Mangalore Crime:ಆ್ಯಪ್ ನಲ್ಲಿ ಭಾರೀ ಮೊತ್ತದ ವಂಚನೆಗೆ ನೊಂದು ನದಿಗೆ ಹಾರಿ ಬಂಟ್ವಾಳ ಮಹಿಳೆ ಆತ್ಮಹತ್ಯೆ
ಕನ್ನಡ ಸುದ್ದಿ  /  ಕರ್ನಾಟಕ  /  Mangalore Crime:ಆ್ಯಪ್ ನಲ್ಲಿ ಭಾರೀ ಮೊತ್ತದ ವಂಚನೆಗೆ ನೊಂದು ನದಿಗೆ ಹಾರಿ ಬಂಟ್ವಾಳ ಮಹಿಳೆ ಆತ್ಮಹತ್ಯೆ

Mangalore Crime:ಆ್ಯಪ್ ನಲ್ಲಿ ಭಾರೀ ಮೊತ್ತದ ವಂಚನೆಗೆ ನೊಂದು ನದಿಗೆ ಹಾರಿ ಬಂಟ್ವಾಳ ಮಹಿಳೆ ಆತ್ಮಹತ್ಯೆ

Dakshin Kannada crime ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಲ್ಲಿ ಹಣ ಕಳೆದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಂಟ್ವಾಳ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂಟ್ವಾಳ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು: ದಕ್ಣಿಣ ಕನ್ನಡ ಜಿಲ್ಲೆಯ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ

ಜಾನ್ ಸಂತೋಷ್ ಡಿಸೋಜ ಇವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ.

ಇವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.

ಆರ್ಥಿಕ ಸಂಕಷ್ಟ:

ಈಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆ್ಯಪ್ ವೊಂದರಲ್ಲಿ ರೂ 21ಲಕ್ಷ ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು.

ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಇವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು.

ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.

ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸೈ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Whats_app_banner