ಕನ್ನಡ ಸುದ್ದಿ  /  ಕರ್ನಾಟಕ  /  Mangalore News: ಸಿಎಂ ಸಿದ್ದರಾಮಯ್ಯ ಆಪ್ತೆಯಾಗಿದ್ದ ಮಂಗಳೂರು ಮಾಜಿ ಮೇಯರ್‌ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

Mangalore News: ಸಿಎಂ ಸಿದ್ದರಾಮಯ್ಯ ಆಪ್ತೆಯಾಗಿದ್ದ ಮಂಗಳೂರು ಮಾಜಿ ಮೇಯರ್‌ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

Untitled Story

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತೆಯಾಗಿದ್ದ ಬಿಲ್ಲವ ಸಮುದಾಯದ ನಾಯಕಿ, ಮಾಜಿ ಮೇಯರ್‌ ಕವಿತಾ ಸನಿಲ್ ಅವರು ಶನಿವಾರ (ಏಪ್ರಿಲ್ 20) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಂಟ್ವಾಳದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿಯಲ್ಲಿ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಮಂಗಳೂರು ಮನಪಾ ಮೇಯರ್ ಆಗಿ ಜನಪ್ರಿಯತೆ ಗಳಿಸಿದ್ದ ಕವಿತಾ ಸನಿಲ್ ಅವರು, ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಕರಾಟೆ ಪಟುವಾಗಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಕರಾಟೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರ ಹೊಟ್ಟೆಗೊಂದು ಗುದ್ದು ಕೊಟ್ಟು ಕವಿತಾ ಸನಿಲ್ ಸುದ್ದಿಯಾಗಿದ್ದರು‌.

ಟ್ರೆಂಡಿಂಗ್​ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ತಾನು ಸಿದ್ಧಾಂತವನ್ನು ಒಪ್ಪಿಕೊಂಡು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆಂದು ತಾನು ಯಾರಲ್ಲೂ ಹೇಳಿಲ್ಲ‌. ಆದರೆ ನನ್ನ ರಾಜಕೀಯ ಗುರು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರಿಗೆ ತಿಳಿಸಿ ಅವರ ಆಶೀರ್ವಾದ ಪಡೆದು ಬಂದಿದ್ದೇನೆ. ಅವರು ತನ್ನ ಭವಿಷ್ಯ ಉಜ್ವಲವಾಗಲಿ ಎಂದು ಆಶೀರ್ವದಿಸಿ ಹರಸಿದ್ದಾರೆ ಎಂದು ಕವಿತಾ ಸನಿಲ್ ಹೇಳಿದರು. ಇವತ್ತು ನಮ್ಮ ಧರ್ಮ ಉಳಿದ ಮೇಲೆ ಜಾತಿ ಉಳೀತದೆ, ಹಿಂದುವಾಗಿ, ಧರ್ಮ ಉಳೀಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ ಎಂದ ಹೇಳಿದ ಕವಿತಾ ಸನಿಲ್, ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿ ಬಿಜೆಪಿ ಸೇರಿರುವುದಾಗಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಲುವಾಗಿ ಬಿಜೆಪಿ ಭರ್ಜರಿ ಪ್ರಚಾರ ಕೈಗೊಂಡಿದೆ. ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿದೆ. ಅಲ್ಲದೆ, ಇಲ್ಲಿ ಯಾರೇ ಗೆದ್ದರೂ ಸಂಸತ್‌ಗೆ ಹೊಸಬರ ಪ್ರವೇಶವಾಗಲಿದೆ. ಮೂರು ಬಾರಿ ಸಂಸದರಾಗಿದ್ದ, ರಾಜ್ಯ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ನೀಡಲಿಲ್ಲ. ಕಟೀಲ್ ಅವರಿಗೆ ಟಿಕೆಟ್ ನೀಡಲು ಭಾರಿ ವಿರೋಧವ್ಯಕ್ತವಾಗಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಕ್ಯಾಪ್ಟನ್ ಬ್ರಿಜೇಟ್ ಚೌಟಾ ಅವರಿಗೆ ಟಿಕೆಟ್ ನೀಡಿದ್ದರೆ, ಕಾಂಗ್ರೆಸ್ ಪದ್ಮರಾಜ್ ಅವರಿಗೆ ಮಣೆ ಹಾಕಿದೆ. ಏಪ್ರಿಲ್ 26 ರಂದು ಇಲ್ಲಿ ಮತದಾನ ನಡೆಯಲಿದೆ.

IPL_Entry_Point