Congress Protest; ಮಂಗಳೂರಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ, ಕಲ್ಲು ತೂರಾಟಕ್ಕೆ ಬಸ್ ಗಾಜು ಪುಡಿ, ಟೈರಿಗೆ ಬೆಂಕಿ-mangaluru news congress protest turned violent a private bus was stoned during the protest near lalbagh junction hsm ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Congress Protest; ಮಂಗಳೂರಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ, ಕಲ್ಲು ತೂರಾಟಕ್ಕೆ ಬಸ್ ಗಾಜು ಪುಡಿ, ಟೈರಿಗೆ ಬೆಂಕಿ

Congress Protest; ಮಂಗಳೂರಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ, ಕಲ್ಲು ತೂರಾಟಕ್ಕೆ ಬಸ್ ಗಾಜು ಪುಡಿ, ಟೈರಿಗೆ ಬೆಂಕಿ

Congress Protest News; ಮುಡಾ ಕೇಸ್‌ನಲ್ಲಿ ಸಿಎಂ ವಿಚಾರಣೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕಲ್ಲು ತೂರಾಟಕ್ಕೆ ಖಾಸಗಿ ಬಸ್‌ನ ಗಾಜು ಪುಡಿಯಾಗಿದೆ. ಟೈರಿಗೆ ಬೆಂಕಿ ಕೂಡ ಹಚ್ಚಿದ ಘಟನೆ ನಡೆದಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಮಂಗಳೂರಿನ ಲಾಲ್‌ಬಾಗ್ ಜಂಕ್ಷನ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಾಗ ಹಾನಿಗೊಳಗಾದ ಖಾಸಗಿಬಸ್‌.
ಮಂಗಳೂರಿನ ಲಾಲ್‌ಬಾಗ್ ಜಂಕ್ಷನ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಾಗ ಹಾನಿಗೊಳಗಾದ ಖಾಸಗಿಬಸ್‌.

ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆ ವಿರುದ್ಧ ಖಂಡನೆ ವ್ಯಕ್ತಪಡಿಸಿ ದಕ್ಷಿಣ ಕನ್ನಡ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ನಡೆದ ಪ್ರತಿಭಟನೆ ಹಿಂಸೆಯ ರೂಪ ಪಡೆದಿದೆ.

ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ, ಪ್ರಕಾಶ್ ರಾಥೋಡ್, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ನೂರಾರು ಕಾಂಗ್ರೆಸ್ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಉದ್ರಿಕ್ತ ಕಾರ್ಯಕರ್ತರು‌ ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ಸಿನ ಮುಂಭಾಗದ ಗಾಜು ಪುಡಿಪುಡಿ ಆಗಿದೆ.

ಜೋಕಟ್ಟೆಯ ಮೌಲಾ ಎಂಬ ಖಾಸಗಿ ಬಸ್‌ಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮುಂಭಾಗದ ಗಾಜನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಸ್‌ನಲ್ಲಿ 10 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಒಬ್ಬ ಪ್ರಯಾಣಿಕೆಯ ಕಣ್ಣಿನ ಬದಿ ಗಾಯವಾಗಿದೆ ಎನ್ನಲಾಗಿದೆ.

ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಟಯರಿಗೆ ಬೆಂಕಿ ಹಚ್ಚಿದ ವೇಳೆ ಪೊಲೀಸರು ಟಯರ್ ಮೇಲೆ ನೀರು ಸಿಂಪಡಿಸಿ ಬೆಂಕಿಯನ್ನು ನಂದಿಸಿದ್ದಾರೆ ಆದರೂ ಬೆಂಕಿಯ ಹೊಗೆ ವ್ಯಾಪಿಸಿದೆ. ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡರು.

