Mangaluru News: ಕಾಲೇಜು ವಿದ್ಯಾರ್ಥಿಯೇ ಡ್ರಗ್ಸ್ ಮಾರಾಟಗಾರ, ವಿದ್ಯಾರ್ಥಿಗಳು, ಸಾರ್ವಜನಿಕರೇ ಗ್ರಾಹಕರು: ಮಂಗಳೂರು ಸಿಸಿಬಿ ಕಾರ್ಯಾಚರಣೆ
ಮಂಗಳೂರು ಬೆಂದೂರ್ ವೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಯಿಂದ ಡ್ರಗ್ಸ್ ಮಾರಾಟ ಮಾಡುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ನಗರದ ಖಾಸಗಿ ಕಾಲೇಜುವೊಂದರ ಪದವಿ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಯಿತು.
ಮಂಗಳೂರು: ಮಂಗಳೂರು ಸಿಟಿ ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು, ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.
ಸುಳ್ಯದ ಅಜ್ಜಾವರ ನಿವಾಸಿಯಾಗಿರುವ ಲುಕುಮಾನುಲ್ ಹಕೀಮ್ , ನಗರದ ಖಾಸಗಿ ಕಾಲೇಜುವೊಂದರ ಪದವಿ ವ್ಯಾಸಂಗ ಮಾಡುತ್ತಿದ್ದ ಯುವಕ. ಮಾದಕ ವಸ್ತು ಮಾರಾಟದಲ್ಲಿ ಅನೇಕರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಆಗರ್ ವಾಲ್ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದೆ.
ಮಂಗಳೂರು ಬೆಂದೂರ್ ವೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಯಿಂದ ಡ್ರಗ್ಸ್ ಮಾರಾಟ ಮಾಡುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ನಗರದ ಖಾಸಗಿ ಕಾಲೇಜುವೊಂದರ ಪದವಿ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಯಿತು.
ಡ್ರಗ್ಸ್ ಫ್ರೀ ಅಭಿಯಾನದಡಿಯಲ್ಲಿ ಮಂಗಳೂರು ಸಿಸಿಬಿ ಪೋಲೀಸರಿಂದ ವಿಶೇಷ ಕಾರ್ಯಚರಣೆ ನಡೆಸುತ್ತಿದ್ದಾರೆ. ಈ ಸಂದರ್ಭ ಎಂ ಡಿ ಎಂ ಎ ಮಾದಕ ವಸ್ತುವನ್ನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ ಆರೋಪಿಯಿಂದ 25 ಗ್ರಾಂ ತೂಕದ 1,25,000 ರೂ ಮೌಲ್ಯದ MDMA ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಷನಿಸ್ಟ್ ಜೊತೆಗೆ ಅಸಭ್ಯ ವರ್ತನೆ - ಯುವಕ ಅರೆಸ್ಟ್
ತನ್ನ ತಾಯಿಯನ್ನು ಚಿಕಿತ್ಸೆ ಗೆ ಕರೆದುಕೊಂಡು ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಪ್ರಕರಣದ ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶಿಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.25ರಂದು ಸಂಜೆ ಆಶಿಕ್ ತನ್ನ ತಾಯಿಯನ್ನು ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಈ ವೇಳೆ ಆಸ್ಪತ್ರೆಯ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳಾ ಸಿಬ್ಬಂದಿಯು ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಆರೋಪಿ ಆಶೀಕ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ದಾಂಧಲೆ ನಡೆಸಿದ್ದಾನೆ. ಮಹಿಳೆಯನ್ನು ದೂಡಿ ಮೈಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದು ಈ ಬಗ್ಗೆ ಸಂತ್ರಸ್ತೆ ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರ ಎದುರೇ ಮಗನ ಹತ್ಯೆ ಮಾಡಲು ಯತ್ನಿಸಿದ ತಂದೆ
ಮದ್ಯ ಸೇವಿಸಿದ ವ್ಯಕ್ತಿಯೋರ್ವ ಪೊಲೀಸರ ಎದುರಲ್ಲಿಯೇ ತನ್ನ ಮಗುವನ್ನು ಎತ್ತಿ ನೆಲಕ್ಕೆ ಎಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಹೇಶ್ ಎಂಬಾತ ಆರೋಪಿ ಈತ ಹಲವು ಸಮಯದಿಂದ ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಮಾತ್ರವಲ್ಲದೇ ಪತ್ನಿ ಮತ್ತು ಮಕ್ಕಳನ್ನು ಬೆಂಕಿ ಹಚ್ಚಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಪತ್ನಿ ಪಕ್ಕದಲ್ಲಿರುವ ಕದ್ರಿ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್ ತನ್ನ 6 ವರ್ಷದ ಗಂಡು ಮತ್ತು ಒಂದೂವರೆ ವರ್ಷದ ಹೆಣ್ಣುಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದ. ಪೊಲೀಸರು ವಿಚಾರಿಸುತ್ತಿದ್ದಾಗ ಮಗುವನ್ನು ನೀಡದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತ ಮಗುವನ್ನು ಎಸೆದಿದ್ದಾನೆ. ಸದ್ಯ ಪೊಲೀಸರು ಈತನ ವಿಚಾರಣೆ ನಡೆಸುತ್ತಿದ್ದಾರೆ.
(ವರದಿ: ಹರೀಶ್ ಮಾಂಬಾಡಿ)