ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ, ಇನ್ನಷ್ಟು ಮಂದಿಯ ಹುಡುಕಾಟ
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ, ಇನ್ನಷ್ಟು ಮಂದಿಯ ಹುಡುಕಾಟ

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ, ಇನ್ನಷ್ಟು ಮಂದಿಯ ಹುಡುಕಾಟ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಮಂಗಳೂರು ಬಜ್ಪೆ ಸಮೀಪ ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ. ಪ್ರತೀಕಾರದ ಶಂಕೆ ವ್ಯಕ್ತವಾಗಿದೆ.
ಮಂಗಳೂರು ಬಜ್ಪೆ ಸಮೀಪ ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ. ಪ್ರತೀಕಾರದ ಶಂಕೆ ವ್ಯಕ್ತವಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ

ಬಜಪೆ ನಿವಾಸಿ ಅಬ್ದುಲ್ ರಜಾಕ್ (59) ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಈತನು ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿರುತ್ತಾನೆ ಎಂದು ದೂರಲಾಗಿದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಕೇಸ್; ಬಂಧಿತ ಆರೋಪಿಗಳಿವರು

ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್(39), ಬಜಪೆ ನಿವಾಸಿ ಅಬ್ದುಲ್ ಸಫ್ವಾನ್ (29),, ಕೆಂಜಾರು ನಿವಾಸಿ ಮೊಹಮ್ಮದ್ ಮಝವಿಲ್ (32), ಕಳವಾರು ನಿವಾಸಿ ಕಲಂದರ್ ಶಾಫಿ (31), ಚಿಕ್ಕಮಗಳೂರು ಜಿಲ್ಲೆ ಕಳಸದ ರಂಜಿತ್ (19), ನಾಗರಾಜ್ (20), ಜೋಕಟ್ಟೆಯ ಮೊಹಮ್ಮದ್ ರಿಜ್ವಾನ್ (28), ಆದಿಲ್ , ಮೆಹರೂಫ್ , ಹಾಗೂ ನಿಯಾಜ್ ಈಗಾಗಲೇ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.