ಪಾದಯಾತ್ರೆ, ಬಿಜೆಪಿ, ರಾಜ್ಯಪಾಲರ ವಿರುದ್ಧ ಆಕ್ರೋಶ

ಪ್ರತಿಭಟನೆಗೆ ಮೊದಲು ಮಂಗಳೂರು ಲೇಡಿಹಿಲ್ ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ನೂರಾರು ಪ್ರತಿಭಟನಾಕಾರರು ಲಾಲ್‌ಭಾಗ್‌ನ ಮನಪಾ ಕಚೇರಿ ಮುಂಭಾಗದವರೆಗೆ ಪಾದಯಾತ್ರೆ ನಡೆಸಿದ್ದಾರೆ. ಬಳಿಕ ಮನಪಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಎಂಎಲ್‌ಸಿ ಪ್ರಕಾಶ್ ಮಾತನಾಡಿ, ರಾಜ್ಯಪಾಲರು ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರು ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಸಿಎಂ ಅವರಿಗೆ ಕಳಂಕ ತರಿಸಲು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದವರು ದೂರಿದರು ಹೈಕಮಾಂಡ್ ಸೇರಿದಂತೆ ನಾವೆಲ್ಲರೂ ಸಿದ್ದರಾಮಯ್ಯ ಅವರೊಂದಿಗೆ ಇದ್ದೇವೆ. ರಾಷ್ಟ್ರಪತಿಗಳು ತಕ್ಷಣ ರಾಜ್ಯಪಾಲರನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಿದೆ. ಇಲ್ಲದಿದ್ದಲ್ಲಿ ಪ್ರಾಸಿಕ್ಯೂಷನ್ ಆರ್ಡರ್ ಅನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ರಾಷ್ಟ್ರಪತಿಗಳ ಬಳಿಗೆ ಹೋಗುವ ಅನಿವಾರ್ಯತೆಯಿದೆ ಎಂದು ಒತ್ತಾಯಿಸುತ್ತೇವೆ ಎಂದವರು ಹೇಳಿದರು.

ದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಅಸ್ಥರಗೊಳಿಸುವ ಪ್ರಯತ್ನ ಮಾಡುತ್ತಿದೆ. ರಾಜ್ಯಪಾಲರು, ಸಿಬಿಐ, ಇಡಿ, ಐಟಿಯನ್ನು ದುರುಪಯೋಗ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರಲು ಯತ್ನಿಸುತ್ತದೆ. ಹೈಮಾಂಡ್ ಸೇರಿದಂತೆ ನಾವೆಲ್ಲರೂ ಸಿದ್ದರಾಮಯ್ಯರೊಂದಿಗೆ ಇದ್ದೇವೆ. ರಾಷ್ಟ್ರಪತಿಗಳು ತಕ್ಷಣ ರಾಜ್ಯಪಾಲರನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಿದೆ ಇಲ್ಲದಿದ್ದಲ್ಲ ಪ್ರಾಸಿಕ್ಯುಷನ್ ಆರ್ಡರ್ ಅನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ರಾಷ್ಟ್ರಪತಿಗಳ ಬಳಿಗೆ ಹೋಗುವ ಅನಿವಾರ್ಯತೆಯಿದೆ ಎಂದು ಒತ್ತಾಯಿಸುತ್ತೇವೆ ಎಂದು ರಾಥೋಡ್ ಹೇಳಿದರು.

ಪ್ರಚೋದನಕಾರಿ ಭಾಷಣ – ಬಿಜೆಪಿ ದೂರು

ರಾಜ್ಯಪಾಲರ ವಿರುದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಗಲಬೆ ಸಂಚಿನ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ಆಪಾದಿಸಿದೆ. ಕಾಂಗ್ರೆಸ್ ನ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಆಡಿದ್ದರೆನ್ನಲಾದ ಮಾತು ಪ್ರಚೋದನಕಾರಿಯಾಗಿದೆ ಎಂದು ಆರೋಪಿಸಿ, ಅವರ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಈ ದಿನ ಸಂಜೆ 4.30ಗಂಟೆಗೆ ದೂರು ಸಲ್ಲಿಸಲಿದ್ದು ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವೈ , ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)