ಪಿಸ್ತೂಲ್‌ನಿಂದ ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ
ಕನ್ನಡ ಸುದ್ದಿ  /  ಕರ್ನಾಟಕ  /  ಪಿಸ್ತೂಲ್‌ನಿಂದ ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ

ಪಿಸ್ತೂಲ್‌ನಿಂದ ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ

ಪಿಸ್ತೂಲು ಮಿಸ್ ಫೈರ್ ಆಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಗಾಯಗಳಾಗಿವೆ. ಸದ್ಯ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ
ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ

ಮಂಗಳೂರು : ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಗಾಯಗಳಾಗಿವೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅನಂತಾಡಿ ಎಂಬಲ್ಲಿಗೆ ಖಾಸಗಿ ಕೆಲಸಕ್ಕೆಂದು ತೆರಳಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ಇಂದು (ಫೆ.04, ಮಂಗಳವಾರ) ಅವರು ಅನಂತಾಡಿಗೆ ತೆರಳಿದ್ದರು. ಈ ಸಂದರ್ಭ ಹೊಸತಾಗಿ ಖರೀದಿಸಿದ ಪಿಸ್ತೂಲನ್ನು ತನ್ನೊಂದಿಗೆ ಒಯ್ದಿದ್ದರು ಎನ್ನಲಾಗಿದೆ.

ಅನಂತಾಡಿಗೆ ಹೋಗಿದ್ದ ಸಂದರ್ಭದಲ್ಲಿ ತಮ್ಮ ಬಳಿಯಿದ್ದ ಪಿಸ್ತೂಲನ್ನು ಅದುಮಿದ ವೇಳೆ ಈ ಘಟನೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಮಿಸ್ ಫೈರ್ ಆಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೈಯಲ್ಲಿದ್ದ ಪಿಸ್ತೂಲು ಮಿಸ್ ಫೈರ್ ಆದ ವೇಳೆ ತೊಡೆಯ ಭಾಗಕ್ಕೆ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಅವರನ್ನು ಮಂಗಳೂರಿನ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಂಡೇಟು ತಗಲಿದ ವಿಚಾರ ಮಂಗಳವಾರ ಸಂಜೆಯ ವೇಳೆಗೆ ಜಿಲ್ಲಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದೆ. ಹೀಗಾಗಿ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೂ ಕಾರಣವಾಯಿತು. ಈ ಕುರಿತು ರಾತ್ರಿವರೆಗೂ ಸಮೀಪದ ಪೊಲೀಸ್ ಠಾಣೆಗಳಲ್ಲಿ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.

ಬಿ.ಸಿ.ರೋಡಿನಲ್ಲಿ ವಾಸ

ಬಂಟ್ವಾಳದ ಬಿ.ಸಿ.ರೋಡಿನಲ್ಲಿ ವಾಸಿಸುತ್ತಿರುವ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರು, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದು, ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿಯನ್ನೂ ಹೊಂದಿದ್ದಾರೆ.

ಸಣ್ಣ ಗಾಯಗಳಾಗಿವೆ. ಗಂಭೀರ ಸಮಸ್ಯೆ ಇಲ್ಲ ಎಂದು ಚಿತ್ತರಂಜನ್ ಶೆಟ್ಟಿ ಹೇಳಿದ್ದಾರೆ ಎಂಬುದಾಗಿ ಖಾಸಗಿ ಮಾಧ್ಯಮ ವರದಿ ಮಾಡಿದೆ. ಪಡೀಲ್‌ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವರಸಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Whats_app_banner