ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆ, 1 ಲಕ್ಷ ರೂವರೆಗೂ ವೈದ್ಯಕೀಯ ಪರಿಹಾರ, ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆ, 1 ಲಕ್ಷ ರೂವರೆಗೂ ವೈದ್ಯಕೀಯ ಪರಿಹಾರ, ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆ, 1 ಲಕ್ಷ ರೂವರೆಗೂ ವೈದ್ಯಕೀಯ ಪರಿಹಾರ, ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕರ್ನಾಟಕದಲ್ಲಿ ವಿಕಲಚೇತನರಿಗಾಗಿ 3 ಪ್ರಮುಖ ಯೋಜನೆಗಳು ಚಾಲ್ತಿಯಲ್ಲಿವೆ. ಇದರಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂಪಾಯಿವರೆಗೂ ವೈದ್ಯಕೀಯ ಪರಿಹಾರ ಒದಗಿಸಲಾಗುತ್ತಿದೆ ಎಂದು ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ ಒದಗಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನ ಮಂಡಲಕ್ಕೆ ತಿಳಿಸಿದರು.
ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ ಒದಗಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನ ಮಂಡಲಕ್ಕೆ ತಿಳಿಸಿದರು.

ಬೆಂಗಳೂರು: ಕರ್ನಾಟಕದಲ್ಲಿ ವಿಕಲಚೇತನರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿ ವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಅವರು ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ವಿಕಲಚೇತನರಿಗಾಗಿ ಮೂರು ಪ್ರಮುಖ ಯೋಜನೆ

ವಿಧಾನಪರಿಷತ್ ಕಲಾಪದಲ್ಲಿ ಶುಕ್ರವಾರ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ತಿಳಿಸಿದರು.

1) ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ: ಈ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ.

2) ನಿರಾಮಯ ಆರೋಗ್ಯ ವಿಮಾ ಯೋಜನೆ: ಪ್ರಸ್ತುತ ಕರ್ನಾಟಕದಲ್ಲಿ ನ್ಯಾಷನಲ್ ಟ್ರಸ್ಟ್ ಆಕ್ಟ್ ಅಡಿಯಲ್ಲಿ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟಂಬದ ವಿಕಲಚೇತನ ವ್ಯಕ್ತಿ ಒಂದು ಬಾರಿ ವಾರ್ಷಿಕ 250 ರೂಪಾಯಿಗಳನ್ನು ಸರ್ಕಾರದಿಂದ ವಿಮಾ ಕಂತಾಗಿ ಪಾವತಿಸಿ ಪ್ರತಿವರ್ಷ ಒಂದು ಲಕ್ಷಗಳವರೆಗೆ ಉಚಿತವಾಗಿ ವೈದ್ಯಕಕೀಯ ಸೌಲಭ್ಯ ಪಡೆಯಬಹುದು ಎಂದು ವಿವರಿಸಿದರು.

3) ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಯೋಜನೆ ಅಡಿಯಲ್ಲಿ ಕಡ್ಡಾಯ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ, ಗುರುತ ಹಚ್ಚಿದ ತೀವ್ರತರವಾದ/ಗಂಭೀರ ಸ್ವರೂಪದ ಶ್ರವಣದೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನಗಳನ್ನು ನೀಡುತ್ತಿದೆ. ಜೊತೆಗೆ ಟ್ರಯಲ್ ಆಡಿಟರಿವರ್ಬಲ್ ಥೆರಪಿಯನ್ನು ಒದಗಿಸಲಾಗುತ್ತಿದೆ.

ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಯಲ್ಲಿ 665 ಫಲಾನುಭವಿಗಳು

ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ ಪ್ರಕಾರ, ವಿವಿಧ ಥೆರಪಿ ಚಿಕತ್ಸೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದ್ದು, 2016-17 ರಿಂದ ಇಲ್ಲಿಯವರೆಗೆ 665 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಜೊತೆಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ 4 ಬಗೆಯ ವಿಕಲಚೇತನರಿಗೆ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ಗರಿಷ್ಠ 1 ಲಕ್ಷದವರೆಗೆ ಶಸ್ತ್ರಚಿಕಿತ್ಸೆ ಹಾಗೂ ವೈದ್ಯಕೀಯ ವೆಚ್ಚಗಳನ್ನು ಕೇಂದ್ರ ಸರ್ಕಾರ ಗುರುತಿಸಿರುವ ಸಂಸ್ಥೆಯ ಮುಖಾಂತರ ಪಡೆಯುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನ ಪರಿಷತ್‌ ಕಲಾಪದಲ್ಲಿ ತಿಳಿಸಿದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner