Onion Price Down: ಈಗ ಈರುಳ್ಳಿ ದರ ಇಳಿಸಿದ ಕೇಂದ್ರ ಸರ್ಕಾರ, 35 ಕೆಜಿ ದರದಲ್ಲಿ ಚಿಲ್ಲರೆ ಮಾರಾಟ, ಬೆಂಗಳೂರಿನಲ್ಲಿ ಮುಂದಿನ ವಾರ ಲಭ್ಯ-market news government of india reduces onion price for 35 minister joshi launches vehicles next week in bangalore prh ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Onion Price Down: ಈಗ ಈರುಳ್ಳಿ ದರ ಇಳಿಸಿದ ಕೇಂದ್ರ ಸರ್ಕಾರ, 35 ಕೆಜಿ ದರದಲ್ಲಿ ಚಿಲ್ಲರೆ ಮಾರಾಟ, ಬೆಂಗಳೂರಿನಲ್ಲಿ ಮುಂದಿನ ವಾರ ಲಭ್ಯ

Onion Price Down: ಈಗ ಈರುಳ್ಳಿ ದರ ಇಳಿಸಿದ ಕೇಂದ್ರ ಸರ್ಕಾರ, 35 ಕೆಜಿ ದರದಲ್ಲಿ ಚಿಲ್ಲರೆ ಮಾರಾಟ, ಬೆಂಗಳೂರಿನಲ್ಲಿ ಮುಂದಿನ ವಾರ ಲಭ್ಯ

Onion News ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸಿಹಿ ಸುದ್ದಿ.ಕೇಂದ್ರ ಸರ್ಕಾರ ಈಗ ಈರುಳ್ಳಿ( Onion Rates)ಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆ ಮಾಡಿದೆ.ವರದಿ: ಪ್ರಸನ್ನಕುಮಾರ್‌ ಹಿರೇಮಠ ಹುಬ್ಬಳ್ಳಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಈರುಳ್ಳಿ ಸಂಚಾರಿ ವಾಹನಕ್ಕೆ ಚಾಲನೆ ನೀಡಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಈರುಳ್ಳಿ ಸಂಚಾರಿ ವಾಹನಕ್ಕೆ ಚಾಲನೆ ನೀಡಿದರು.

ದೆಹಲಿ: ಅಗತ್ಯ ವಸ್ತುಗಳ ಬೆಲೆ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಂದಿಲ್ಲೊಂದು ಕ್ರಮ ತೆಗೆದುಕೊಳ್ಳುತ್ತಲೇ ಇದೆ. ಗೋಧಿಹಿಟ್ಟು, ಅಕ್ಕಿ, ಟೊಮೆಟೋ ನಂತರ ಈಗ ಈರುಳ್ಳಿ ಸರದಿ. ಭಾರತದ ಬಹುತೇಕ ಮಾರುಕಟ್ಟೆಯಲ್ಲಿ ಕಣ್ಣೀರು ತರಿಸುವಂತಿರುವ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದ್ದು, ಗ್ರಾಹಕರ ಕೈಗೆಟುಕುವಂತೆ ಕೇವಲ 35 ರೂ. ಕೆಜಿ ದರದಲ್ಲಿ ವಿತರಣೆ ಆರಂಭಿಸಿದೆ. ದೆಹಲಿಯಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಅವರು 35 ರೂ. ಕೆಜಿ ಬೆಲೆಯಲ್ಲಿ ಮಾರಾಟ ಮಾಡುವ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಹಾಗು ಮುಂಬೈನಲ್ಲಿ ಸದ್ಯ 35 ರೂ. ಕೆಜಿ ಬೆಲೆಗೆ ಈರುಳ್ಳಿ ಸಿಗಲಿದೆ. ಈ ನಗರಗಳಲ್ಲಿ ಸಂಚಾರಿ ವಾಹನಗಳ ಮೂಲಕ ಈರುಳ್ಳಿ ಮಾರಾಟ ನಡೆದಿದೆ. ಇದಾದ ನಂತರ ಬೆಂಗಳೂರು ಸಹಿತ ಇತರೆ ನಗರ, ಪಟ್ಟಣಗಳಿಗೂ ಇದು ವಿಸ್ತರಣೆಯಾಗಲಿದೆ. ಇದಕ್ಕಾಗಿ ಬೆಂಗಳೂರು ಜನ ಒಂದು ವಾರ ಕಾಯಬೇಕು.

