ಮಂಗಳೂರು -ಬೆಂಗಳೂರು ಹೆದ್ದಾರಿಯ ಗುಂಡ್ಯದಲ್ಲಿ ಅಪಘಾತ: ನಾಲ್ವರಿಗೆ ಗಾಯ, ಟ್ರಾಫಿಕ್ ಜಾಮ್
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರು -ಬೆಂಗಳೂರು ಹೆದ್ದಾರಿಯ ಗುಂಡ್ಯದಲ್ಲಿ ಅಪಘಾತ: ನಾಲ್ವರಿಗೆ ಗಾಯ, ಟ್ರಾಫಿಕ್ ಜಾಮ್

ಮಂಗಳೂರು -ಬೆಂಗಳೂರು ಹೆದ್ದಾರಿಯ ಗುಂಡ್ಯದಲ್ಲಿ ಅಪಘಾತ: ನಾಲ್ವರಿಗೆ ಗಾಯ, ಟ್ರಾಫಿಕ್ ಜಾಮ್

ಗಂಭೀರ ಗಾಯಗೊಂಡ ಬಸ್ ಹಾಗೂ ಲಾರಿ ಚಾಲಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತ
ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತ

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಸ್ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುಂಡ್ಯದಲ್ಲಿ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ. ಘಟನೆಯಲ್ಲಿ ಚಾಲಕರು ಸೇರಿದಂತೆ ಒಟ್ಟು 4 ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಬಸ್ ಹಾಗೂ ಲಾರಿ ಚಾಲಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in