ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು, ಸಂಚುಕೋರನಿಗೆ ನೆರವಾದ ಆರೋಪಿ
ಕನ್ನಡ ಸುದ್ದಿ  /  ಕರ್ನಾಟಕ  /  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು, ಸಂಚುಕೋರನಿಗೆ ನೆರವಾದ ಆರೋಪಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು, ಸಂಚುಕೋರನಿಗೆ ನೆರವಾದ ಆರೋಪಿ

Praveen Nettaru Murder: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಕೇಸ್‌ನ ಮುಖ್ಯ ಸಂಚುಕೋರ ಪರಾರಿಯಾಗಲು ನೆರವಾಗಿದ್ದ ಆರೋಪ ಆತನ ಮೇಲಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು. (ಕಡತ ಚಿತ್ರ)
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು. (ಕಡತ ಚಿತ್ರ)

Praveen Nettaru Murder: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2022ರ ಜುಲೈನಲ್ಲಿ ನಡೆದ ಹತ್ಯೆ ಪ್ರಕರಣ ಇದಾಗಿದ್ದು, ಕೇಸ್‌ನ 21ನೇ ಆರೋಪಿಯನ್ನು ಈಗ ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ (ಜನವರಿ 21) ಹೇಳಿದೆ. ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಹತ್ಯೆ ಮಾಡಿದ್ದರು.

ಪ್ರಕರಣದ 21ನೇ ಆರೋಪಿ ಯಾರು

ಎನ್‌ಐಎ ತಂಡ ಬಂಧಿಸಿರುವ ಆರೋಪಿಯ ಹೆಸರು ಅತೀಕ್ ಅಹ್ಮದ್‌. ಆತ ಪ್ರವೀಣ್ ಹತ್ಯೆ ಪ್ರಕರಣದ ಮುಖ್ಯ ಸಂಚುಕೋರ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್‌ ಪರಾರಿಯಾಗುವುದಕ್ಕೆ ನೆರವಾದ ಆರೋಪ ಎದುರಿಸುತ್ತಿದ್ದಾನೆ.

ಜನರಲ್ಲಿ ಭಯವುಂಟುಮಾಡಲು ಮತ್ತು ಕೋಮು ಗಲಭೆಯನ್ನು ಪ್ರಚೋದಿಸಲು ಪಿಎಫ್‌ಐನ ಅಜೆಂಡಾದ ಭಾಗವಾಗಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಮುಸ್ತಫಾ ಪೈಚಾರ್ ಯೋಜಿಸಿ ಕಾರ್ಯಗತಗೊಳಿಸಿದ್ದ. 2024ರ ಮೇ ತಿಂಗಳಲ್ಲಿ ಮುಸ್ತಫಾ ಪೈಚಾರ್‌ನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ವೇಳೆ ಆತ ನೀಡಿದ ಹೇಳಿಕೆ ಅನೇಕರನ್ನು ಪ್ರಕರಣದಲ್ಲಿ ಸಿಲುಕಿಸಿದೆ. ಅದರಂತೆ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಪರವಾಗಿ ಕೆಲಸಮಾಡುತ್ತಿದ್ದ ಅತೀಕ್‌ ಅಹಮದ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮುಖ್ಯ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ. ಅಷ್ಟೇ ಅಲ್ಲ, ಹತ್ಯೆಯ ಬಳಿಕ ಮುಸ್ತಫಾ ಫೈಚಾರ್ ಚೆನ್ನೈಗೆ ಪರಾರಿಯಾಗಲು ನೆರವಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ

ಪಿಎಫ್‌ಐ ಕಾರ್ಯಕರ್ತರು 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದರು. ಪ್ರಕರಣದ ಗಾಂಭೀರ್ಯ ಅರಿತ ಕರ್ನಾಟಕ ಸರ್ಕಾರ, ಈ ಕೇಸ್‌ ಅನ್ನು ಎನ್‌ಐಎಗೆ ವಹಿಸಿತು. ಎನ್‌ಐಎ 2022ರ ಆಗಸ್ಟ್ 4 ರಂದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಕೇಸ್‌ನಲ್ಲಿ ಇದುವರೆಗೆ 23 ಆರೋಪಿಗಳ ವಿರುದ್ಧ ಎನ್‌ಐಎ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊಹಮ್ಮದ್ ಶಿಯಾ, ಅಬ್ದುಲ್ ಬಶೀರ್, ರಿಯಾಜ್, ಮುಸ್ತಫಾ ಪೈಚಾರ್, ಮಸೂದ್ ಕೆಎ, ಕೊಡಾಜೆ ಮೊಹಮ್ಮದ್ ಶೆರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ, ಇಸ್ಮಾಯಿಲ್ ಶಾಫಿ, ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ, ಮಹಮ್ಮದ್ ಶಫೀಕ್, ಉಮ್ಮರ್ ಫಾರೂಕ್, ಅಬ್ದುಲ್ ಕಬೀರ್, ಮುಹಮ್ಮದ್ ಇಬ್ರಾಹಿಂ, ಸೈನುಲ್ ಅಬಿದ್ ವೈ, ಶೇಖ್ ಸದ್ದಾಂ ಹುಸೇನ್, ಜಾಕಿಯಾರ್ ಎ, ಎನ್ ಅಬ್ದುಲ್ ಹಾರಿಸ್ ಮತ್ತು ತುಫೈಲ್ ಎಂ ಹೆಚ್ ಹೆಸರುಗಳು ಚಾರ್ಜ್ ಶೀಟ್‌ನಲ್ಲಿದೆ. ಇನ್ನೂ ಆರು ಆರೋಪಿಗಳಿಗಾಗಿ ಶೋಧ ನಡೆದಿದೆ.

ಸಮಾಜದಲ್ಲಿ ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಮತ್ತು 2047ರ ವೇಳೆಗೆ ದೇಶದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿಯನ್ನು ಪಿಎಫ್‌ಐ ಹೊಂದಿದೆ. ಇದಕ್ಕಾಗಿ ಪಿಎಫ್‌ಐ ತನ್ನ ಶತ್ರುಗಳನ್ನು ಮತ್ತು ಉದ್ದೇಶಿತ ಹತ್ಯೆಗಳನ್ನು ನಡೆಸಲು ಸೇವಾ ತಂಡ(Service Teams)ಗಳು ಅಥವಾ ಕಿಲ್ಲರ್ ಸ್ಕ್ವಾಡ್‌ಗಳು ಎಂಬ ರಹಸ್ಯ ತಂಡಗಳನ್ನು ರಚಿಸಿದೆ ಎಂಬ ಅಂಶಗಳು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಎನ್‌ಐಎ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗಲೇ ನಡೆದಿದ್ದು, ಪಕ್ಷದ ಕಾರ್ಯಕರ್ತರಿಂದಲೇ ಭಾರಿ ವಿರೋಧವನ್ನು ಪಕ್ಷ ಸಂಘಟನೆ ಮತ್ತು ಆಡಳಿತ ಎದುರಿಸಬೇಕಾಯಿತು. ಅಂದು ಬಿಜೆಪಿ ರಾಜ್ಯ ಅಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೂ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ತಾಗಿತ್ತು.

Whats_app_banner