ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಬಡಿದಾಟ; ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯ

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಬಡಿದಾಟ; ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯ

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಬಡಿದಾಟ ನಡೆದ ಘಟನೆ ಜುಲೈ 1 ರಂದು ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿದ್ದು, ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಬಡಿದಾಟ; ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿದೆ.
ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ಬಡಿದಾಟ; ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿದೆ. (HSM)

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಸಂಜೆ ಕೈದಿಗಳ ಮಧ್ಯೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್ (33) ಮುಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರ್ ಮನ್ಸೂರ್ (30) ಗಾಯಗೊಂಡ ಕೈದಿಗಳು.

ಇವರು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 20 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ಟೋಪಿ ನೌಫಲ್ ಮತ್ತು ಇತರ 10 ಸದಸ್ಯರಾದ ಮುಫದ್ ರಿಫಾತ್, ಮುಹಮ್ಮದ್ ರಿಜ್ವಾನ್, ಇಬ್ರಾಹಿಂ ಕಲ್ಲೆಲ್, ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್ , ಜೈನುದ್ದೀನ್ ಮತ್ತು ಇತರಿಂದ ಇವರು ಹಲ್ಲೆಗೊಳಗಾಗಿದ್ದಾರೆ.

ತೀವ್ರ ಹಲ್ಲೆ, ಗಾಯಗೊಂಡ ಕೈದಿಗಳು, ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಸೋಮವಾರ ಸಂಜೆ 6:30 ರಿಂದ 6:45 ರ ನಡುವೆ ಈ ಘಟನೆ ನಡೆದಿದೆ. ಇಬ್ಬರ ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ. ಅಡುಗೆ ಮನೆಯಲ್ಲಿನ ಚೂಪಾದ ವಸ್ತುಗಳಿಂದ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಇಬ್ಬರೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಹಲ್ಲೆ‌ ಮಾಡಿದ ಆರೋಪಿಗಳು ಮತ್ತು ಹಲ್ಲೆಗೊಳಗಾದವರು ಅನೇಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಡೀ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಪಿ.ಎಸ್. ಅಪರಾಧ ಕ್ರಮಾಂಕ 56/2024 ರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಮಂಗಳೂರು ಜೈಲಿನಲ್ಲಿ ಇಂಥ ಘಟನೆ ಹೊಸದೇನಲ್ಲ. ಕೆಲ ವರ್ಷಗಳ ಹಿಂದೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಕುರಿತ ವರದಿಯಾಗಿತ್ತು.

2 ವರ್ಷದ ಹಿಂದಿನ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು, ಆರೋಪಿ ಮತ್ತು ಕಳವುಗೈದ ಸೊತ್ತು‌ ವಶ

ಎರಡು ವರ್ಷಗಳ ಹಿಂದೆ ನಡೆದ ಮನೆಗೆ ನುಗ್ಗಿ ಕಳವು ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಬೇಧಿಸಿದ್ದು, ಆರೋಪಿ ಮತ್ತು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ, ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ಎರಡು ವರ್ಷಗಳ ಹಿಂದೆ ನಡೆದ ಸುಮಾರು ರೂಪಾಯಿ 1,48,000 ಮೌಲ್ಯದ ಚಿನ್ನಾಭರಣಗಳು ಮತ್ತು 30,000/- ನಗದು ಸೇರಿ ಒಟ್ಟು ರೂ 1,78,000/- ಮೌಲ್ಯದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸುತ್ತಿರುವ ಬೆಳ್ಳಾರೆ ಪೊಲೀಸರು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ಬಂಧನ ಮಾಡಲಾಗಿದೆ. ಆರೋಪಿ ಕಳವು ಮಾಡಿದ ಸೊತ್ತು ಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ.

ಕಳವು ಪ್ರಕರಣದ ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ, ರಾಜೇಂದ್ರ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಉಪವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷ ವಿಜಯ ಪ್ರಸಾದ್, ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಬೆಳ್ಳಾರೆ ಎಸ್.ಐ. ಸಂತೋಷ್ ಬಿ ಪಿ, ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂಧಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)