Mangaluru Weather: ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಹವಾಮಾನ ಪಲ್ಲಟ ಸಾಧ್ಯತೆ; ರಣಬಿಸಿಲಿಗೆ ತಂಪೆರೆಯುವುದೇ ಮಳೆ-mangaluru weather updates coastal karnataka rain forecast for next 2 3 days imd predictions hsm ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Mangaluru Weather: ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಹವಾಮಾನ ಪಲ್ಲಟ ಸಾಧ್ಯತೆ; ರಣಬಿಸಿಲಿಗೆ ತಂಪೆರೆಯುವುದೇ ಮಳೆ

Mangaluru Weather: ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಹವಾಮಾನ ಪಲ್ಲಟ ಸಾಧ್ಯತೆ; ರಣಬಿಸಿಲಿಗೆ ತಂಪೆರೆಯುವುದೇ ಮಳೆ

ರಣಬಿಸಿಲಿಗೆ ಕಂಗಾಲಾಗಿರುವ ಕರಾವಳಿ ಜಿಲ್ಲೆಗಳಿಗೆ ತಂಪೆರೆಯುವುದೆ ಮಳೆ ಎಂಬ ನಿರೀಕ್ಷೆ ಜನರದ್ದು. ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಹವಾಮಾನ ಪಲ್ಲಟ ಸಾಧ್ಯತೆ ಕುರಿತು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರ ವಿವರ ಇಲ್ಲಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಹವಾಮಾನ ಪಲ್ಲಟ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಣಬಿಸಿಲಿಗೆ ತಂಪೆರೆಯುವುದೇ ಮಳೆ ಎಂಬ ನಿರೀಕ್ಷೆ ಹರಡಿದೆ.
ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಹವಾಮಾನ ಪಲ್ಲಟ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಣಬಿಸಿಲಿಗೆ ತಂಪೆರೆಯುವುದೇ ಮಳೆ ಎಂಬ ನಿರೀಕ್ಷೆ ಹರಡಿದೆ.

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸಹಿತ ಕರ್ನಾಟಕ ಕರಾವಳಿಯಲ್ಲಿ ಉರಿಸೆಖೆ ಇದ್ದು, ಬಿಸಿಲ ಬೇಗೆಗೆ ಜನತೆ ತತ್ತರಿಸುತ್ತಿದ್ದಾರೆ. ಮಾರ್ಚ್ ತಿಂಗಳಲ್ಲೇ ರಣಬಿಸಿಲಿದ್ದರೆ, ಇನ್ನು ಏಪ್ರಿಲ್ ಗೆ ಹೇಗೋ ಎಂಬ ಸ್ಥಿತಿ. ಈ ನಡುವೆ ಹವಾಮಾನ ಇಲಾಖೆ ತಂಪುಪ್ರಿಯರಿಗೆ ಸಿಹಿಸುದ್ದಿ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಾರ್ಚ್ 20ರಿಂದ ಮಳೆಹನಿಗಳು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರಸ್ತುತ ಹವಾಮಾನ ಪರಿಸ್ಥಿತಿಗಳ ಅನ್ವಯ, 2024ರ 21ನೇ ಮಾರ್ಚ್ ರಿಂದ 24ನೇ ಮಾರ್ಚ್ ಅವಧಿಯಲ್ಲಿ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆಯಿಂದ ಎರಡು- ಮೂರು ದಿನ ವಿವಿಧೆಡೆ ಮಳೆ ನಿರೀಕ್ಷೆ

ಮಾರ್ಚ್‌ 20 ರ ಬಳಿಕ 23ರ ವರೆಗೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್‌ 22 ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ (ಗಾಳಿಯ ವೇಗ ಗಂಟೆಗೆ30-40 ಕಿಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸಹಿತ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರಂದು ಮಳೆಯಾಗುವ ಮುನ್ಸೂಚನೆ ಇದ್ದರೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಬುಧವಾರ (ಮಾರ್ಚ್ 20)ದಿಂದ ಭಾನುವಾರದವರೆಗೆ ಸಣ್ಣ ಪ್ರಮಾಣದ ಮಳೆಯಾಗಬಹುದು. ಆದಾಗ್ಯೂ ಬಹುತೇಕ ಕಡೆಗಳಲ್ಲಿ ಉಷ್ಣಾಂಶದಲ್ಲಿ ಹೆಚ್ಚಳ ಇರಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಸ್ತುತ ಹವಾಮಾನ ಪರಿಸ್ಥಿತಿಗಳ ಅನ್ವಯ, ಮಾರ್ಚ್ 21 ರಿಂದ 24 ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವರದಿ ಹೇಳಿದೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

(This copy first appeared in Hindustan Times Kannada website. To read more like this please logon to kannada.hindustantimes.com)

mysore-dasara_Entry_Point