ದೇಶದಲ್ಲಿ ಆಹಾರ ಹಣದುಬ್ಬರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ. ಅಂತೆಯೇ ಈಗ ತೀವ್ರ ಏರಿಕೆ ಕಂಡ ಈರುಳ್ಳಿ ದರ ಇಳಿಕೆಗೆ ಅಗತ್ಯ ಕ್ರಮ ಕೈಗೊಂಡಿದೆ.ದೇಶಾದ್ಯಂತ 35 ರೂ. ದರದಲ್ಲಿ ವಿತರಣೆಗೆ ಕ್ರಮ: ತೀವ್ರ ಬೆಲೆ ಏರಿಕೆಯಲ್ಲಿರುವ ಇರುಳಿಯನ್ನು ದೇಶಾದ್ಯಂತ 35 ರೂ. ದರದಲ್ಲಿ ಚಿಲ್ಲರೆ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಈರುಳ್ಳಿ ಮಾರಾಟದ ಸಂಚಾರಿ ವಾಹನಗಳಿಗೆ ಚಾಲನೆ ನೀಡಲಾಗಿದೆ ಎನ್ನುವುದು ಸಚಿವ ಪ್ರಲ್ಹಾದ ಜೋಶಿ ವಿವರಣೆ.

ದೆಹಲಿಯ ಎನ್‌ ಸಿಆರ್ ಮತ್ತು ಮುಂಬೈನಲ್ಲಿ ಈರುಳ್ಳಿ ಚಿಲ್ಲರೆ ವಿತರಣೆ ಆರಂಭವಾಗಿದೆ. ಮುಂದಿನ ವಾರದಲ್ಲಿ ಬೆಂಗಳೂರು ಸೇರಿದಂತೆ ಕೋಲ್ಕತ್ತಾ, ಗುವಾಹಟಿ, ಹೈದರಾಬಾದ್, ಚೆನ್ನೈ, ಅಹಮದಾಬಾದ್, ರಾಯಪುರ ಮತ್ತು ಭುವನೇಶ್ವರದಲ್ಲಿ ಕಡಿಮೆ ಬೆಲೆಯಲ್ಲಿ ಈರುಳ್ಳಿ ವಿತರಣೆ ಶುರುವಾಗಲಿದೆ. ಸೆಪ್ಟೆಂಬರ್ 3ನೇ ವಾರದಲ್ಲಿ ದೇಶಾದ್ಯಂತ ವಿತರಣೆ ಅಗಲಿದೆ ಎಂದು ತಿಳಿಸಿದರು.

4.7 ಲಕ್ಷ ಟನ್ ಈರುಳ್ಳಿ ಲಭ್ಯ

ಹಿಂಗಾರು ಹಂಗಾಮಿನಲ್ಲಿ ಬೆಳೆದ 4.7 ಲಕ್ಷ ಟನ್ ಈರುಳ್ಳಿ ಸದ್ಯ ನಮ್ಮಲ್ಲಿ ಸಂಗ್ರಹವಿದ್ದು, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ ಸಿಸಿಎಫ್‌) ಮತ್ತು ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ (ಎನ್‌ ಎಎಫ್‌ ಇಡಿ) ಮಳಿಗೆಗಳು ಮತ್ತು ಸಂಚಾರಿ ವಾಹನಗಳು, ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ಕೇಂದ್ರೀಯ ಭಂಡಾರ ಮತ್ತು ಸಫಲ್ ಮಳಿಗೆಗಳ ಮೂಲಕ ಚಿಲ್ಲರೆ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎನ್ನುತ್ತಾರೆ ಸಚಿವ ಜೋಶಿ.

ಈರುಳ್ಳಿ ಬೆಲೆ ಏರಿಳಿತಕ್ಕೆ ಅನುಗುಣವಾಗಿ ಈರುಳ್ಳಿಯ ಪ್ರಮಾಣ ಮತ್ತು ವಿಲೇವಾರಿ ಮಾರ್ಗಗಳನ್ನು ವಿಸ್ತರಿಸಲಾಗುತ್ತದೆ. ಗ್ರಾಹಕ ವ್ಯವಹಾರಗಳ ಇಲಾಖೆ, ದೇಶಾದ್ಯಂತ 550 ಕೇಂದ್ರಗಳು ವರದಿ ಮಾಡಿದ ಈರುಳ್ಳಿ ಸೇರಿದಂತೆ 38 ಸರಕುಗಳ ದೈನಂದಿನ ಬೆಲೆಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಕಳೆದ ವರ್ಷ 3 ಲಕ್ಷ ಟನ್ ಈರುಳ್ಳಿ ಖರೀದಿಸಿದ್ದರೆ, ಈ ವರ್ಷ ಹಿಂಗಾರು ಹಂಗಾಮಿನಲ್ಲಿ ಅದಕ್ಕಿಂತ ಹೆಚ್ಚು 4.7 ಲಕ್ಷ ಟನ್‌ ಖರೀದಿಸಿ ಬೆಲೆ ಸ್ಥಿರೀಕರಿಸಿರುವುದು ಗಮನಾರ್ಹ.

ರೈತರು, ವರ್ತಕರಲ್ಲಿದೆ ಇನ್ನೂ 38 ಲಕ್ಷ ಟನ್

ಭಾರತದಲ್ಲಿ ರೈತರು ಮತ್ತು ವರ್ತಕರಲ್ಲಿ ಸುಮಾರು 38 ಲಕ್ಷ ಟನ್ ಈರುಳ್ಳಿ ಇನ್ನೂ ಸಂಗ್ರಹವಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ಈರುಳ್ಳಿಯ ಲಭ್ಯತೆ ಮತ್ತು ಬೆಲೆಗಳ ಮೇಲೆ ತೀವ್ರ ನಿಗಾ ಇರಿಸಿದೆ. ಈರುಳ್ಳಿಯ ಕೊರತೆಯೇನೂ ಇಲ್ಲ.

ಇದರಿಂದಲೇ ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ರೈತರು ಮತ್ತು ರೈತ ಸಂಘಗಳಿಂದ ಈರುಳ್ಳಿ ಖರೀದಿಸಲಾಗಿದೆ. ಈರುಳ್ಳಿ ಮಾರಾಟ ಮಾಡಿದ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮೂಲಕ ಹಣ ಪಾವತಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಈರುಳ್ಳಿ ಬೆಳೆದ ರೈತರಿಗೆ ಉತ್ತಮ ಬೆಲೆ ಸಿಕ್ಕಿದೆ. ಕಳೆದ ವರ್ಷದ 693 ರಿಂದ 1,205 ರೂ. ಕ್ವಿಂಟಲ್ ನಂತೆ ಖರೀದಿಸಿದ್ದರೆ ಈ ಬಾರಿ 1,230 ರಿಂದ 2,578 ರೂ. ದರ ನೀಡಿ ಖರೀದಿಸಲಾಗಿದೆ.

ಈ ಬಾರಿ ಮುಂಗಾರಿನಲ್ಲಿ ಈರುಳ್ಳಿ ಬಿತ್ತನೆ ಪ್ರದೇಶ ಹೆಚ್ಚಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.102ರಷ್ಟು ಹೆಚ್ಚು ಬಿತ್ತನೆಯಾಗಿದೆ. ಹೀಗಾಗಿ ಮುಂಬರುವ ತಿಂಗಳುಗಳಲ್ಲಿ ಈರುಳ್ಳಿ ಲಭ್ಯತೆ ಮತ್ತು ಬೆಲೆ ಸಕಾರಾತ್ಮಕವಾಗಿದೆ, ಕೃಷಿ ಇಲಾಖೆ ಮಾಹಿತಿಯಂತೆ 2024ರ ಆಗಸ್ಟ್ 26 ರವರೆಗೆ 2.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಖಾರಿಫ್ ಈರುಳ್ಳಿ ಬಿತ್ತನೆ ಮಾಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1.94 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು ಎನ್ನುವುದು ಜೋಶಿ ಅವರ ವಿವರಣೆ.

(ವರದಿ: ಪ್ರಸನ್ನಕುಮಾರ್‌ ಹಿರೇಮಠ, ಹುಬ್ಬಳ್ಳಿ)