕ್ಕೆ ಪಡೆಸಿದ್ದಾರೆ. ಅಂತಿಮ ವರ್ಷದ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಯನ್ನು ಎನ್‌ಐಎ ವಶಕ್ಕೆ ಪಡೆದಿದೆ ಎನ್ನಲಾಗಿದೆ. ಈತ ಉಡುಪಿ ಜಿಲ್ಲೆಯ ಪೆರಂಪಳ್ಳಿ ನಿವಾಸಿ.

ಮಾಝ್ ಮುನೀರ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ಕೈರಂಗಳ ಗ್ರಾಮದ ನಡುದವಿನ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಶಿವಮೊಗ್ಗದ ಬಾಂಬ್‌ ಟ್ರಯಲ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮುನೀರ್‌ ಮತ್ತು ಕುಕ್ಕರ್‌ ಬಾಂಬ್‌ ಸ್ಪೋಟದ ಆರೋಪಿ ಶಾಕೀರ್‌ ಜತೆ ಈತ ನಿಕಟ ಸಂಬಂಧ ಹೊಂದಿದ್ದಾನೆ ಎನ್ನಲಾಗಿದ್ದು, ಇದೇ ಆರೋಪದಲ್ಲಿ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮಾಝ್‌ ಮನೀರ್‌ ಜತೆ ಕುಕ್ಕರ್‌ ಬ್ಲಾಸ್ಟ್‌ನ ರೂವಾರಿ ಶಾರೀಕ್‌ ಕೂಡ ಇದ್ದ. ಇದೀಗ, ಎಂಜಿನಿಯರಿಂಗ್‌ ವಿದ್ಯಾರ್ಥಿಯನ್ನು ಬಂಧಿಸಿದ್ದು, ತನಿಖೆ ತೀವ್ರಗೊಂಡಿದೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಸಮೀಪ, ನಡೆದ ಕುಕ್ಕರ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು, ಕೇಂದ್ರ ತನಿಖಾ ಸಂಸ್ಥೆ NIAಗೆ ಕಳೆದ ವರ್ಷ ನವೆಂಬರ್‌ನಲ್ಲಿ ವರ್ಗಾಯಿಸಲಾಗಿತ್ತು. ಈ ಕುಕ್ಕರ್‌ ಸ್ಫೋಟ ಘಟನೆಯಿಂದ ಆಟೋ ಚಾಲಕ ಮತ್ತು ಪ್ರಯಾಣಿಕ ಇಬ್ಬರೂ ಗಂಭೀರ ಗಾಯಗೊಂಡಿದ್ದರು.

ಮಂಗಳೂರಿನಲ್ಲಿ ನಡೆದ ಸ್ಫೋಟವು ಆಕಸ್ಮಿಕವಲ್ಲ. ಇದು 'ಭಯೋತ್ಪಾದನಾ ಕೃತ್ಯ' ಎಂದು ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಸ್ಪಷ್ಟಪಡಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದೂ ಪ್ರವೀಣ್‌ ಸೂದ್‌ ಮಾಹಿತಿ ನೀಡಿದ್ದರು.

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆ ಯಲ್ಲಿ, ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, ಕೇಂದ್ರ ತನಿಖಾ ಸಂಸ್ಥೆ NIA ಗೆ ವಹಿಸಲು, ಶಿಫಾರಸು ಮಾಡಿತ್ತು.

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಸಾವರ್ಕರ್‌ ಫೋಟೊ ಹಾಕಿದ ವಿಷಯಕ್ಕೆ ಸಂಬಂಧಪಟ್ಟಂತೆ ಚೂರಿ ಇರಿತ ಘಟನೆ ನಡೆದಿತ್ತು. ಆ ಸಂದರ್ಭದಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಜತೆ ನಂಟು ಹೊಂದಿರುವ ಶಂಕಿತ ಭಯೋತ್ಪಾದನಾ ಘಟಕದ ಕುರಿತು ಮಾಹಿತಿ ಕಲೆ ಹಾಕಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಮುನೀರ್‌ ಅಹಮ್ಮದ್‌ (22) ಮತ್ತು ಸೈಯದ್‌ ಯಾಸಿನ್‌ (21) ಎಂಬವರನ್ನು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವರಿಬ್ಬರಿಗೆ ಬಾಂಬ್‌ ತಯಾರಿಕೆ, ಉಗ್ರ ಚಟುವಟಿಕೆ ಇತ್ಯಾದಿಗಳ ಕುರಿತು ಶಾರೀಕ್‌ ತರಬೇತಿ ನೀಡಿದ್ದನು. ಪೊಲೀಸರು ಆತನ ನಿವಾಸಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಪರಾರಿಯಾಗಿದ್ದ ಎನ್ನಲಾಗಿದೆ.

IPL_Entry_Point