ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ; ಕೂಳೂರು ಸೇತುವೆ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ; ಕೂಳೂರು ಸೇತುವೆ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ; ಕೂಳೂರು ಸೇತುವೆ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ

Mangaluru News: ಮಂಗಳೂರಿನ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ನಾಪತ್ತೆಯಾಗಿದ್ದಾರೆ. ಆದರೆ ಮುಮ್ತಾಜ್ ಕಾರು ಕೂಳೂರಿನ ಸೇತುವೆ ಮೇಲಿದ್ದರೂ ಅವರು ಎಲ್ಲೂ ಕಂಡಿಲ್ಲ. ಹೀಗಾಗಿ, ಅವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ; ಕೂಳೂರು ಸೇತುವೆ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ; ಕೂಳೂರು ಸೇತುವೆ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಆಲಿ (52) ದಿಢೀರ್ ನಾಪತ್ತೆಯಾಗಿದ್ದು, ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ಶನಿವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ಮುಮ್ತಾಜ್ ಆಲಿ ಮನೆಯಿಂದ ಹೊರಟ್ಟಿದ್ದರು. ಆದರೆ ಭಾನುವಾರ ಬೆಳ್ಳಂಬೆಳಗ್ಗೆ ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಮೇಲೆ ಅವರ ಬಿಎಂಡಬ್ಲ್ಯು ಕಾರು ಪತ್ತೆಯಾಗಿದ್ದು, ಪುತ್ರಿಗೆ ಈ ವಿಚಾರ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅವರು ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಎಫ್ಎಸ್‌ಎಲ್ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದಾರೆ‌. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಮ್ತಾಜ್ ಆಲಿಯವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು.

ಹುಬ್ಬಳ್ಳಿ: ದೇವರ ವಿಗ್ರಹ ಭಗ್ನ

ಹುಬ್ಬಳ್ಳಿ: ದೇವರ ವಿಗ್ರಹದ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಘಟನೆ ನಡೆದಿದೆ. ಅಪರ್ಣಾ ಅಪಾರ್ಟೆಂಟ್ ಬಳಿ ದತ್ತಾತ್ರೇಯ ದೇವಸ್ಥಾನದ ದತ್ತಾತ್ರೇಯ ದೇವರ ವಿಗ್ರಹದ 4 ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. ಇನ್ನು ಸುಮಾರು 20 ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ.

ಶನಿವಾರ ರಾತ್ರಿ ನವರಾತ್ರಿ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ದಾಂಡಿಯಾ ನೃತ್ಯ ಮಾಡಿದ್ದರು. ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ನೋಡಿದಾಗ ದೇವರ ಮೂರ್ತಿ ಭಗ್ನಗೊಂಡಿರುವುದು ಬೆಳಕಿಗೆ ಬಂದಿದೆ. ಸದ್ಯ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ದೇವರ ಮೂರ್ತಿ ವಿರೂಪಗೊಳಿಸಿದ ದುರ್ಷರ್ಮಿಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Whats_app_banner