ಕನ್ನಡ ಸುದ್ದಿ  /  Karnataka  /  Mangalore News Fire In Mangalore Apartment Lady Died Suffocation At Toilet 7 People Came Out Another Hospitalized Hsm

Mangalore Crime: ಅಪಾರ್ಟ್ ಮೆಂಟ್ ನಲ್ಲಿ ಕಾಣಿಸಿಕೊಂಡ ಬೆಂಕಿ, ಉಸಿರುಕಟ್ಟಿ ಮಹಿಳೆ ಸಾವು

Mangalore News ಮಂಗಳೂರಿನ ಪ್ರಮುಖ ಅಪಾರ್ಟ್‌ಮೆಂಟ್‌( Mangalore Apartment) ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶೌಚಾಲಯಕ್ಕೆ ಹೋಗಿದ್ದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮಂಗಳೂರು ಅಪಾರ್ಟ್‌ ಮೆಂಟ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮಂಗಳೂರು ಅಪಾರ್ಟ್‌ ಮೆಂಟ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಗಳೂರು: ಮಂಗಳೂರಿನ ಅಪಾರ್ಟ್ಮೆಂಟ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಮಹಿಳೆ ಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಸಹೈನ್ ಮೂಸಬ್ ( 57) ಸಾವನ್ನಪ್ಪಿದ ಮಹಿಳೆ.

ಅತ್ತಾವರದ ಅಪಾರ್ಟ್ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ.

ಅಪಾರ್ಟ್ಮೆಂಟ್ ಬೆಂಕಿ ತಗುಲುವ ವೇಳೆ ಮಹಿಳೆ ಸಹೈನ್ ಮೂಸಬ್ ಬಾತ್ ರೂಂ ಗೆ ತೆರಳಿದ್ದರು. ಅವರು ಬೆಂಕಿಯ ಹೊಗೆಗೆ ಬಾತ್ ರೂಂ ನೊಳಗೆ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಮನೆಯೊಳಗಿದ್ದ ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ

ಬೆಂಕಿ ತಗುಲುವ ಸಂದರ್ಭದಲ್ಲಿ ಮನೆಯಲ್ಲಿ ಒಂಭತ್ತು ಮಂದಿ ಇದ್ದರು. ಬೆಂಕಿ ತಗುಲುವ ವೇಳೆ ಅದರಲ್ಲಿ ಏಳು ಮಂದಿ ಹೊರಬಂದಿದ್ದಾರೆ. ನಂತರ ಇಬ್ಬರು ಒಳಗೆ ಇರುವುದು ತಿಳಿದಿದೆ. ಆದರೆ ಅವರನ್ನು ರಕ್ಷಿಸುವ ವೇಳೆ ಒಬ್ಬರು ಸಾವನ್ನಪ್ಪಿದ್ದು ಮತ್ತೊಬ್ಬರು ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ಅವಘಡದ ಮಾಹಿತಿ ಪಡೆದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಾಹಿತಿ ‌ನೀಡಿದ್ದಾರೆ.

ಮಾದಕ ವಸ್ತು ಹೊಂದಿದ್ದ ಮೂವರ ಬಂಧನ

ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಸುಶ್ರುತಕೃಷ್ಣ ಜೆ.ಕೆ, (32) ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಸೆಬಾಸ್ಟಿಯನ್ (31) ಮತ್ತು ಕೇರಳ ಇಡುಕ್ಕಿ ಜಿಲ್ಲೆಯ ಅನಿಲ್ ಥೋಮಸ್ (31) ಬಂಧಿತರು.

ಪುತ್ತೂರು ತಾಲೂಕು ಉಪ್ಪಿನಂಗಡಿ ರಾ.ಹೆ 75ರಲ್ಲಿ ಸಬ್ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ತಪಾಸಣೆಯ ನಿಮಿತ್ತ ವೆನ್ಯೂ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸುವ ಸಂದರ್ಭ ಘಟನೆ ಬೆಳಕಿಗೆ ಬಂದಿದೆ. ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು ರೂ 45.000 ಮೌಲ್ಯದ 22.4 ಮಿಲಿ ಗ್ರಾಂ ತೂಕದ ಎಂ ಡಿ ಎಂ ಎ ಎಂಬ ಮಾದಕ ವಸ್ತು ಪತ್ತೆಯಾಗಿದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಗಳೊಂದಿಗೆ, ಸದರಿ ಮಾದಕವಸ್ತು, ಆರೋಪಿಗಳ ಬಳಿಯಿದ್ದ 03 ಮೊಬೈಲ್ ಪೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ವಿಭಾಗ