Mangaluru News: ಶಿರಾಡಿ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ; ಸಂಚಾರ ನಿರ್ಬಂಧ
ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್‌ವೊಂದು ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಚಾಲಕ ನಿಯಂತ್ರಣ ತಪ್ಪಿದ ಟ್ಯಾಂಕರ್ ವಾಹನ ಪಲ್ಟಿಯಾಗಿತ್ತು. ಈ ರಸ್ತೆಯಲ್ಲಿ ಸಂಚರಿಸುವವರಿಗೆ ಬದಲಿ ರಸ್ತೆ ಕಲ್ಪಿಸಲಾಗಿದೆ.

ಮಂಗಳೂರು: ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್ ರಸ್ತೆ ಎನ್‌ಎಚ್-75 ಇಲ್ಲಿ ಗ್ಯಾಸ್ ಟ್ಯಾಂಕರ್‌ವೊಂದು ಪಲ್ಟಿಯಾಗಿ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿರುವ ಘಟನೆ ನಡೆದಿದೆ. ಇದರಿಂದ ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಮಾತ್ರವಲ್ಲ ವಾಹನ ಸವಾರರಿಗೆ ಬದಲಿ ರಸ್ತೆಯ ವ್ಯವಸ್ಥೆ ಕಲ್ಪಿಸಲಾಗಿದೆ.
ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಘಟನೆ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್‌ವೊಂದು ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.
ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ.
ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.
