ಕನ್ನಡ ಸುದ್ದಿ  /  ಕರ್ನಾಟಕ  /  Mangaluru News: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ

Mangaluru News: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ

ಮಂಗಳೂರು ಪೊಲೀಸರು ಕೊಲೆಗೆ ಸಂಚು ರೂಪಿಸುತ್ತಿದ್ದ ಆರೋಪಿಗಳಿಂದ 2–ತಲವಾರು, 1–ಚೂರಿ, 2–ಮೊಬೈಲ್‌ ಹಾಗೂ ಮಹೇಂದ್ರ ಪಿಕ್‌ ಅಪ್‌ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಂಗಳೂರು ಸಿಸಿಬಿ ಕಾರ್ಯಾಚರಣೆ; ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ
ಮಂಗಳೂರು ಸಿಸಿಬಿ ಕಾರ್ಯಾಚರಣೆ; ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಸೆರೆ

ಮಂಗಳೂರು: ಮಂಗಳೂರು ನಗರದ ಅಡ್ಯಾರ್ ಪರಿಸರದಲ್ಲಿ ಕೊಲೆಗೆ ಸಂಚು ರೂಪಿಸಿದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಸ್ಲೀಮ್ ಅಲಿಯಾಸ್‌ ಗರುಡ ತಸ್ಲೀಮ್(34), ವಾಸ: ಜೋಹರಾ ಮಂಜೀಲ್, ಅಮ್ಮೆಮ್ಮಾರ್, ರೈಲ್ವೆ ಬ್ರಿಡ್ಜ್ ಹತ್ತಿರ, ಫರಂಗಿಪೇಟೆ, ಬಂಟ್ವಾಳ ತಾಲೂಕು. ಹೈದರಾಲಿ ಅಲಿಯಾಸ್‌ ಹೈದು(26), ವಾಸ: ಅಮ್ಮೆಮ್ಮಾರ್ ಮಸೀದಿ ಬಳಿ, ಅಮ್ಮಮ್ಮಾರ್ ಗ್ರಾಮ, ಪರಂಗಿಪೇಟೆ, ಬಂಟ್ವಾಳ ತಾಲೂಕು. ಇಬ್ಬರೂ ಬಂಧಿತ ಆರೋಪಿಗಳು. ಅವರ ವಶದಿಂದ ತಲವಾರುಗಳು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000 ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಮತ್ತೊಂದು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳನ್ನು ಹೊಂದಿಕೊಂಡು ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಇವರಿಬ್ಬರನ್ನೂ ಬಂಧಿಸಿದೆ.

ಜಾನುವಾರು ಅಕ್ರಮ ಸಾಗಾಟದ ಗ್ಯಾಂಗ್ ವಾರ್?

ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆಯಾಗಿತ್ತು.

ಟ್ರೆಂಡಿಂಗ್​ ಸುದ್ದಿ

ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಈ ವಿಚಾರದ ಕುರಿತು ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಈ ವಿಚಾರದಲ್ಲಿ ಎರಡು ತಂಡಗಳ ನಡುವೆ ಆಗಾಗ್ಗೆ ಸಣ್ಣ ಸಣ್ಣ ಮಾತುಕತೆಗಳಾಗಿದ್ದು, ಅದು ತಾರಕಕ್ಕೇರಿದೆ.

ತಸ್ಲೀಮ್ ಹಾಗೂ ಆತನ ಸಹಚರರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ಮಾರಕಾಯುಧಗಳಾದ ತಲವಾರುಗಳೊಂದಿಗೆ ಹೊಂಚು ಹಾಕುತ್ತಿದ್ದ ಮಾಹಿತಿಯನ್ನು ಪಡೆದು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ಸಿಸಿಬಿ ಪೊಲೀಸರು ವಿಫಲಗೊಳಿಸಿದ್ದಾರೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ವಿರುದ್ಧ ಹಲವು ಪ್ರಕರಣ

ಆರೋಪಿಗಳ ಪೈಕಿ ತಸ್ಲೀಮ್ ಅಲಿಯಾಸ್‌ ಗರುಡ ತಸ್ಲೀಮ್ ಎಂಬಾತನು ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ಸುಮಾರು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದನು.

ಇನ್ನೋರ್ವ ಆರೋಪಿ ಹೈದರಾಲಿ ಅಲಿಯಾಸ್‌ ಹೈದು ಎಂಬಾತನು ಈ ಹಿಂದೆ ಮೂಡಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಆರೋಪಿಗಳ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.