ಕನ್ನಡ ಸುದ್ದಿ  /  ಕರ್ನಾಟಕ  /  Mangalore News: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ ದಕ್ಷಿಣ ಕನ್ನಡದ ತಾಯಿ, ಮಗ ದುರ್ಮರಣ

Mangalore News: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ ದಕ್ಷಿಣ ಕನ್ನಡದ ತಾಯಿ, ಮಗ ದುರ್ಮರಣ

ಶಿರಾಡಿ ಘಾಟ್‌( Shiradi Ghat) ನಲ್ಲಿ ಸಂಭವಿಸಿದ ಅಪಘಾತದಲ್ಲಿ ದಕ್ಷಿಣ ಕನ್ನಡ ಮೂಲದ ತಾಯಿ ಮಗ ಮೃತಪಟ್ಟಿದ್ದಾರೆ.ವರದಿ: ಹರೀಶ ಮಾಂಬಾಡಿ. ಮಂಗಳೂರು

ಶಿರಾಡಿ ಘಾಟ್‌ನಲ್ಲಿ ಗೋಡೆಗೆ ಗುದ್ದಿದ ಕಾರು.
ಶಿರಾಡಿ ಘಾಟ್‌ನಲ್ಲಿ ಗೋಡೆಗೆ ಗುದ್ದಿದ ಕಾರು.

ಮಂಗಳೂರು : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಪಾಣೆಮಂಗಳೂರು ಬೊಂಡಾಲದ ಶಬ್ಬೀರ್ ಎಂಬವರ ಮಗ ಮೊಹಮ್ಮದ್ ಶಫೀಕ್(20) ಹಾಗೂ ಶಬೀರ್ ಪತ್ನಿ ಸಫಿಯಾ(50) ಸಾವನ್ನಪ್ಪಿದವರು. ಮೃತಪಟ್ಟಿರುವ ಶಫೀಕ್ ಕಾರು ಚಲಾಯಿಸುತ್ತಿದ್ದರು. ಇವರು ಮಂಗಳೂರಿನ ಕೊಣಾಜೆಯ ಪಿ ಎ ಇಂಜಿನಿಯರಿಂಗ್ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ. ಇವರ ತಾಯಿ ಸಫಿಯಾ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ನಿನ್ನೆ ಮದುವೆಯ ಔತಣಕೂಟವಿತ್ತು. ಅದರಲ್ಲಿ ಕಾರಿನಲ್ಲಿದ್ದ ಕುಟುಂಬವೂ ಕೂಡ ಈ ಕೂಟದಲ್ಲಿ ಭಾಗವಹಿಸಿತ್ತು. 12 ಗಂಟೆ ರಾತ್ರಿಗೆ ಬೆಂಗಳೂರಿನಿಂದ ಮಂಗಳೂರಿನ ಮನೆಗೆ ಇನ್ನೋವಾ ಕಾರಿನಲ್ಲಿ ಹೊರಟಿದ್ದರು.

ಶಿರಾಡಿ ಘಾಟಿಯಲ್ಲಿ ಟ್ರಕ್‌ವೊಂದು ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ. ಕಾರು ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿದ್ದ ತಾಯಿ, ಮಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಮೂವರು ಮಕ್ಕಳು ಕೂಡಾ ಇದ್ದು, ಅವರಿಗೂ ಕೂಡ ಗಂಭೀರ ಸ್ವರೂಪದ ಗಾಯಗಳಾಗಿದೆ.

ಎಡಮಂಗಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

ಎಡಮಂಗಲದ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಚ್ಚಜ್ಜೆ ನಿವಾಸಿ ದಿ.ಪುಟ್ಟಣ್ಣ ಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್ (26) ಮೃತರು. ಮೃತರಿಗೆ ತಾಯಿ, ಇಬ್ಬರು ಸಹೋದರರು ಇದ್ದಾರೆ.

ಪ್ರಸನ್ನ ಅವರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ರಾತ್ರಿ ಪಾಳಿನ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಬೆಳಗ್ಗೆ ಸಂಸ್ಥೆಯ ಕೊಠಡಿಯಲ್ಲಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

(ವರದಿ: ಹರೀಶ ಮಾಂಬಾಡಿ. ಮಂಗಳೂರು)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024