ಕನ್ನಡ ಸುದ್ದಿ / ಕರ್ನಾಟಕ /
Mangaluru News: ಸಾಮಾಜಿಕ ಜಾಲತಾಣದಲ್ಲಿ ಮೆಕ್ಕಾ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ಬಂಧನ
Mangaluru News: ಮೆಕ್ಕಾ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಿಸಿ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮೆಕ್ಕಾ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ಬಂಧನ
ಮಂಗಳೂರು: ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.
ಆರೋಪಿ ಯುವಕನೋರ್ವ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ವೇದಿಕೆಯಾದ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದರು.
ಇದು ಮುಸ್ಲಿಂ ಸಮುದಾಯದವರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವುದರ ಜತೆಗೆ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವ ಕಾರಣ ಸಂದೇಶವನ್ನು ಸೃಷ್ಟಿಸಿ ರವಾನಿಸಿದ ಯುವಕನ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.