ಕನ್ನಡ ಸುದ್ದಿ  /  Karnataka  /  Mangaluru News Vande Bharat Express Train To Mangaluru By The End Of October Railway News In Kannada Arc

Mangaluru News: ವಂದೇ ಭಾರತ್ ರೈಲು ಕೊನೆಗೂ ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿಗೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಭರವಸೆಯನ್ನು ನೀಡಿದ್ದಾರೆ.

ವಂದೇ ಭಾರತ್ ರೈಲು ಕೊನೆಗೂ ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿಗೆ
ವಂದೇ ಭಾರತ್ ರೈಲು ಕೊನೆಗೂ ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿಗೆ

ಮಂಗಳೂರು: ಕೊನೆಗೂ ಬಹುನಿರೀಕ್ಷಿತ ವಂದೇ ಭಾರತ್ ರೈಲು ಮಂಗಳೂರಿಗೆ ಬರಲಿದೆ. ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ ಅಂತ್ಯದೊಳಗೆ ಆರಂಭಗೊಳ್ಳಲಿರುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇದರೊಂದಿಗೆ ಕರಾವಳಿ ಭಾಗದಲ್ಲಿ ವಂದೇ ಭಾರತ್ ರೈಲು ಆರಂಭಗೊಳ್ಳಬೇಕು ಎಂಬ ರೈಲ್ವೆ ಯಾತ್ರಿಕರ ಕನಸು ನನಸಾಗಲಿದೆ. ಇದನ್ನು ಸ್ವತಃ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ ನೀಡಿದ್ದಾರೆ. ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಭರವಸೆಯನ್ನು ನೀಡಿದ್ದಾರೆ.

ರೈಲ್ವೆ ಸಚಿವರು ನಳಿನ್ ಅವರಿಗೆ ಹೇಳಿದ್ದೇನು?

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ.

ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ನಳಿನ್ ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.

ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆಯನ್ನು ಸಚಿವರು ನೀಡಿದ್ದಾರೆ.

ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬ ನಿವಾರಣೆ ಬಗ್ಗೆ ಸಂಸದರು ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.

ಮಂಗಳೂರಿಗೆ ಸನಿಹದಲ್ಲಿರುವ ಕಾಸರಗೋಡಿನಿಂದ ತಿರುವನಂತಪುರಕ್ಕೆ ವಂದೇ ಭಾರತ್ ರೈಲು ಓಡಾಟ ನಡೆಸುತ್ತಿದ್ದರೆ, ಮಂಗಳೂರಿಗೆ ರೈಲು ಬಾರದೇ ಇರುವ ಕುರಿತು ಕರಾವಳಿ ಭಾಗದ ಜನರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಸಂಸದ ನಳಿನ್ ಮತ್ತೊಮ್ಮೆ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದು, ಅಕ್ಟೋಬರ್ ಅಂತ್ಯದೊಳಗೆ ಬರಲಿದೆ ಎಂದು ಸಂಸದರು ಭರವಸೆ ನೀಡಿದ್ದಾರೆ.

ಸೆ.24ರಂದು ಕಾಸರಗೋಡಿಗೆ ಮತ್ತೊಂದು ವಂದೇ ಭಾರತ್

ಸೆ.24ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಒಂಭತ್ತು ವಂದೇ ಭಾರತ್ ವಿಶೇಷ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಕೇರಳದ ಕಾಸರಗೋಡಿನಿಂದ ತಿರುವನಂತಪುರಕ್ಕೆ ಮತ್ತೊಂದು ವಂದೇ ಭಾರತ್ ರೈಲು ಆರಂಭಗೊಳ್ಳಲಿದೆ. ತಮಿಳುನಾಡಿನ ಚೆನ್ನೈ, ಪ.ಬಂಗಾಲದ ಹೌರಾಗೆ ಎರಡು ರೈಲು, ಕೇರಳ, ಒಡಿಶಾ, ತೆಲಂಗಾಣ, ರಾಜಸ್ಥಾನ, ಗುಜರಾತ್ ಗಳಿಗೆ ಒಂದು ರೈಲು ನೀಡಲಾಗಿದೆ. ಇದರಲ್ಲಿ ಎಂಟು ಕೋಚ್ ಗಳು ಇರಲಿವೆ.ಕೇರಳದಲ್ಲಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ಈಗಾಗಲೇ ಒಂದು ರೈಲು ಓಡಾಟ ನಡೆಸುತ್ತಿದೆ. ಇದೀಗ ಮತ್ತೊಂದು ರೈಲು.